ಬೆಂಗಳೂರು: ಹಸುಗೂಸು ಮಾರಾಟ ಮಾಡುತ್ತಿದ್ದಾಗ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಗ್ಯಾಂಗ್

| Updated By: Rakesh Nayak Manchi

Updated on: Nov 27, 2023 | 4:17 PM

ಹಸುಗೂಸು ಮಾರಾಟ ಮಾಡುತ್ತಿದ್ದ ನಾಲ್ವರಿದ್ದ ಗ್ಯಾಂಗ್ ಸಿಸಿಬಿ ಪೊಲೀಸರ ಕೈಗೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಬೆಂಗಳೂರು ನಗರದ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ. ಸದ್ಯ, ಆರೋಪಿಗಳನ್ನು ಬಂಧಿಸಿದ ಸಿಸಿಬಿ ಪೊಲೀಸರು 20 ದಿನದ ಗಂಡು ಮಗುವನ್ನು ರಕ್ಷಣೆ ಮಾಡಿದ್ದಾರೆ.

ಬೆಂಗಳೂರು: ಹಸುಗೂಸು ಮಾರಾಟ ಮಾಡುತ್ತಿದ್ದಾಗ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಗ್ಯಾಂಗ್
ಬೆಂಗಳೂರಿನಲ್ಲಿ ಹಸುಗೂಸು ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿದ ಸಿಸಿಬಿ ಪೊಲೀಸರು (ಸಾಂದರ್ಭಿಕ ಚಿತ್ರ)
Follow us on

ಬೆಂಗಳೂರು, ನ.27: ಹಸುಗೂಸು ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ (CCB) ಪೊಲೀಸರು ಬಂಧಿಸಿದ ಘಟನೆ ನಗರದ (Bengaluru) ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ. ಆರೋಪಿಗಳನ್ನು ಬಂಧಿಸಿದ ಸಿಸಿಬಿ ಪೊಲೀಸರು 20 ದಿನದ ಗಂಡು ಮಗುವನ್ನು ರಕ್ಷಣೆ ಮಾಡಿದ್ದಾರೆ.

ತಮಿಳುನಾಡು ಮೂಲದ ಕಣ್ಣನ್ ರಾಮಸ್ವಾಮಿ, ಮುರುಗೇಶ್ವರಿ, ಹೇಮಲತಾ ಹಾಗೂ ಶರಣ್ಯ ಬಂಧಿತ ಆರೋಪಿಗಳಾಗಿದ್ದಾರೆ. ಕಾರಿನಲ್ಲಿ ಬಂದು ಮಗು ಮಾರಾಟಕ್ಕೆ ಮುಂದಾದಾಗ ಆರೋಪಿಗಳು ಸಿಸಿಬಿ ಪೊಲೀಸರಿಗೆ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ.

ಇದನ್ನೂ ಓದಿ: ಇನ್​ಸ್ಪೆಕ್ಟರ್ ಶಂಕರ್ ನಾಯಕ್ ವಿರುದ್ಧದ ಪ್ರಕರಣ ಸಿಸಿಬಿಗೆ ವರ್ಗಾವಣೆ, ದಾಖಲಾಯ್ತು ಮತ್ತೊಂದು ಪ್ರಕರಣ

ಸುಮಾರು 20 ದಿನಗಳ ಗಂಡು ಮಗುವನ್ನು ರಕ್ಷಣೆ ಮಾಡಿದ ಪೊಲೀಸರು, ಆರೋಪಿಗಳು ಬಂಧಿಸಿ ವಿಚಾರಣೆ ಮಾಡುತ್ತಿದ್ದಾರೆ. ಮಕ್ಕಳಾಗದ ದಂಪತಿಗಳಿಗೆ ಲಕ್ಷಲಕ್ಷಕ್ಕೆ ಮಗುವನ್ನು ಮಾರಾಟ ಮಾಡುತ್ತಿದ್ದರು ಎನ್ನಲಾಗುತ್ತಿದೆ. ಘಟನೆ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ