ವಂಚನೆ ಪ್ರಕರಣ: ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ, ಬಿಜೆಪಿ ಯುವ ಮೂರ್ಚಾ ಕಾರ್ಯಕರ್ತನ ಬಂಧನ

Cheating Case: ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್​ ಕೊಡಿಸುವುದಾಗಿ ಹೇಳಿ 4 ಕೋಟಿ ರೂ. ಹಣ ಪಡೆದು ವಂಚಿಸಿದ ಆರೋಪದ ಅಡಿ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Follow us
TV9 Web
| Updated By: ವಿವೇಕ ಬಿರಾದಾರ

Updated on:Sep 13, 2023 | 9:43 AM

ಬೆಂಗಳೂರು ಸೆ.13: ಬೆಂಗಳೂರು ಸೆ.13: ವಂಚನೆ ಆರೋಪದ ಅಡಿ ಹಿಂದೂ ಕಾರ್ಯಕರ್ತೆ (Hindu Activist) ಚೈತ್ರಾ ಕುಂದಾಪುರ (Chaitra Kundapur) ಅವರನ್ನು ಸಿಸಿಬಿ‌ ಪೊಲೀಸರು (CCB Police) ಬಂಧಿಸಿದ್ದಾರೆ. ಉದ್ಯಮಿಯೊಬ್ಬರಿಗೆ ವಿಧಾನಸಭಾ ಚುನಾವಣೆಯ ಟಿಕೆಟ್​ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಚೈತ್ರಾ ಕುಂದಾಪುರ ಅವರು ಗೋವಿಂದಬಾಬು ಪೂಜಾರಿ ಎಂಬುವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ಹೇಳಿದ್ದರು. ಇದನ್ನು ನಂಬಿದ ಗೋವಿಂದಬಾಬು ಪೂಜಾರಿಯವರು ಚೈತ್ರಾ ಕುಂದಾಪುರ ಹೇಳಿದಂತೆ ಆಗಾಗ ಬೆಂಗಳೂರಿಗೆ ಬರುತ್ತಿದ್ದರು.

ಇದನ್ನೂ ಓದಿ: ಕೋಮು ಪ್ರಚೋದನೆ ಭಾಷಣ; ಚೈತ್ರಾ ಕುಂದಾಪುರ ವಿರುದ್ಧ ಎಫ್ಐಆರ್

ಗೋವಿಂದಬಾಬು ಬೆಂಗಳೂರಿಗೆ ಬಂದಾಗಲೆಲ್ಲ, ಚೈತ್ರಾ ಕುಂದಾಪುರ ತನ್ನ ಪರಿಚಯಸ್ತರಿಗೆ ಒಳ್ಳೆ ಒಳ್ಳೆ ಬಟ್ಟೆ ಹಾಕಿಸಿ, ಇವರೇ ಹೈಕಮಾಂಡ್​​ ನಾಯಕರು ಎಂದು ನಂಬಿಸುತ್ತಿದ್ದರು. ಇವರು ಹೇಳಿದ ಮೇಲೆ ಟಿಕೆಟ್ ನಿಮಗೆ ಸಿಗುತ್ತದೆ ಎಂದು ಹೇಳಿದ್ದರು. ಇದನ್ನು ನಂಬಿದ ಗೋವಿಂದಬಾಬು ಪೂಜಾರಿ ಅವರು ಟಿಕೆಟ್ ಸಿಗತ್ತೆ ಅನ್ನುವ ಆಸೆಗೆ ಕೇಳಿದಷ್ಟು ಹಣ ಕೊಟ್ಟಿದ್ದರು.

ಗೋವಿಂದಬಾಬು ಅವರ ಬಳಿಯಿಂದ ಚೈತ್ರಾ ಕುಂದಾಪುರ ಒಟ್ಟು 4 ಕೋಟಿ ರೂ. ಹಣ ಪಡೆದಿದ್ದರು. ಆದರೆ ಗೋವಿಂದಬಾಬು ಪೂಜಾರಿ ಅವರಿಗೆ ಟಿಕೆಟ್​ ಸಿಗಲಿಲ್ಲ. ಬಳಿಕ ಗೋವಿಂದಬಾಬು ಕೊಟ್ಟ ಹಣವನ್ನು ವಾಪಸ್ಸು ಕೇಳಿದ್ದಾರೆ. ಆದರೆ ಚೈತ್ರಾ ಕುಂದಾಪುರ ಹಣ ನೀಡದೇ ವಂಚಿಸಿದ್ದಾರೆ ಎಂದು ಗೋವಿಂದಬಾಬು ಪೂಜಾರಿ ಅವರು ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಸದ್ಯ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಬಿಜೆಪಿ ಜಿಲ್ಲಾ ಪ್ರಧಾನಕಾರ್ಯದರ್ಶಿ ಬಂಧನ

ಇನ್ನು ಪ್ರಕರಣದ ಎ2 ಆರೋಪಿ, ಕಡೂರು ಮೂಲದ‌ ಬಿಜೆಪಿ ಜಿಲ್ಲಾ ಪ್ರಧಾನಕಾರ್ಯದರ್ಶಿ ಗಗನ್ ಕಡೂರು ಎಂಬುವರನ್ನು ಪೊಲೀಸರು ಬಂಧಸಿದ್ದಾರೆ. ಗಗನ್ ಕಡೂರು ಜೈತ್ರ ಕುಂದಾಪುರ ಆಪ್ತನಾಗಿದ್ದಾನೆ. ದೂರು ದಾಖಲಾಗುತ್ತಿದ್ದಂತೆ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ವಜಾ ಮಾಡಿ ಚಿಕ್ಕಮಗಳೂರು ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ ಆದೇಶ ಹೊರಡಿಸಿದ್ದಾರೆ. ಗೋವಿಂದಬಾಬು ಒಂದು ತಿಂಗಳ ಹಿಂದೆಯೇ ಗಗನ್ ಬಗ್ಗೆ ದೂರು ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:31 am, Wed, 13 September 23

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ