ಬೆಂಗಳೂರಿನಲ್ಲಿ ಶಂಕಿತ ಉಗ್ರರಿಗೆ ಪಿಸ್ತೂಲ್ ಸಪ್ಲೈ ಮಾಡಿದ್ದವನ ಜಾಡು ಪತ್ತೆ ಹಚ್ಚಿದ ಸಿಸಿಬಿ

ಬೆಂಗಳೂರಿನಲ್ಲಿ ಐವರು ಶಂಕಿತರ ಉಗ್ರರ ಬಂಧನಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದು, ಒಂದೊಂದೇ ಅಂಶಗಳು ಬಯಲಿಗೆ ಬರುತ್ತಿವೆ. ಇದೀಗ ಆರೋಪಿಗಳಿಗೆ ನಾಡ ಪಿಸ್ತೂಲ್​ ಸಪ್ಲೈ ಮಾಡಿದ್ದವನನ್ನು ಪತ್ತೆಹಚ್ಚಿದ್ದಾರೆ.

ಬೆಂಗಳೂರಿನಲ್ಲಿ ಶಂಕಿತ ಉಗ್ರರಿಗೆ ಪಿಸ್ತೂಲ್ ಸಪ್ಲೈ ಮಾಡಿದ್ದವನ ಜಾಡು ಪತ್ತೆ ಹಚ್ಚಿದ ಸಿಸಿಬಿ
ಬೆಂಗಳೂರು ಸಿಸಿಬಿ ಕಚೇರಿ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Jul 28, 2023 | 8:16 AM

ಬೆಂಗಳೂರು, (ಜುಲೈ 28): ಬೆಂಗಳೂರಿನಲ್ಲಿ ಐವರು ಶಂಕಿತ ಭಯೋತ್ಪಾದಕರ(Suspected Terrorists) ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ(CCB) ಅಧಿಕಾರಿಗಳ ತನಿಖೆಯಲ್ಲಿ ಒಂದಾದ ಮೇಲೊಂದು ಸ್ಫೋಟಕ ಅಂಶಗಳು ಬಯಲಿಗೆ ಬರುತ್ತಿವೆ. ಇದೀಗ ಶಂಕಿತ ಉಗ್ರರಿಗೆ ನಾಡ ಪಿಸ್ತೂಲ್ (pistol) ಸಪ್ಲೈ ಮಾಡಿದವನನ್ನು ಸಿಸಿಬಿ ಪತ್ತೆ ಮಾಡಿದೆ. ಜುನೈದ್ ಅಣತಿಯಂತೆ ರಬ್ಬಾನಿಗೆ ಪಿಸ್ತೂಲ್ ನೀಡಿದ್ದವನ ಜಾಡು ಪತ್ತೆ ಮಾಡಿದ್ದು, ತುಮಕೂರು ರಸ್ತೆಯ ಟಿ ಬೇಗೂರಿನಲ್ಲಿ ಸಲ್ಮಾನ್ ಎಂಬಾತ ರಬ್ಬಾನಿಗೆ ಪಿಸ್ತೂಲ್ ಸಪ್ಲೈ ಮಾಡಿದ್ದಾನೆ ಎನ್ನುವ ಸಿಸಿಬಿಗೆ ಮಾಹಿತಿ ಸಿಕ್ಕಿದೆ. ಗನ್​ ಸಪ್ಲೈ ಮಾಡಿದ ಸಲ್ಮಾನ್ ಈ ಹಿಂದೆ ಪೋಕ್ಸೊ ಪ್ರಕರಣದಲ್ಲಿ ಜೈಲು ಸೇರಿದ್ದ. ಇದೀಗ ಈತ ಸಹ ನೇಪಾಳ ಮೂಲಕ ದೇಶ ಬಿಟ್ಟು ಪರಾರಿಯಾಗಿದ್ದಾನೆ ಎಂದು ಶಂಕಿಸಲಾಗಿದ್ದು, ಸದ್ಯ ಸಿಸಿಬಿ ಅಧಿಕಾರಿಗಳು, ಸಲ್ಮಾನ್ ಪಾಸ್ ಪೋರ್ಟ್ , ಫೋನ್ ಡಿಟೇಲ್ಸ್​ ಪಡೆದು ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ:  ಬೆಂಗಳೂರಿನ ಶಂಕಿತ ಉಗ್ರರ ಬೇರೆಯದ್ದೆ ಕಥೆ ಹೇಳ್ತಿವೆ ಸಿಕ್ಕ ಪಿಸ್ತೂಲ್, ವಾಕಿಟಾಕಿ, ಜೀವಂತ ಗುಂಡುಗಳು

40ಕ್ಕೂ ಹೆಚ್ಚು ಬ್ಯಾಂಕ್ ಅಕೌಂಟ್ ಗಳ ಪರಿಶೀಲನೆ

ವಿದೇಶದಿಂದ ಫಂಡಿಂಗ್ ಆಗಿರಯವ ಮಾಹಿತಿ ಸಿಕ್ಕಿರುವ ಹಿನ್ನೆಲೆಯಲ್ಲಿ ಸಿಸಿಬಿ, ಬಂಧಿತ ಶಂಕಿತ ಉಗ್ರರಾದ ಸುಹೈಲ್ , ತಬ್ರೇಜ್, ರಬ್ಬಾನಿ, ಮುದಾಸಿರ್ , ಉಮರ್ ಸೇರಿದಂತೆ ಕುಟುಂಬಸ್ಥರ ಸುಮಾರು 40ಕ್ಕೂ ಹೆಚ್ಚು ಬ್ಯಾಂಕ್ ಅಕೌಂಟ್​ಗಳನ್ನು ಸಿಸಿಬಿ ಪರಿಶೀಲನೆ ನಡೆಸಿದ್ದಾರೆ. ಪ್ರಮುಖ ಆರೋಪಿ ಜುನೈದ್, ವಿದೇಶದಲ್ಲಿ ಕುಳಿತುಕೊಂಡು ಶಂಕಿತರ ಅಕೌಂಟ್​ಗಳಿಗೆ ಹಣ ಹಾಕಿಸಿರುವ ಅನುಮಾನದ ಮೇಲೆ ಶಂಕಿತರ ಉಗರು ಹಾಗೂ ಅವರ ಕುಟುಂಬಸ್ಥರ ಬ್ಯಾಂಕ್​ ಖಾತೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಪ್ರಕರಣದ ಕಿಂಗ್ ಪಿನ್​ ವಿಚಾರಣೆ

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ A1 ಆರೋಪಿ ಟಿ ನಜೀರ್​ನನ್ನು ಸಿಸಿಬಿ ಪೊಲೀಸರು ಕಸ್ಟಡಿಗೆ ಪಡೆದುಕೊಂಡು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಜುನೈದ್ ಮೂಲಕ ಭಯೋತ್ಪಾದಕ ಚಟುವಟಿಕೆಗಳು ಮಾಡಿಸಿರುವ ಆರೋಪ ಮೇಲೆ ಬಾಡಿ ವಾರೆಂಟ್ ಮೂಲಕ ಪರಪ್ಪನ ಅಗ್ರಹಾರ ಜೈಲಿನಿಂದ ನಜೀರ್ ವಶಕ್ಕೆ ಪಡೆದ ಸಿಸಿಬಿ ಅಧಿಕಾರಿಗಳು, ಜೈಲಲ್ಲಿ ಜುನೈದ್ ಪರಿಚಯ ಹೇಗಾಯ್ತು? ಹೇಗೆ ಮೈಂಡ್ ವಾಶ್ ಮಾಡಿದ್ದ? ಅಂತೆಲ್ಲ ವಿಚಾರಣೆ ಮಾಡಿ ಮಾಹಿತಿ ಕಲೆಹಾಕಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಕ್ಲಿಕ್ ಮಾಡುತ್ತಿದ್ದಂತೆ ಇನ್​ಸ್ಟಂಟ್ ಫೋಟೊ ಪ್ರಿಂಟ್
ಕ್ಲಿಕ್ ಮಾಡುತ್ತಿದ್ದಂತೆ ಇನ್​ಸ್ಟಂಟ್ ಫೋಟೊ ಪ್ರಿಂಟ್
Nithya Bhavishya: ಈ ರಾಶಿಯವರು ಹಣ ಕಳೆದುಕೊಂಡು ಚಿಂತಿತರಾಗುವ ಸಾಧ್ಯತೆ
Nithya Bhavishya: ಈ ರಾಶಿಯವರು ಹಣ ಕಳೆದುಕೊಂಡು ಚಿಂತಿತರಾಗುವ ಸಾಧ್ಯತೆ
Daily Devotional: ಸಾವಿನ ಮನೆಯಲ್ಲಿ ಈ ಕೆಲಸ ಯಾವತ್ತೂ ಮಾಡಬೇಡಿ
Daily Devotional: ಸಾವಿನ ಮನೆಯಲ್ಲಿ ಈ ಕೆಲಸ ಯಾವತ್ತೂ ಮಾಡಬೇಡಿ
ತುಮಕೂರಿನಲ್ಲಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ
ತುಮಕೂರಿನಲ್ಲಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್