ಮಾಜಿ ಸಂಸದ ಎಲ್​ಆರ್​ ಶಿವರಾಮೇಗೌಡ ಕುಟುಂಬಕ್ಕೆ ಶುರುವಾಯ್ತು ಸಿಬಿಐ ಕಂಟಕ

ಮಾಜಿ ಮಂಡ್ಯ ಲೋಕಸಭಾ ಸದಸ್ಯ, ಬಿಜೆಪಿ ಮುಖಂಡ ಎಲ್​ಆರ್ ಶಿವರಾಮೇಗೌಡ ಅವರ ವಿರುದ್ಧ ಸಿಬಿಐ ಎಫ್​ಐಆರ್ ದಾಖಸಿಕೊಂಡಿದೆ. ಬ್ಯಾಂಕ್​ವೊಂದಕ್ಕೆ ಸುಳ್ಳು ದಾಖಲೆಗಳನ್ನು ನೀಡಿ ಸಾಲ ಪಡೆದು ವಂಚಿಸಿರುವ ಆರೋಪದ ಮೇಲೆ ಶಿವರಾಮೇಗೌಡ ಹಾಗೂ ಅವರ ಕುಟುಂಬದ ಸದಸ್ಯರ ಮೇಲೆ ಎಫ್​ಐಆರ್ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಮಾಜಿ ಸಂಸದ ಎಲ್​ಆರ್​ ಶಿವರಾಮೇಗೌಡ ಕುಟುಂಬಕ್ಕೆ ಶುರುವಾಯ್ತು ಸಿಬಿಐ ಕಂಟಕ
ಎಲ್​ಆರ್ ಶಿವರಾಮೇಗೌಡ
Follow us
Jagadish PB
| Updated By: ರಮೇಶ್ ಬಿ. ಜವಳಗೇರಾ

Updated on:Dec 04, 2023 | 8:19 AM

ಬೆಂಗಳೂರು, (ಡಿಸೆಂಬರ್ 04): ನಕಲಿ ದಾಖಲೆಗಳನ್ಉ ಸೃಷ್ಟಿಸಿ ಪಂಜಾಬ್​ ನ್ಯಾಷನಲ್​ ಬ್ಯಾಂಕ್​​ನಿಂದ 12.48 ಕೋಟಿ ರೂಪಾಯಿ ಸಾಲ ಪಡೆದು ವಂಚಿಸಿರುವ ಆರೋಪದ ಮೇಲೆ  ಮಾಜಿ ಸಂಸದ ಎಲ್​.ಆರ್. ಶಿವರಾಮೇಗೌಡ (Mandya Ex MP LR shivaramegowda )ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಸಿಬಿಐ (CBI) ಎಫ್​ಐಆರ್ ದಾಖಲಿಸಿದೆ.

ಬೆಂಗಳೂರಿನ ಎಂ.ಜಿ.ರಸ್ತೆ ಶಾಖೆಯ ಪಂಜಾಬ್ ನ್ಯಾಷನಲ್​ ಬ್ಯಾಂಕ್​ ಸಹಾಯಕ ಪ್ರಧಾನ ವ್ಯವಸ್ಥಾಪಕ ಎಸ್​ಡಿ ಮೋದಿ ಸಲ್ಲಿಸಿರುವ ದೂರಿನ ಮೇರೆಗೆ ರಾಯಲ್ ಕಂಕರ್ಡ್ ಎಜುಕೇಷನಲ್ ಟ್ರಸ್ಟ್ , ಶಿವರಾಮೇಗೌಡ, ಅವರ ಪತ್ನಿ ಸುಧಾ ಶಿವರಾಮೇಗೌಡ, ಮಗ ಚೇತನ್ ಗೌಡ, ಸೊಸೆ ಎಲ್​ಎಸ್ ಭವ್ಯಾ ಗೌಡ ಹಾಗೂ ಬ್ಯಾಂಕ್​ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಸಿಬಿಐ ಎಫ್​ಐಆರ್ ದಾಖಲಿಸಿಕೊಂಡಿದೆ.

ಇದನ್ನೂ ಓದಿ: ಕಾರು ಅಪಘಾತ: ಭವಾನಿ ರೇವಣ್ಣ ವಿಡಿಯೋ ವೈರಲ್, ಬೈಕ್​ ಸವಾರನ ವಿರುದ್ಧ ಕೇಸ್ ಬುಕ್

ಆರೋಪಿಗಳು ಒಳಸಂಚು ರೂಪಿಸಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅವುಗಳ ಮೂಲಕ ಪಂಜಾಬ್ ನ್ಯಾಷನಲ್ ಬ್ಯಾಂಕ್​​ನಿಂದ ಸಾಲ ಪಡೆದಿದ್ದಾರೆ. ಸಾಲದ ಹಣವನ್ನು ಬೇರೆ ಬ್ಯಾಂಕ್ ಖಾತೆಗಳಿವೆ ವರ್ಗಾವಣೆ ಮಾಡಿಕೊಂಡು ಅನ್ಯ ಉದ್ದೇಶಕ್ಕೆ ಬಳಸಿದ್ದಾರೆ. ನಂತರ ಸಾಲ ಮರುಪಾವತಿ ಮಾಡದೇ ವಂಚಿಸಿದ್ದಾರೆ ಎಂದು ಎಸ್​.ಡಿ.ಮೋದಿ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನವೆಂಬರ್ 7ರಂದು ಬ್ಯಾಂಕ್ ಸಹಾಯಕ ಪ್ರಧಾನ ವ್ಯವಸ್ಥಾಪಕ ದೂರು ಸಲ್ಲಿಸಿದ್ದು, ನವೆಂಬರ್ 21 ರಂದು ಶಿವರಾಮೇಗೌಡ ಸೇರಿದಂತೆ ಎಲ್ಲಾ ಆರೋಪಿಗಳ ವಿರುದ್ಧ ಸಿಬಿಐ, ಐಪಿಸಿ 120b, 420, 468, 471 ಹಾಗೂ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲು ದಾಖಲಿಸಿಕೊಂಡಿದ್ದು, ಇನ್ಸ್​ಪೆಕ್ಟರ್​ ಸಿದ್ದಪ್ಪ ಡಿ.ಜಿ. ಈ ಪ್ರಕರಣದ ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:16 am, Mon, 4 December 23

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್