ಬೆಂಗಳೂರು, (ಡಿಸೆಂಬರ್ 04): ನಕಲಿ ದಾಖಲೆಗಳನ್ಉ ಸೃಷ್ಟಿಸಿ ಪಂಜಾಬ್ ನ್ಯಾಷನಲ್ ಬ್ಯಾಂಕ್ನಿಂದ 12.48 ಕೋಟಿ ರೂಪಾಯಿ ಸಾಲ ಪಡೆದು ವಂಚಿಸಿರುವ ಆರೋಪದ ಮೇಲೆ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ (Mandya Ex MP LR shivaramegowda )ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಸಿಬಿಐ (CBI) ಎಫ್ಐಆರ್ ದಾಖಲಿಸಿದೆ.
ಬೆಂಗಳೂರಿನ ಎಂ.ಜಿ.ರಸ್ತೆ ಶಾಖೆಯ ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಹಾಯಕ ಪ್ರಧಾನ ವ್ಯವಸ್ಥಾಪಕ ಎಸ್ಡಿ ಮೋದಿ ಸಲ್ಲಿಸಿರುವ ದೂರಿನ ಮೇರೆಗೆ ರಾಯಲ್ ಕಂಕರ್ಡ್ ಎಜುಕೇಷನಲ್ ಟ್ರಸ್ಟ್ , ಶಿವರಾಮೇಗೌಡ, ಅವರ ಪತ್ನಿ ಸುಧಾ ಶಿವರಾಮೇಗೌಡ, ಮಗ ಚೇತನ್ ಗೌಡ, ಸೊಸೆ ಎಲ್ಎಸ್ ಭವ್ಯಾ ಗೌಡ ಹಾಗೂ ಬ್ಯಾಂಕ್ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿದೆ.
ಇದನ್ನೂ ಓದಿ: ಕಾರು ಅಪಘಾತ: ಭವಾನಿ ರೇವಣ್ಣ ವಿಡಿಯೋ ವೈರಲ್, ಬೈಕ್ ಸವಾರನ ವಿರುದ್ಧ ಕೇಸ್ ಬುಕ್
ಆರೋಪಿಗಳು ಒಳಸಂಚು ರೂಪಿಸಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅವುಗಳ ಮೂಲಕ ಪಂಜಾಬ್ ನ್ಯಾಷನಲ್ ಬ್ಯಾಂಕ್ನಿಂದ ಸಾಲ ಪಡೆದಿದ್ದಾರೆ. ಸಾಲದ ಹಣವನ್ನು ಬೇರೆ ಬ್ಯಾಂಕ್ ಖಾತೆಗಳಿವೆ ವರ್ಗಾವಣೆ ಮಾಡಿಕೊಂಡು ಅನ್ಯ ಉದ್ದೇಶಕ್ಕೆ ಬಳಸಿದ್ದಾರೆ. ನಂತರ ಸಾಲ ಮರುಪಾವತಿ ಮಾಡದೇ ವಂಚಿಸಿದ್ದಾರೆ ಎಂದು ಎಸ್.ಡಿ.ಮೋದಿ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ನವೆಂಬರ್ 7ರಂದು ಬ್ಯಾಂಕ್ ಸಹಾಯಕ ಪ್ರಧಾನ ವ್ಯವಸ್ಥಾಪಕ ದೂರು ಸಲ್ಲಿಸಿದ್ದು, ನವೆಂಬರ್ 21 ರಂದು ಶಿವರಾಮೇಗೌಡ ಸೇರಿದಂತೆ ಎಲ್ಲಾ ಆರೋಪಿಗಳ ವಿರುದ್ಧ ಸಿಬಿಐ, ಐಪಿಸಿ 120b, 420, 468, 471 ಹಾಗೂ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲು ದಾಖಲಿಸಿಕೊಂಡಿದ್ದು, ಇನ್ಸ್ಪೆಕ್ಟರ್ ಸಿದ್ದಪ್ಪ ಡಿ.ಜಿ. ಈ ಪ್ರಕರಣದ ತನಿಖೆ ಕೈಗೊಂಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:16 am, Mon, 4 December 23