ಸಿಸಿಬಿ ಭರ್ಜರಿ ಕಾರ್ಯಚರಣೆ: 34 ಡ್ರಗ್ ಪೆಡ್ಲರ್ಗಳ ಬಂಧನ, 2 ಕೋಟಿ ರೂ. ಹೆಚ್ಚು ಮೌಲ್ಯದ ಡ್ರಗ್ಸ್ ಜಪ್ತಿ
34 drug peddlers Arrested in Bengaluru: ಬೆಂಗಳೂರಿನಲ್ಲಿ ಕೇಂದ್ರ ಅಪರಾಧ ವಿಭಾಗದ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದು, ವಿದೇಶಿ ಪ್ರಜೆ ಸೇರಿ ಒಟ್ಟು 34 ಡ್ರಗ್ ಪೆಡ್ಲರ್ಗಳನ್ನು ಬಂಧಿಸಿದ್ದಾರೆ. ಇನ್ನು ಬಂಧಿತರಿಂದ 2 ಕೋಟಿ ರೂ. ಹೆಚ್ಚು ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.
ಬೆಂಗಳೂರು, (ಸೆಪ್ಟೆಂಬರ್ 12): ದಶಕಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ(Bengaluru ಮಾದಕವಸ್ತು ದಂಧೆ ಎಗ್ಗಿಲ್ಲದೇ ನಡೆಯುತ್ತಿದೆ. ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಸಿಲಿಕಾನ್ ಸಿಟಿ ದಿನೇ ದಿನೇ ಡ್ರಗ್ಸ್ ಪೆಡ್ಲರ್ಗಳ ಅಡ್ಡೆಯಾಗುತ್ತಿದೆ. ಇಂದು (ಸೆಪ್ಟೆಂಬರ್ 12) ಸಿಸಿಬಿ (CCB) ಭರ್ಜರಿ ಕಾರ್ಯಚರಣೆ ನಡೆಸಿ ಬರೋಬ್ಬರಿ 34 ಡ್ರಗ್ ಪೆಡ್ಲರ್ಗಳನ್ನು (Drug Peddlers) ಬಂಧಿಸಿದ್ದಾರೆ. ಬಂಧಿತರಿಂದ 2 ಕೋಟಿ 42 ಲಕ್ಷಕ್ಕೂ ಹೆಚ್ಚು ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.