Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಅಂತಾರಾಷ್ಟ ಮಟ್ಟದ ಮೋಸ್ಟ್ ವಾಂಟೆಡ್​ ಕ್ರಿಮಿನಲ್​ಗಳ ಬಂಧನ, ಭಾರತಕ್ಕೆ ನುಸುಳಿದ್ದೇ ರೋಚಕ

ಬೇರೆ-ಬೇರೆ ದೇಶ, ರಾಜ್ಯಗಳಿಂದ ಬಂದು ಬೆಂಗಳೂರಿನಲ್ಲಿ ಕ್ರಿಮಿನಲ್​ ಚಟುವಟಿಕೆಗಳಲ್ಲಿ ಭಾಗಿಯಾಗುವವರ ಸಂಖ್ಯೆ ದಿನೇ ದಿನೇ ಹೆಚ್ಚತ್ತಲೇ ಇದೆ. ಇದರಿಂದ ಒಂದು ರೀತಿ ಬೆಂಗಳೂರು ಕ್ರಿಮಿನಲ್​ಗಳ ಅಡ್ಡೆಯಾಗ್ಬಿಟ್ಟಿದೆ. ಅದರಂತೆ ಇದೀಗ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಮೋಸ್ಟ್ ವಾಂಟೆಡ್​ ಕ್ರಿಮಿನಲ್​​​​​ಗಳು ಸಿಕ್ಕಿಬಿದ್ದಿದ್ದಾರೆ.

ಬೆಂಗಳೂರಿನಲ್ಲಿ ಅಂತಾರಾಷ್ಟ ಮಟ್ಟದ ಮೋಸ್ಟ್ ವಾಂಟೆಡ್​ ಕ್ರಿಮಿನಲ್​ಗಳ ಬಂಧನ, ಭಾರತಕ್ಕೆ ನುಸುಳಿದ್ದೇ ರೋಚಕ
ಮೋಸ್ಟ್​ ವಾಂಟೆಡ್ ಕ್ರಿಮಿನಲ್​​​​​ಗಳ ಬಂಧನ
Follow us
Prajwal Kumar NY
| Updated By: ರಮೇಶ್ ಬಿ. ಜವಳಗೇರಾ

Updated on:Aug 24, 2023 | 8:09 AM

ಬೆಂಗಳೂರು, (ಆಗಸ್ಟ್ 24): ಸಿಲಿಕಾನ್ ಸಿಟಿ ಬೆಂಗಳೂರು(Bengaluru) ದಿನೇ ದಿನೇ ದೊಡ್ಡದಾಗಿ ಬೆಳೆಯುತ್ತ ಹೋದಂತೆ ಇನ್ನೊಂದೆಡೆ ದಿನೇ ದಿನೆ ಅಪರಾಧ ಪ್ರಕರಣಗಳ(criminals) ಸಂಖ್ಯೆ ಏರಿಕೆಯಾಗುತ್ತಲೇ ಇವೆ. ಬೇರೆ-ಬೇರೆ ದೇಶ, ರಾಜ್ಯಗಳಿಂದಲೂ ಬಂದು ಇಲ್ಲಿ ಕ್ರಿಮಿನಲ್​ ಚಟುವಟಿಕೆಗಳಲ್ಲಿ ಭಾಗಿಯಾಗುವವರ ಸಂಖ್ಯೆ ಹೆಚ್ಚತ್ತಲೇ ಇದ್ದು, ಒಂದು ರೀತಿ ಬೆಂಗಳೂರು ಕ್ರಿಮಿನಲ್​ಗಳ ಸಡ್ಡೆಯಾಗ್ಬಿಟ್ಟಿದೆ. ಅದರಂತೆ ಇದೀಗ ಬೆಂಗಳೂರಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಮಿನಲ್​​​​​ಗಳು ಸಿಕ್ಕಿಬಿದ್ದಿದ್ದಾರೆ. ಹೌದು…ಶ್ರೀಲಂಕಾದ ಮೋಸ್ಟ್​ ವಾಂಟೆಡ್ ಕ್ರಿಮಿನಲ್​ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೂವರು ವಿದೇಶಿ ಅಪರಾಧಿಗಳು ಹಾಗೂ ಇವರಿಗೆ ಆಶ್ರಯ ನೀಡಿದ್ದವನನ್ನು ಸಿಸಿಬಿ ಅರೆಸ್ಟ್ ಮಾಡಿದೆ. ಶ್ರೀಲಂಕಾದ(sri lanka) ಕಾಸಿನ್ ಕುಮಾರ್, ಅಮಿಲಾ ನುವಾನ್, ರಂಗ ಪ್ರಸಾದ್ ಬಂಧಿತ ಆರೋಪಿಗಳು. ಇನ್ನು ಇವರಿಗೆ ಬೆಂಗಳೂರಿನಲ್ಲಿ ಆಶ್ರಯ ಜೈ ಪರಮೇಶ್ ಅಲಿಯಾಸ್ ಜಾಕ್​ ಎನ್ನುವಾತನನ್ನು ಸಹ ಬಂಧಿಸಲಾಗಿದೆ.

ಕೊಲೆ ಆರೋಪಿಯೂ ಆಗಿರುವ ಜೈ ಪರಮೇಶ್, ಯಲಹಂಕದ ವಿಶ್ವ ಪ್ರಕೃತಿ ಅಪಾರ್ಟ್​ಮೆಂಟ್​ನಲ್ಲಿ ಮೂವರು ಪಾತಕಿಗಳಿಗೆ ಆಶ್ರಯ ಕಲ್ಪಿಸಿದ್ದ. ಪಾತಕಿ ಕಾಸಿನ್ ಕುಮಾರ್ ವಿರುದ್ಧ ಶ್ರೀಲಂಕಾದಲ್ಲಿ 4 ಕೊಲೆ ಪ್ರಕರಣಗಳಿವೆ. ಮತ್ತೊಬ್ಬ ಅಮಿಲಾ ನುವಾನ್ ಮೇಲೆ 5 ಕೊಲೆ ಕೇಸ್​​ಗಳಿವೆ. ಇನ್ನು ರಂಗ ಪ್ರಸಾದ್ ವಿರುದ್ಧ ಹಲ್ಲೆ, ಕೊಲೆ ಕೇಸ್​ ಇರುವ ಬಗ್ಗೆ ಮಾಹಿತಿ ಇದೆ. ಇನ್ನು ಆರೋಪಿಗಳ ಬಳಿ 13 ಮೊಬೈಲ್​, ಶ್ರೀಲಂಕಾದ ವಿವಿಧ ವಿಸಿಟಿಂಗ್ ಕಾರ್ಡ್, ಬಸ್​ ಟಿಕೆಟ್​, ಪೇಪರ್​ ಕಟ್ಟಿಂಗ್ಸ್​​, ರೆಂಟಲ್​ ಅಗ್ರಿಮೆಂಟ್​ ಪ್ರತಿ, ಆಧಾರ್​ ಕಾರ್ಡ್​, ಚುನಾವಣಾ ಗುರುತಿನ ಚೀಟಿಯ ಜೆರಾಕ್ಸ್ ಪ್ರತಿ ಸಿಕ್ಕಿವೆ.

ಇದನ್ನೂ ಓದಿ: ಬೆಂಗಳೂರು ಪೊಲೀಸ್ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ ಸೃಷ್ಟಿಸಿದ್ದ ವ್ಯಕ್ತಿ ಕೊನೆಗೂ ಪೊಲೀಸ್ ಬಲೆಗೆ

ಜಲಾನ್ ಎಂಬ ವ್ಯಕ್ತಿಯ ಆದೇಶದ ಮೇರೆಗೆ ಅಪಾರ್ಟ್ಮೆಂಟ್ ನಲ್ಲಿ ಅರೋಪಿಗಳು ವಾಸವಿದ್ದರು ಎನ್ನಲಾಗಿದ್ದು, ಸದ್ಯ ಜಲಾನ್ ಎಂಬಾತ ಓಮನ್ ದೇಶದಲ್ಲಿ ಅರೆಸ್ಟ್ ಆಗಿದ್ದಾನೆ. ಜಲಾನ್ ಶ್ರೀಲಂಕಾ, ಭಾರತ, ಪಾಕಿಸ್ತಾನಕ್ಕೆ ಲಿಂಕ್ ಹೊಂದಿದ್ದು, ಡ್ರಗ್ಸ್ ಟ್ರಾಫಿಕಿಂಕ್ ನಡೆಸುತಿದ್ದ ಎಂದು ತಿಳಿದುಬಂದಿದೆ. ಇನ್ನು ಶ್ರೀಲಂಕಾದ LTTE ಗೆ ಲಿಂಕ್ ಇರುವ ಬಗ್ಗೆ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಬಂಧಿತ ಲಂಕಾದ ಅರೋಪಿಗಳು ಎಲ್ ಟಿ ಟಿ ಇ ಗೆ ಸೇರಿದವರು ಇರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಸಿಸಿಬಿ ತನಿಖೆ ನಡೆಸಿದೆ.

ಅಷ್ಟಕ್ಕೂ ಈ ಶ್ರೀಲಂಕಾದ ಮೋಸ್ಟ್ ವಾಂಟೆಡ್‌ ಕ್ರಿಮಿನಲ್​ಗಳು ಭಾರತಕ್ಕೆ ಪ್ರವೇಶಿದ್ದೇ ರೋಚಕವಾಗಿದೆ. ಶ್ರೀಲಂಕಾದಿಂದ ಭಾರತಕ್ಕೆ ಬೋಟ್ ನಲ್ಲಿ ಆಗಮಿಸಿದ್ದು, ಬೋಟ್​ನಲ್ಲಿ ಕೋಸ್ಟ್ ಗಾರ್ಡ್ ಮತ್ತು ನೌಕಾಪಡೆಯ ಕಣ್ತಪ್ಪಿಸಿ ಭಾರತ ಪ್ರವೇಶಿಸಿದ್ದಾರೆ. ಚನ್ನೈ ಬಳಿಯ ಸಮುದ್ರ ತೀರಕ್ಕೆ ಬೋಟ್​​ನಲ್ಲಿ ಬಂದಿದ್ದು, ಬಳಿಕ ಅಲ್ಲಿಂದ ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ಬಂದಿಳಿದಿದ್ದರು. ಸದ್ಯದ ಮಾಹಿತಿ ಪ್ರಕಾರ ಕಳೆದ ಇಪ್ಪತ್ತು ದಿನಗಳ ಹಿಂದೆ ಶ್ರೀಲಂಕಾದಿಂದ ಭಾರತಕ್ಕೆ ಬಂದಿದ್ದರು ಎನ್ನಲಾಗಿದೆ.

ಸದ್ಯ ಅರೋಪಿಗಳ ವಿರುದ್ದ ಫಾರಿನ್ ಆಕ್ಟ್ 1946,(U/s -14,14(c) ಐಪಿಸಿ ಸೆಕ್ಷನ್​ 109,120B,212 ಅಡಿಯಲ್ಲಿ ಸಿಸಿಬಿ ಪ್ರಕರಣ ದಾಖಲಿಕೊಂಡಿದ್ದುಮ ತನಿಖೆ ಕೈಗೊಂಡಿದೆ.

ಬೆಂಗಳೂರಿನ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:06 am, Thu, 24 August 23

ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು