ಕೆ.ಆರ್​.ಪುರಂ ಡ್ರಗ್ ಪೆಡ್ಲರ್​ ಬಂಧನ ಪ್ರಕರಣ: ಆರೋಪಿ ಆಸ್ತಿ ಜಪ್ತಿ ಮಾಡಿದ ಸಿಸಿಬಿ ಅಧಿಕಾರಿಗಳು

ಬೆಂಗಳೂರಿನ ಕೆ.ಆರ್​.ಪುರಂನಲ್ಲಿ ಡ್ರಗ್ ಪೆಡ್ಲರ್​ನನ್ನು ಬಂಧಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಸಿಬಿ ಅಧಿಕಾರಿಗಳು ಡ್ರಗ್ ಪೆಡ್ಲರ್​ಗೆ ಸೇರಿದ​ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳವಂತೆ ಚೆನ್ನೈನ ಕಾಂಪಿಟೆಂಟ್​ ಅಥಾರಿಟಿ ಆದೇಶ ನೀಡಿದೆ.

ಕೆ.ಆರ್​.ಪುರಂ ಡ್ರಗ್ ಪೆಡ್ಲರ್​ ಬಂಧನ ಪ್ರಕರಣ: ಆರೋಪಿ ಆಸ್ತಿ ಜಪ್ತಿ ಮಾಡಿದ ಸಿಸಿಬಿ ಅಧಿಕಾರಿಗಳು
ಡ್ರಗ್​ ಪೆಡ್ಲರ್​ ಆರೋಪಿ ಮೃತ್ಯುಂಜಯ
Follow us
TV9 Web
| Updated By: ವಿವೇಕ ಬಿರಾದಾರ

Updated on:Sep 17, 2022 | 4:21 PM

ಬೆಂಗಳೂರು: ನಗರದ ಕೆ.ಆರ್​.ಪುರಂನಲ್ಲಿ ಡ್ರಗ್ ಪೆಡ್ಲರ್​ನನ್ನು ಬಂಧಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಸಿಬಿ ಅಧಿಕಾರಿಗಳು ಡ್ರಗ್ ಪೆಡ್ಲರ್​ಗೆ ಸೇರಿದ​ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳವಂತೆ ಚೆನ್ನೈನ ಕಾಂಪಿಟೆಂಟ್​ ಅಥಾರಿಟಿ ಆದೇಶ ನೀಡಿದೆ. ಡ್ರಗ್​ ಪೆಡ್ಲರ್​​ ಮೃತ್ಯುಂಜಯ ಅಲಿಯಾಸ್ ಎಂ.ಜೆ 2006ರಿಂದ ಡ್ರಗ್ಸ್ ಮಾರಾಟದಲ್ಲಿ ತೊಡಗಿಕೊಂಡಿದ್ದನು. ಆರೋಪಿ ವಿರುದ್ಧ ಚಿಕ್ಕಬಳ್ಳಾಪುರ, ಚಿಂತಾಮಣಿ, ಬೆಂಗಳೂರು ಸೇರಿ ಹಲವೆಡೆ ಪ್ರಕರಣ ದಾಖಲಾಗಿದ್ದವು. ಆರೋಪಿ ಮೃತ್ಯುಂಜಯ 10-11 ಡ್ರಗ್ಸ್ ಪ್ರಕರಣಗಳಲ್ಲಿ ಬೇಕಾಗಿದ್ದನು.

ಹೀಗಾಗಿ ಆರೋಪಿಯನ್ನು ಸಿಸಿಬಿ ಅಧಾಕರಿಗಳು ಜುಲೈನಲ್ಲಿ ಬಂಧಿಸಿದ್ದರು. ಆರೋಪಿಯಿಂದ 80 ಲಕ್ಷ ಮೌಲ್ಯದ ನಿಷೇಧಿತ ಮಾದಕವಸ್ತುಗಳಾದ ಹ್ಯಾಲಿಷ್ ಆಯಿಲ್ ಮತ್ತು ಗಾಂಜಾವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಆರೋಪಿ  ಡ್ರಗ್ಸ್ ಮಾರಾಟ ಮಾಡಿ ಕೋಟ್ಯಂತರ ಮೌಲ್ಯದ ಅಸ್ತಿ ಖರೀದಿ ಮಾಡಿದ್ದನು.

ಮೃತ್ಯುಂಜಯ ಅಲಿಯಾಸ್ ಎಂ.ಜೆ ಮಾಲೂರು ತಾಲೂಕಿನ 3 ಗ್ರಾಮಗಳಲ್ಲಿ 11 ಗುಂಟೆ, 5 ಗುಂಟೆ, 10 ಗುಂಟೆ ಕೃಷಿ ಭೂಮಿ, ಹೊಸಕೋಟೆಯಲ್ಲಿ 1 ಸೈಟ್ ಖರೀದಿ ಮಾಡಿದ್ದನು. ಸದ್ಯ ಅಧಿಕಾರಿಗಳು ಆರೋಪಿ ಖರೀದಿಸಿರುವ ಕೋಟ್ಯಂತರ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 3:39 pm, Sat, 17 September 22

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು