AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನಕಲಿ ಬ್ಯಾಂಕ್ ಖಾತೆ ಸೃಷ್ಟಿಸಿ ವಹಿವಾಟು ನಡೆಸುತ್ತಿದ್ದ ಜಾಲ ಭೇದಿಸಿದ ಸಿಸಿಬಿ

ಎಲ್ಲೆಂದರಲ್ಲಿ ಆಧಾರ್, ಪಾನ್ ಕಾರ್ಡ್ ಕೊಡುವ ಜನರೇ ಎಚ್ಚರವಾಗಿರಿ. ಇಲ್ಲವಾದರೆ, ನಿಮ್ಮ ದಾಖಲೆಗಳಲ್ಲಿ ಬೇನಾಮಿ (ನಕಲಿ) ಬ್ಯಾಂಕ್ ಖಾತೆಗಳು ಸೃಷ್ಟಿಯಾಗುತ್ತದೆ. ಬೆಂಗಳೂರಿನಲ್ಲಿ ಇಂತಹ ನಕಲಿ ಖಾತೆಗಳನ್ನು ಸೃಷ್ಟಿ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಪತ್ತೆಹಚ್ಚಿ ಆರು ಮಂದಿಯನ್ನು ಬಂಧಿಸಿದ್ದಾರೆ.

ಬೆಂಗಳೂರು: ನಕಲಿ ಬ್ಯಾಂಕ್ ಖಾತೆ ಸೃಷ್ಟಿಸಿ ವಹಿವಾಟು ನಡೆಸುತ್ತಿದ್ದ ಜಾಲ ಭೇದಿಸಿದ ಸಿಸಿಬಿ
ಬೆಂಗಳೂರಿನಲ್ಲಿ ನಕಲಿ ಬ್ಯಾಂಕ್ ಖಾತೆ ಸೃಷ್ಟಿಸಿ ವಹಿವಾಟು ನಡೆಸುತ್ತಿದ್ದ ಜಾಲ ಭೇದಿಸಿದ ಸಿಸಿಬಿ (ಸಾಂದರ್ಭಿಕ ಚಿತ್ರ)
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: Rakesh Nayak Manchi|

Updated on: Nov 17, 2023 | 12:39 PM

Share

ಬೆಂಗಳೂರು, ನ.17: ಎಲ್ಲೆಂದರಲ್ಲಿ ಆಧಾರ್, ಪಾನ್ ಕಾರ್ಡ್ ಕೊಡುವ ಜನರೇ ಎಚ್ಚರವಾಗಿರಿ. ಇಲ್ಲವಾದರೆ, ನಿಮ್ಮ ದಾಖಲೆಗಳಲ್ಲಿ ಬೇನಾಮಿ (ನಕಲಿ) ಬ್ಯಾಂಕ್ ಖಾತೆಗಳು ಸೃಷ್ಟಿಯಾಗುತ್ತದೆ. ಬೆಂಗಳೂರಿನಲ್ಲಿ (Bengaluru) ಇಂತಹ ನಕಲಿ ಖಾತೆಗಳನ್ನು ಸೃಷ್ಟಿ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಪತ್ತೆಹಚ್ಚಿ ಆರು ಮಂದಿಯನ್ನು ಬಂಧಿಸಿದ್ದಾರೆ.

ಕೇರಳ‌ ಮೂಲದ ಆರೋಪಿಗಳಾದ ಸಮೀರ್, ಮಹಮ್ಮದ್ ಹಸನ್, ಅಮೂಲ್ ಬಾಬು, ಮಹಮ್ಮದ್ ಇರ್ಫಾನ್, ತಂಝೀಲ್, ಮಂಜುನಾಥ ಬಂಧಿತರು. ಜನರ ಕೆವೈಸಿ ಪಡೆದು ಬಳಿಕ ಬ್ಯಾಂಕ್ ಖಾತೆ ತೆರೆದು ವಹಿವಾಟು ನಡೆಸುತ್ತಿದ್ದರು.

5 ಸಾವಿರದಿಂದ 10,000 ರೂ. ಕೊಟ್ಟು ಕೆವೈಸಿ ಪಡೆಯುತ್ತಿದ್ದ ಆರೋಪಿಗಳು, ಆಧಾರ್, ಪಾನ್ ಕಾರ್ಡ್, ಒಂದು ಸಹಿಗೆ 10,000 ರೂ. ರೇಟ್ ಫಿಕ್ಸ್ ಮಾಡಿದ್ದರು. ಪ್ರತಿ ದಾಖಲಾತಿ​ಗೆ ಹೊಸ ಸಿಮ್ ಬಳಸಿ ಖಾತೆ ತೆರೆಯುತ್ತಿದ್ದರು. ವಿದೇಶದಲ್ಲಿ ಕುಳಿತುಕೊಂಡೇ ಬೆಂಗಳೂರಿನಲ್ಲಿ ಬೇನಾಮಿ ಖಾತೆ ತೆರೆದು ವಹಿವಾಟು ನಡೆಸುತ್ತಿದ್ದರು.

ಇದನ್ನೂ ಓದಿ: ಬೆಂಗಳೂರು: ವಿದೇಶಿಗರಿಗೆ ನಕಲಿ ದಾಖಲಾತಿಗಳನ್ನು ​ತಯಾರಿಸಿಕೊಡುತ್ತಿದ್ದ ವ್ಯಕ್ತಿ ಅರೆಸ್ಟ್​​

ಈ ವಿಚಾರ ತಿಳಿದ ಸಿಸಿಬಿ ಪೊಲೀಸರು, ಬೃಹತ್ ಬೇನಾಮಿ ಖಾತೆ ಜಾಲ ಪತ್ತೆಹಚ್ಚಿ, ಬಂಧಿತ ಆರೋಪಿಗಳಿಂದ 150 ಕ್ಕೂ ಹೆಚ್ಚು ಬೇನಾಮಿ ಖಾತೆಗಳನ್ನು ಫ್ರೀಜ್ ಮಾಡಿದ್ದಾರೆ. ಈ ಖಾತೆಗಳಲ್ಲಿ ಕೋಟ್ಯಂತರ ರೂಪಾಯಿ ವಹಿವಾಟು ನಡೆಸಲಾಗಿದೆ.

ದುಬೈನಲ್ಲಿದ್ದಾನೆ ಪ್ರಕರಣದ ಕಿಂಗ್​​ಪಿನ್

ದುಬೈನಲ್ಲಿ ಕುಳಿತುಗೊಂಡಿರುವ ಕಿಂಗ್​ಪಿನ್, ಬಂಧಿತ ಆರೋಪಿಗಳಿಗೆ ಸೂಚನೆ ಕೊಡುತ್ತಿದ್ದನು. ಈತನ ಸೂಚನೆ ಮೇರೆಗೆ ಆರೋಪಿಗಳು ನಕಲಿ ಬ್ಯಾಂಕ್ ಖಾತೆಗಳನ್ನು ತೆರೆದು ದುಬೈನಲ್ಲಿರುವ ವ್ಯಕ್ತಿಗೆ ಮಾಹಿತಿ ರವಾನಿಸುತ್ತಿದ್ದರು.

ಈ ಕೃತ್ಯ ಎಸಗಲೆಂದೇ ಆರೋಪಿಗಳು ಮತ್ತಿಕೆರೆಯಲ್ಲಿ ಮನೆ ಕಂ ಕಚೇರಿ ಮಾಡಿಕೊಂಡಿದ್ದರು. ಇತ್ತೀಚೆಗೆ ಮಂಜೇಶ್ ಎಂಬಾತ ತನ್ನ ಸ್ನೇಹಿತನ ಜೊತೆ ಈ ಕಚೇರಿಗೆ ಆಗಮಿಸಿದ್ದರು. ಈ ವೇಳೆ ಮಂಜೇಶ್ ಸ್ನೇಹಿತ ಆಧಾರ್, ಪಾನ್ ಕಾರ್ಡ್ ನೀಡಿದ್ದಲ್ಲದೆ, 10,000 ರೂ. ಕೊಡುತ್ತಾರೆ ನಿನ್ನ ದಾಖಲೆ ಕೊಡುವಂತೆ ಮಂಜೇಶ್​ಗೆ ಹೇಳಿದ್ದ. ದಾಖಲೆಗಳ ರಾಶಿ, ಬ್ಯಾಂಕ್ ಪುಸ್ತಕ ನೋಡಿ ಮಂಜೇಶ್​ಗೆ ಅನುಮಾನ ಹುಟ್ಟುಕೊಂಡಿದೆ.

ಕೂಡಲೇ ಮಂಜೇಶ್​ ಸಿಸಿಬಿ ಸೈಬರ್ ಕ್ರೈಮ್​ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಸೈಬರ್ ಕ್ರೈಂ ಪೊಲೀಸರು ನಕಲಿ ಬ್ಯಾಂಕ್ ಖಾತೆ ಸೃಷ್ಟಿಸಿ ಕೋಟ್ಯಂತರ ರೂಪಾಯಿ ವಹಿವಾಟು ನಡೆಸುತ್ತಿದ್ದ ಬೃಹತ್ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್