AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ ಹೆಸರಲ್ಲಿ ಹೈಟೆಕ್​​ ಪೂಲ್ ​​ಪಾರ್ಟಿ: ಬೆಂಗಳೂರಲ್ಲಿ ಸಿಸಿಬಿ ಪೊಲೀಸರಿಂದ ಮೂವರು ಆರೋಪಿಗಳ ಬಂಧನ

ಬೆಂಗಳೂರಿನ ಮಾರತಹಳ್ಳಿಯ ಖಾಸಗಿ ವಿಲ್ಲಾದಲ್ಲಿ ದೀಪಾವಳಿ ಹೆಸರಲ್ಲಿ ನಡೆಯುತ್ತಿದ್ದ ಹೈಟೆಕ್ ಪೂಲ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಮೂವರನ್ನು ಬಂಧಿಸಿದ್ದಾರೆ. ಸಿಸಿಬಿ ದಾಳಿ ವೇಳೆ ಖಾಸಗಿ ಪಾರ್ಟಿ ಹೆಸರಲ್ಲಿ ಅನಧಿಕೃತ ಚಟುವಟಿಕೆ ನಡೆಸುತ್ತಿರೋದು ಬೆಳಕಿಗೆ ಬಂದಿದೆ. ಪಾರ್ಟಿಗೆ ಯಾವುದೇ ಪ್ರಾಧಿಕಾರದ ಅನುಮತಿ ಕೂಡ ಇಲ್ಲ ಎಂಬುದು ದಾಳಿ ವೇಳೆ ಗೊತ್ತಾಗಿದೆ.

ದೀಪಾವಳಿ ಹೆಸರಲ್ಲಿ ಹೈಟೆಕ್​​ ಪೂಲ್ ​​ಪಾರ್ಟಿ: ಬೆಂಗಳೂರಲ್ಲಿ ಸಿಸಿಬಿ ಪೊಲೀಸರಿಂದ ಮೂವರು ಆರೋಪಿಗಳ ಬಂಧನ
ಬಂಧಿತ ಆರೋಪಿಗಳು
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Nov 10, 2026 | 7:48 AM

Share

ಬೆಂಗಳೂರು, ನವೆಂಬರ್​​ 10: ದೀಪಾವಳಿ ಹೆಸರಲ್ಲಿ ಬೆಂಗಳೂರಿನ ಮಾರತಹಳ್ಳಿಯ ಯಮಲೂರು ಕರಿಯಮ್ಮನ ಅಗ್ರಹಾರ ರೋಡ್​​ನ ಖಾಸಗಿ ವಿಲ್ಲಾದಲ್ಲಿ ನಡೆಯುತ್ತಿದ್ದ ಹೈಟೆಕ್​​ ಪೂಲ್ ​​ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಮೂವರನ್ನು ಬಂಧಿಸಿದ್ದಾರೆ. ಅರಿಹಂತ್ ಪಾಂಡೆ, ಅಭಿನವ್ ಪಾಂಡೆ ಮತ್ತು ಪಾರ್ಥ ಬಂಧಿತರಾಗಿದ್ದಾರೆ. ರೇವ್​​ ಪಾರ್ಟಿ ಬದಲು ಪೂಲ್​​ಪಾರ್ಟಿ ಹೆಸರಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪಾರ್ಟಿಯಲ್ಲಿ ಹುಡುಗಿಯರು, ಗಾಂಜಾ, ಎಂಡಿಎಂಎ ಸೇರಿ ಡ್ರಗ್ಸ್​​ಗಳೂ ಲಭ್ಯವಿದ್ದವು. ಆನ್​​ಲೈನ್​ ಆ್ಯಪ್​​ ಮೂಲಕ ಈ ಪಾರ್ಟಿ ಆಯೋಜನೆ ಮಾಡಲಾಗಿತ್ತು ಎಂಬುದು ತಿಳಿದುಬಂದಿದೆ.

ಯುವತಿಯರ ಮಾದಕ ಫೋಟೋ ವಿಡಿಯೋ ಪೋಸ್ಟ್ ಮಾಡಿ ಗಾಳ

ವಾಟ್ಸ್ಯಾಪ್​​ ಮತ್ತು ಇನ್​​ಸ್ಟಾಗ್ರಾಮ್​​ಗಳಲ್ಲಿ ಯುವತಿಯರ ಮಾದಕ ಫೋಟೋ ವಿಡಿಯೋಗಳನ್ನ ಪೋಸ್ಟ್ ಮಾಡಿ ಯುವಕರಿಗೆ ಗಾಳ ಹಾಕಲಾಗಿತ್ತು. 50 ಅಪರಿಚಿತರ ಜೊತೆಗೆ ಪೂಲ್ ಪಾರ್ಟಿ ಆಯೋಜನೆ ಎಂದು ಮಾಹಿತಿ ಹಂಚಿಕೊಂಡಿದ್ದ ಆಯೋಜಕರು, ಪ್ರತಿ ಯುವಕರಿಗೆ 1710, ಯುವತಿಯರಿಗೆ 1080, ಕಪಲ್ಸ್ ಗೆ 2400 ರೂಪಾಯಿ ಪ್ರವೇಶ ಶುಲ್ಕ ನಿಗದಿಪಡಿಸಿದ್ದರು. ಪಾರ್ಟಿಯಲ್ಲಿ ಸಿಗುವ ಇನ್ನಿತರ ಮಾದಕ ವಸ್ತುಗಳಿಗೆ ಬೇರೆ ಚಾರ್ಜ್ ಮಾಡಲಾಗುತ್ತಿತ್ತು. ರಾತ್ರಿ 9 ಗಂಟೆಯಿಂದ ಬೆಳಗಿನ ಜಾವ 5 ಗಂಟೆಯವರೆಗೆ ಪಾರ್ಟಿ ಆಯೋಜನೆ ಮಾಡಲಾಗಿತ್ತು.

ಇದನ್ನೂ ಓದಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಂದ ಪತ್ನಿ! ಹೃದಯಾಘಾತದ ನಾಟಕವಾಡಿ ಕಣ್ಣೀರಿಟ್ಟಿದ್ದ ಆರೋಪಿ ಅರೆಸ್ಟ್

ಇನ್ನು ಪೊಲೀಸರಿಗೆ ಗೊತ್ತಾಗುತ್ತೆ ಎಂದು ಪಾರ್ಟಿಗೆ ಬರುವವರಿಗೆ ನಿಖರ ಸ್ಥಳದ ಮಾಹಿತಿ ನೀಡುತ್ತಿರಲಿಲ್ಲ. ಪ್ರತಿ ಬಾರಿಯೂ ಬೇರೆ ಬೇರೆ ಸ್ಥಳದಲ್ಲಿ ಪಾರ್ಟಿ ಆಯೋಜನೆ ಮಾಡ್ತಿದ್ದ ಆರೋಪಿಗಳು, ಅಂದಾಜು ಸ್ಥಳದ ಮಾಹಿತಿ ನೀಡಿ ಫೋನ್ ಮೂಲಕ ಕರೆಸಿಕೊಳ್ಳುತ್ತಿದ್ದರು. ಸಿಸಿಬಿ ದಾಳಿ ವೇಳೆ ಖಾಸಗಿ ಪಾರ್ಟಿ ಹೆಸರಲ್ಲಿ ಅನಧಿಕೃತ ಚಟುವಟಿಕೆ ನಡೆಸುತ್ತಿರೋದು ಬೆಳಕಿಗೆ ಬಂದಿದೆ. ಪಾರ್ಟಿಗೆ ಯಾವುದೇ ಪ್ರಾಧಿಕಾರದ ಅನುಮತಿ ಕೂಡ ಇಲ್ಲ ಎಂಬುದು ದಾಳಿ ವೇಳೆ ಗೊತ್ತಾಗಿದೆ. ನಿಷೇಧಿತ ಹುಕ್ಕಾ, ಮದ್ಯ, ಡ್ರಗ್ಸ್ ಮತ್ತು ಇತರ ವಸ್ತುಗಳು ಸ್ಥಳದಲ್ಲಿ ಕಂಡುಬಂದಿವೆ. ದಾಳಿ ವೇಳೆ ಸಿಕ್ಕ ವಸ್ತುಗಳನ್ನ ವಶಕ್ಕೆ ಪಡೆದು ಪರಿಶೀಲನೆಗೆ ಕಳುಹಿಸಲಾಗಿದ್ದು, ಈ ಸಂಬಂಧ ಮಾರತಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:46 am, Tue, 10 November 26

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More
ಪಟಾಕಿ ಸಿಡಿಸಿದರೆ ಕಾಯಿಲೆ ಗುಣವಾಗುತ್ತವೆ ಎಂದ ಬಂಗಾಳದ ಬಿಜೆಪಿ ಶಾಸಕಿ
ಪಟಾಕಿ ಸಿಡಿಸಿದರೆ ಕಾಯಿಲೆ ಗುಣವಾಗುತ್ತವೆ ಎಂದ ಬಂಗಾಳದ ಬಿಜೆಪಿ ಶಾಸಕಿ
ಮಗುವಿನ ಪ್ರಾಣಾಪಾಯ ತಪ್ಪಿದೆ, ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಆಸ್ಪತ್ರೆ
ಮಗುವಿನ ಪ್ರಾಣಾಪಾಯ ತಪ್ಪಿದೆ, ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಆಸ್ಪತ್ರೆ
ಎಥೆನಾಲ್​​ ಹೆಸರಲ್ಲಿ 1.68 ಲಕ್ಷ ಕೋಟಿ ಲೂಟಿ? ಲಕ್ಷ್ಮಣ್ ಗಂಭೀರ ಆರೋಪ
ಎಥೆನಾಲ್​​ ಹೆಸರಲ್ಲಿ 1.68 ಲಕ್ಷ ಕೋಟಿ ಲೂಟಿ? ಲಕ್ಷ್ಮಣ್ ಗಂಭೀರ ಆರೋಪ
ನಿರ್ದೇಶಕನ ಮೇಲೆ ಕಾನೂನು ಕ್ರಮ ಕೈಗೋಳ್ಳುತ್ತೇವೆ: ಪ್ರಿಯಾಂಕಾ ಎಚ್ಚರಿಕೆ
ನಿರ್ದೇಶಕನ ಮೇಲೆ ಕಾನೂನು ಕ್ರಮ ಕೈಗೋಳ್ಳುತ್ತೇವೆ: ಪ್ರಿಯಾಂಕಾ ಎಚ್ಚರಿಕೆ
ಮರಿ ನೀರಾನೆಗೆ 'ಡಾ. ಸಮೀಕ್ಷಾ ರೆಡ್ಡಿ' ಹೆಸರು ನಾಮಕರಣ
ಮರಿ ನೀರಾನೆಗೆ 'ಡಾ. ಸಮೀಕ್ಷಾ ರೆಡ್ಡಿ' ಹೆಸರು ನಾಮಕರಣ
ಬಿಜೆಪಿ ಡಿಕ್ಷನರಿ ಓದಲಿ; ಖರ್ಗೆಯ ದೀಪಾವಳಿ ಶುಭಾಶಯಕ್ಕೆ ಕಾಂಗ್ರೆಸ್ ಸಮರ್ಥನೆ
ಬಿಜೆಪಿ ಡಿಕ್ಷನರಿ ಓದಲಿ; ಖರ್ಗೆಯ ದೀಪಾವಳಿ ಶುಭಾಶಯಕ್ಕೆ ಕಾಂಗ್ರೆಸ್ ಸಮರ್ಥನೆ
ಚೌಡೇಶ್ವರಿ ದೇವಾಲಯಕ್ಕೆ ವಿಜಯಲಕ್ಷ್ಮಿ ಭೇಟಿ, ದರ್ಶನ್​​ಗಾಗಿ ವಿಶೇಷ ಪೂಜೆ
ಚೌಡೇಶ್ವರಿ ದೇವಾಲಯಕ್ಕೆ ವಿಜಯಲಕ್ಷ್ಮಿ ಭೇಟಿ, ದರ್ಶನ್​​ಗಾಗಿ ವಿಶೇಷ ಪೂಜೆ
ಸಿದ್ದರಾಮಯ್ಯರೊಂದಿಗೆ ಡಿಕೆಶಿ ಚರ್ಚೆ: ಕೆಲ ವಿಚಾರ ತಿಳಿಸಿದ್ದೇನೆ; ಸಿಎಂ
ಸಿದ್ದರಾಮಯ್ಯರೊಂದಿಗೆ ಡಿಕೆಶಿ ಚರ್ಚೆ: ಕೆಲ ವಿಚಾರ ತಿಳಿಸಿದ್ದೇನೆ; ಸಿಎಂ
ಇಡೀ ರಾಜ್ಯದ ಮಹಿಳೆಯರಿಗಿದೆ 'ಉಚಿತ ಬಸ್', ನಮಗೇಕಿಲ್ಲ?
ಇಡೀ ರಾಜ್ಯದ ಮಹಿಳೆಯರಿಗಿದೆ 'ಉಚಿತ ಬಸ್', ನಮಗೇಕಿಲ್ಲ?
ರಸ್ತೆ ಗುಂಡಿಗಳ ಕಾಟ: ಖುದ್ದು ಗುಂಡಿ ಮುಚ್ಚಿದ ಸಂಚಾರಿ ಪೊಲೀಸರು
ರಸ್ತೆ ಗುಂಡಿಗಳ ಕಾಟ: ಖುದ್ದು ಗುಂಡಿ ಮುಚ್ಚಿದ ಸಂಚಾರಿ ಪೊಲೀಸರು