ಬಿಬಿಎಂಪಿ ಚುನಾವಣೆಗೆ ಸಿದ್ಧರಾಗುತ್ತಿದ್ದ ರೌಡಿಶೀಟರ್​ಗಳು: ಹಠಾತ್ ದಾಳಿಗೆ ಕಾರಣ ತಿಳಿಸಿದ ಸಿಸಿಬಿ ಜಂಟಿ ಆಯುಕ್ತ ಶರಣಪ್ಪ

ಕೆಲವು ರೌಡಿಶೀಟರ್​ಗಳು ಬಿಬಿಎಂಪಿ ಚುನಾವಣೆ ತಯಾರಿಯಲ್ಲಿದ್ದರು. ನಗರದಾದ್ಯಂತ ಆಕ್ಟಿವ್ ಇರುವ ರೌಡಿಶೀಟರ್ ಮನೆ ಮೇಲೆ ದಾಳಿ ಮಾಡಲಾಗಿದೆ ಎಂದು ಸಿಸಿಬಿ ಜಂಟಿ ಆಯುಕ್ತ ಶರಣಪ್ಪ ತಿಳಿಸಿದರು.

ಬಿಬಿಎಂಪಿ ಚುನಾವಣೆಗೆ ಸಿದ್ಧರಾಗುತ್ತಿದ್ದ ರೌಡಿಶೀಟರ್​ಗಳು: ಹಠಾತ್ ದಾಳಿಗೆ ಕಾರಣ ತಿಳಿಸಿದ ಸಿಸಿಬಿ ಜಂಟಿ ಆಯುಕ್ತ ಶರಣಪ್ಪ
ಸಿಸಿಬಿ ಜಂಟಿ ಆಯುಕ್ತ ಶರಣಪ್ಪ
Follow us
TV9 Web
| Updated By: ಆಯೇಷಾ ಬಾನು

Updated on:Nov 23, 2022 | 11:46 AM

ಬೆಂಗಳೂರು: ಇಂದು ಬೆಳ್ಳಂ ಬೆಳಗ್ಗೆ ಸಿಸಿಬಿ ಪೊಲೀಸರು(CCB Police) ರೌಡಿಶೀಟರ್(​Rowdy Sheeters) ಮನೆಗಳ ಮೇಲೆ ದಾಳಿ ನಡೆಸಿ ಶಾಕ್ ಕೊಟ್ಟಿದ್ದಾರೆ. ರೌಡಿಸಂನಲ್ಲಿ ಆ್ಯಕ್ಟೀವ್​ ಆಗಿರುವ ​​​​​ನಗರದ ಸುಮಾರು 86 ಮಂದಿಗೆ ಚಳಿ ಬಿಡಿಸಿದ್ದಾರೆ. ಇನ್ನು ಈ ಬಗ್ಗೆ ಮಾತನಾಡಿದ ಸಿಸಿಬಿ ಜಂಟಿ ಆಯುಕ್ತ ಶರಣಪ್ಪ(CCB Joint Commissioner Sharanappa), ಕೆಲವು ರೌಡಿಶೀಟರ್​ಗಳು ಬಿಬಿಎಂಪಿ ಚುನಾವಣೆ ತಯಾರಿಯಲ್ಲಿದ್ದರು. ನಗರದಾದ್ಯಂತ ಆಕ್ಟಿವ್ ಇರುವ ರೌಡಿಶೀಟರ್ ಮನೆ ಮೇಲೆ ದಾಳಿ ಮಾಡಲಾಗಿದೆ ಎಂದರು.

ನ್ಯಾಯಾಲಯದ ವಾರೆಂಟ್ ಇದ್ದರು ಕೆಲವರು ಕೋರ್ಟ್​ಗೆ ಅಟೆಂಡ್ ಆಗಿರಲಿಲ್ಲ. ಇನ್ನೂ ಕೆಲವರು ಬಿಬಿಎಂಪಿ ಚುನಾವಣೆ ತಯಾರಿಯಲ್ಲಿ ಇದ್ರು. ಕೆಲವರು ತಮ್ಮ ಮನೆಯವರನ್ನ ಚುನಾವಣೆಗೆ ನಿಲ್ಲಿಸೋಕೆ ಸಿದ್ದತೆ ಮಾಡಿದ್ರು. ಕೆಲವರು ಚುನಾವಣೆಗಾಗಿ ಹಣಕಾಸು ವಸೂಲಿ ಮಾಡ್ತಿದ್ದಾರೆ. ಬಿಬಿಎಂಪಿ ಚುನಾವಣೆ ಹಾಗೂ ಸಮಾಜದ ಸ್ವಾಸ್ಥ್ಯ ಸಲುವಾಗಿ ದಾಳಿ ನಡೆಸಲಾಗಿದೆ. ದಾಳಿ ವೇಳೆ ಕೆಲವರು ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದಾರೆ. ವಶಕ್ಕೆ ‌ಪಡೆದಿರುವ 26 ರೌಡಿಗಳ ವಿಚಾರಣೆ ನಡೆಸಲಾಗುತ್ತೆ. ರೌಡಿಗಳ ಆದಾಯ ಮತ್ತು ಅವರು‌ ಚಟುವಟಿಕೆಗಳ ಬಗ್ಗೆ ತನಿಖೆ ಮಾಡ್ತಾ ಇದ್ದೀವಿ. ಕೆಲ ರೌಡಿಗಳ ಮನೆ ಮೇಲೆ ದಾಳಿ ವೇಳೆ ಮಾರಾಕಾಸ್ತ್ರಗಳು ಪತ್ತೆ ಆಗಿವೆ ಎಂದು ಜಂಟಿ ಆಯುಕ್ತ ಡಾ. ಶರಣಪ್ಪ ಮಾಹಿತಿ ನೀಡಿದರು.

ಇದನ್ನೂ ಓದಿ: ಬಸವನಗುಡಿಯ ಕಡಲೆಕಾಯಿ ಪರಿಷೆಯಲ್ಲಿ ದೇವರ ದರ್ಶನಕ್ಕೆ ಬಂದು ಸಿಕ್ಕಿಬಿದ್ದ ರೌಡಿಶೀಟರ್

ಬೆಂಗಳೂರಿನ ಎಲ್ಲಾ ವಿಭಾಗಗಳ ಠಾಣಾ ವ್ಯಾಪ್ತಿಗಳಲ್ಲಿ ಐವರು ಎಸಿಪಿ, 20 ಇನ್ಸ್​​ಪೆಕ್ಟರ್​​ಗಳ ನೇತೃತ್ವದಲ್ಲಿ ನಗರದ ಪ್ರಮುಖ ರೌಡಿಶೀಟರ್​​ಗಳ ಮನೆಗಳ ಮೇಲೆ ರೇಡ್ ನಡೆಸಿ ಸಿಸಿಬಿ ಪರಿಶೀಲನೆ ನಡೆಸಿದೆ.

ಸೈಕಲ್ ರವಿ, ವಿಲ್ಸನ್​ ಗಾರ್ಡನ್​ ನಾಗನ ಮನೆ ಮೇಲೂ ದಾಳಿ ನಡೆಸಿದ್ದು ಸಿಸಿಬಿ ದಾಳಿ ವೇಳೆ ಇಬ್ಬರು ರೌಡಿಗಳು ಮನೆಗಳಲ್ಲಿ ಇರಲಿಲ್ಲ. ರೇಡ್ ವೇಳೆ ರೌಡಿಶೀಟರ್​ಗಳಾದ ಕೋತಿರಾಮ, ಆರ್​.ಟಿ.ನಗರದ ವೆಂಕಟೇಶ್ ಸೇರಿ 26 ರೌಡಿಶೀಟರ್​ಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗದಂತೆ ವಾರ್ನ್ ಮಾಡಿದ್ದಾರೆ. ಅಪರಾಧ ಕೃತ್ಯಗಳಲ್ಲಿ ಭಾಗಿಯಾದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ ಎಂದು ಬೆಂಗಳೂರು ರೌಡಿಶೀಟರ್​ಗಳಿಗೆ ಸಿಸಿಬಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:37 am, Wed, 23 November 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್