AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನೈಜೀರಿಯಾ ಡ್ರಗ್ಸ್​ ಸರಬರಾಜುದಾರರ ಸೆರೆ; ಬಂಧಿತರಿಂದ 50 ಲಕ್ಷ ರೂ. ಮೌಲ್ಯದ 400 ಗ್ರಾಂ ಎಂಡಿಎಂಎ ವಶ

ಬಂಧಿತರಿಂದ 50 ಲಕ್ಷ ಮೌಲ್ಯದ 400 ಗ್ರಾಂ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನ ಪುಲಕೇಶಿನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ನೈಜೀರಿಯಾ ಡ್ರಗ್ಸ್​ ಸರಬರಾಜುದಾರರ ಸೆರೆ; ಬಂಧಿತರಿಂದ 50 ಲಕ್ಷ ರೂ. ಮೌಲ್ಯದ 400 ಗ್ರಾಂ ಎಂಡಿಎಂಎ ವಶ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Mar 05, 2022 | 4:41 PM

Share

ಬೆಂಗಳೂರು: ಸಿಸಿಬಿ ಪೊಲೀಸರ(CCB Police) ಕಾರ್ಯಾಚರಣೆ ವೇಳೆ ವಿದ್ಯಾರ್ಥಿಗಳು(Students), ಉದ್ಯಮಿಗಳಿಗೆ ಮಾದಕ ವಸ್ತು ಸರಬರಾಜು ಮಾಡುತ್ತಿದ್ದ ಆರೋಪಿಗಳು ಸೆರೆ ಸಿಕ್ಕಿದ್ದಾರೆ. ನೈಜೀರಿಯ ಪ್ರಜೆಗಳಾದ ಕ್ರಿಸ್ಟಿಯನ್ ಇಯ್ಕ್ ಚುಕ್ವು ಹಾಗೂ ಜಾನ್ ಓಬಿನಾ ಬಂಧಿತ ಆರೋಪಿಗಳು. ಬಂಧಿತರಿಂದ 50 ಲಕ್ಷ ಮೌಲ್ಯದ 400 ಗ್ರಾಂ ಎಂಡಿಎಂಎ(MDMA) ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನ ಪುಲಕೇಶಿನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಆನ್‌ಲೈನ್‌ನಲ್ಲಿ ಗ್ರಾಹಕರನ್ನು ಸಂಪರ್ಕಿಸಿ ಡ್ರಗ್ಸ್‌ ಸರಬರಾಜು; ಆರೋಪಿ ಬಂಧನ

ಆನ್‌ಲೈನ್‌ನಲ್ಲಿ ಗ್ರಾಹಕರನ್ನು ಸಂಪರ್ಕಿಸಿ ಡ್ರಗ್ಸ್‌ ಸರಬರಾಜು ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಕೆ.ಜಿ.ಹಳ್ಳಿ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಆಫ್ರಿಕಾ ಮೂಲದ ನೆಲ್ಸನ್‌(29) ಬಂಧಿತ ಆರೋಪಿ. ಬಂಧಿತನಿಂದ 25 ಲಕ್ಷ ರೂ. ಮೌಲ್ಯದ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ. ಇಂಟರ್‌ನೆಟ್‌, ವಾಟ್ಸಾಪ್‌ ಕಾಲ್‌ನಲ್ಲಿ ಗ್ರಾಹಕರ ಜತೆ ಡೀಲ್‌ ಮಾಡಿ, ಆನ್‌ಲೈನ್ ಮೂಲಕವೇ ಗ್ರಾಹಕರಿಂದ ಹಣ ಸ್ವೀಕರಿಸುತ್ತಿದ್ದ. ನಿರ್ಜನ ಪ್ರದೇಶದಲ್ಲಿ ಡ್ರಗ್ಸ್ ತಂದಿಟ್ಟು ಲೊಕೇಷನ್, ಫೋಟೋ ಕಳುಹಿಸುತ್ತಿದ್ದ. ವಿಡಿಯೋ ತನ್ನ ಗ್ರಾಹಕರಿಗೆ ಶೇರ್‌ ಮಾಡಿ ಡ್ರಗ್ಸ್‌ ಪೂರೈಸುತ್ತಿದ್ದ ಎಂಬುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.

ಕೊಪ್ಪಳ: ಯುವಕನ ಮಿಸ್ಸಿಂಗ್ ಕೇಸ್​ಗೆ ತಿರುವು; ಹೆತ್ತ ಮಗನನ್ನೇ ಕೊಲೆ ಮಾಡಿದ ತಾಯಿ

ಯುವಕನ ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಿರುವು ಸಿಕ್ಕಿದ್ದು, ಹೆತ್ತ ಮಗನನ್ನೆ ತಾಯಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಗ್ರಾಪಂ ಸದಸ್ಯ, ಮಗನೊಂದಿಗೆ ಸೇರಿ ತನ್ನ ಸಣ್ಣ ಮಗನನ್ನೆ ಕೊಲೆ ಮಾಡಿ ತಾಯಿ ಹೂತು ಹಾಕಿದ್ದಾಳೆ. ಅನೈತಿಕ ಸಂಭಂದಕ್ಕೆ ಅಡ್ಡಿಯಾಗುತ್ತಾನೆಂದು‌ ತಾಯಿಯೇ ಮಗನನ್ನು ಕೊಲೆ ಮಾಡಿದ್ದಾಳೆ. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಮ್ಯಾದರಡೊಕ್ಕಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮ್ಯಾದರಡೊಕ್ಕಿ ಗ್ರಾಮದ ಯುವಕ ಬಸವರಾಜ್ ದೋಟಿಹಾಳ ಜನವರಿ 16 ರಂದು ಕಾಣೆಯಾಗಿದ್ದ. ಫೆಬ್ರವರಿ ಅಲ್ಲಿ ತಾವರಗೇರಾ ಠಾಣೆಯಲ್ಲಿ ಬಸವರಾಜ್ ನಾಪತ್ತೆ ಪ್ರಕರಣ ದಾಖಲಾಗಿತ್ತು. ಪ್ರಕರಣ ಬೆನ್ನು ಹತ್ತಿದ ಪೊಲೀಸರಿಗೆ ಸದ್ಯ ಶಾಕ್ ಆಗಿದ್ದು, ಹೆತ್ತ ತಾಯಿಯೇ ಮಗನನ್ನು ಕೊಲೆ ಮಾಡಿ ಹೂತು‌ ಹಾಕಿರುವುದು ಬೆಳಕಿಗೆ ಬಂದಿದೆ.

ಧಾರವಾಡ: ಮಹಿಳೆಯ ಮೇಲೆ ಅತ್ಯಾಚಾರದ ಆರೋಪ; ಯೂಟ್ಯೂಬ್ ಚಾನೆಲ್ ಪತ್ರಕರ್ತನ ಬಂಧನ

ಮಹಿಳೆಯ ಮೇಲೆ ಅತ್ಯಾಚಾರದ ಆರೋಪ ಕೇಳಿಬಂದಿದ್ದು, ಯೂಟ್ಯೂಬ್ ಚಾನೆಲ್ ಪತ್ರಕರ್ತನನ್ನು ಪೊಲೀಸರು ಬಂಧಿಸಿದ್ದಾರೆ. ಕೃಷ್ಣಮೂರ್ತಿ ಕುಲಕರ್ಣಿ ಬಂಧಿತ ಪತ್ರಕರ್ತ. ಧಾರವಾಡ ಗ್ರಾಮೀಣ ಪ್ರದೇಶದ ಮಹಿಳೆ ಅತ್ಯಾಚಾರವೆಸಗಿದ್ದಲ್ಲದೇ ಹಲ್ಲೆ ಮಾಡಿದ್ದಾನೆ ಎಂದು ಆರೋಪ ಮಾಡಿದ್ದರು. ಈ ಸಂಬಂಧ ವಿದ್ಯಾಗಿರಿ ಠಾಣೆಗೆ ಮಹಿಳೆ ದೂರು ನೀಡಿದ್ದರು. ಹೀಗಾಗಿ ಪೊಲೀಸರು ಕುಲಕರ್ಣಿಯನ್ನು ಬಂಧಿಸಿದ್ದಾರೆ.

ಕೆಲಸ ಕೊಡಿಸೋದಾಗಿಯೂ ಆಮಿಷವೊಡ್ಡಿದ್ದ ಕುಲಕರ್ಣಿ, ನಾಲ್ಕು ದಿನ ನಗರದ ಮಹಿಷಿ ರಸ್ತೆಯಲ್ಲಿರೋ ಮನೆಯಲ್ಲಿಯೇ ಇಟ್ಟುಕೊಂಡಿದ್ದ. ನಾಲ್ಕು ದಿನಗಳ ಕಾಲ ಅತ್ಯಾಚಾರವೆಸಗಿದ್ದಾನೆ. ಅದನ್ನು ಪ್ರಶ್ನಿಸಿದ್ದಕ್ಕೆ ಮಹಿಳೆಯ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಮಹಿಳೆ ದೂರು ನೀಡಿದ್ದಾಳೆ.

ಇದನ್ನೂ ಓದಿ: ಪರಪ್ಪನ ಅಗ್ರಹಾರದಲ್ಲಿ ಡ್ರಗ್ಸ್ ಸಪ್ಲೈ ಮಾಡುವುದರ ಬಗ್ಗೆ ಮಾಹಿತಿ ಬಾಯ್ಬಿಟ್ಟ ಆರೋಪಿ ಗಂಗಾಧರ್, ಕೆಲ ಸಜಾ ಬಂಧಿ ಕೈದಿಗಳು ವಶಕ್ಕೆ

ಅಕ್ರಮವಾಗಿ ಸಾಗಿಸುತ್ತಿದ್ದ 6 ಲಕ್ಷ ಮೌಲ್ಯದ 280 ಕ್ವಿಂಟಲ್ ಅಕ್ಕಿ ಜಪ್ತಿ; ಲಾರಿ ಹಾಗೂ ಚಾಲಕ ಅರೆಸ್ಟ್ ಮಾಡಿದ ಗೋಗಿ ಪೊಲೀಸರು

Published On - 4:25 pm, Sat, 5 March 22