ಬಿಬಿಎಂಪಿ ಚುನಾವಣೆ: ಮನೆಗೆ ನುಗ್ಗಿ ರೌಡಿಶೀಟರ್​​ಗಳಿಗೆ ಖಡಕ್​​ ವಾರ್ನಿಂಗ್​​ ಕೊಡುತ್ತಿರುವ ಸಿಸಿಬಿ ಪೊಲೀಸರು

ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆ ಬೆಂಗಳೂರು ಸಿಸಿಬಿ ಪೊಲೀಸರು ರೌಡಿಶೀಟರ್​​ಗಳ ಮೇಲೆ ಹದ್ದಿನ‌ ಕಣ್ಣಿಟ್ಟಿದ್ದಾರೆ.

ಬಿಬಿಎಂಪಿ ಚುನಾವಣೆ: ಮನೆಗೆ ನುಗ್ಗಿ ರೌಡಿಶೀಟರ್​​ಗಳಿಗೆ ಖಡಕ್​​ ವಾರ್ನಿಂಗ್​​ ಕೊಡುತ್ತಿರುವ ಸಿಸಿಬಿ ಪೊಲೀಸರು
ಕೇಂದ್ರ ಅಪರಾಧ ವಿಭಾಗ
Follow us
TV9 Web
| Updated By: ವಿವೇಕ ಬಿರಾದಾರ

Updated on:Jul 01, 2022 | 3:40 PM

ಬೆಂಗಳೂರು: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆ ಬೆಂಗಳೂರು (Bngaluru) ಸಿಸಿಬಿ ಪೊಲೀಸರು (CCB Police) ರೌಡಿಶೀಟರ್​​ಗಳ ಮೇಲೆ ಹದ್ದಿನ‌ ಕಣ್ಣಿಟ್ಟಿದ್ದು, ರಾಜಕಾರಣಿಗಳ ಜೊತೆಗೆ ಪೋಟೋಸ್ ತೆಗೆದುಕೊಂಡು ವೈರಲ್ ಮಾಡುತ್ತಿರುವ ಕೆಲ ರೌಡಿಗಳ ಮನೆಗೆ ಹೋಗಿ ಪೊಲೀಸರು ವಾರ್ನಿಂಗ್​ ಮಾಡುತ್ತಿದ್ದಾರೆ. ಕಳೆದ ಒಂದು ವಾರದಿಂದ ಈ ಬಗ್ಗೆ ಸ್ಪೆಷಲ್ ಡ್ರೈವ್ ಶುರುಮಾಡಿರುವ ಪೊಲೀಸರು ನಗರದ ಕುಖ್ಯಾತ ರೌಡಿಶೀಟರ್ ಗಳ ಚಲನವಲನಗಳು, ಅವರ ಕೇಸ್​​ಗಳ ಬಗ್ಗೆ ನಿಗಾ ಇಟ್ಟಿದ್ದಾರೆ. ಯಾವುದೇ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗುವ ಶಂಕೆ ವ್ಯಕ್ತವಾದರೆ ತಕ್ಷಣ ಬಂಧಿಸಲು ಮೇಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

ಇದನ್ನು ಓದಿ: ಅನಾರೋಗ್ಯದಿಂದ ಬೇಸತ್ತು ಮೂರೂವರೆ ವರ್ಷದ ಪುತ್ರಿ ಕೊಂದು ತಾನು ನೇಣಿಗೆ ಶರಣಾದ ತಾಯಿ

ಬಿಬಿಎಂಪಿ ವಾರ್ಡ್ ಮರು ವಿಂಗಡಣೆಗೆ ಆಕ್ಷೇಪ ಸಲ್ಲಿಸಲು ಜುಲೈ 8 ರವರೆಗೆ  ಅವಕಾಶ

ಇನ್ನೂ ಬಿಬಿಎಂಪಿ ವಾರ್ಡ್ ಮರು ವಿಂಗಡಣೆಗೆ ಆಕ್ಷೇಪ ಸಲ್ಲಿಸಲು ಸರ್ಕಾರ ಜುಲೈ 8 ರವರೆಗೆ ಕಾಲಾವಕಾಶ ನೀಡಿದೆ. ಇದುವರೆಗೆ ೨ ಸಾವಿರಕ್ಕೂ ಹೆಚ್ಚು ಆಕ್ಷೇಪ ಸಲ್ಲಿಕೆಯಾಗಿದ್ದು, ವಾರ್ಡ್ ಬೌಂಡರಿಗೆ ಸಂಬಂಧಿಸಿಯೇ ಹೆಚ್ಚು ಆಕ್ಷೇಪ ಸಲ್ಲಿಕೆಯಾಗಿದೆ. ವಾರ್ಡ್ ಹೆಸರುಗಳ ಮರು ನಾಮಕರಣಕ್ಕೂ ಸಾಕಷ್ಟು ಆಕ್ಷೇಪ ವ್ಯಕ್ತವಾಗುತ್ತಿದೆ. ಇನ್ನೂ ಎಂಟು ದಿನಗಳ ಕಾಲಾವಕಾಶದ ಬಳಿಕ ಆಕ್ಷೇಪಗಳನ್ನು ಸರ್ಕಾರ ಪರಿಶೀಲಿಸಲಿದೆ.

ಬಿಬಿಎಂಪಿ ಚುನಾವಣೆಯಲ್ಲಿ 8 ಕ್ಕೆ8 ವಾರ್ಡ್ ಗಳನ್ನು ನಾವು ಗೆಲ್ಲಿಸಬೇಕು: ಕಟ್ಟಾ ಸುಬ್ರಹ್ಮಣ್ಯ ನಾಯ್ಡು

ವಾರ್ಡ್ ವಿಂಗಡಣೆಗಳ ಕುರಿತು ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು  ಮಾತನಾಡಿ ನಮಗೆ ಹೆಂಗೆ ಬೇಕೋ ಹಂಗೆ ಮುಖ್ಯಮಂತ್ರಿ ಗಳು ವಾರ್ಡ್​​ಗಳನ್ನು ಮರು ವಿಂಗಡಣೆ ಮಾಡಿದ್ದಾರೆ. ಆದರೆ ಇಲ್ಲಿ ಗೆಲ್ಲಿಸೋದು ನಮ್ಮ ಕರ್ತವ್ಯ. 8 ಕ್ಕೆ8 ವಾರ್ಡ್ ಗಳನ್ನು ನಾವು ಗೆಲ್ಲಿಸಬೇಕು. ಇದಕ್ಕೆ ಎಲ್ಲ ರೀತಿಯ ಸಹಕಾರ ವನ್ನು ಬೊಮ್ಮಾಯಿ ಅವರು ಕೊಡುತ್ತಾರೆ ಎಂದರು.

ಇದನ್ನು ಓದಿ: ಕೆರೆಗಳಿಗೆ ಸಕ್ಕರೆ ಕಾರ್ಖಾನೆಯ ಕಲುಷಿತ ನೀರು: ಸಂಕಷ್ಟಕ್ಕೆ ಸಿಲುಕಿದ ಬಳ್ಳಾರಿಯ ಅನ್ನದಾತರು

ಮೇ 20 ರಂದು ಸುಪ್ರೀಂ ಕೋರ್ಟ್​ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣಾ ಪ್ರಕ್ರಿಯೆಯನ್ನು ಎರಡು ತಿಂಗಳೊಳಗೆ (8 ವಾರ) ಆರಂಭಿಸಬೇಕು ಎಂದು ಕರ್ನಾಟಕ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿತ್ತು. ಈ ಸಂಬಂಧ ವಾರ್ಡ್​ ಪುನರ್​ವಿಂಗಡನೆ ಮತ್ತು ಮೀಸಲಾತಿಯನ್ನೂ ಕಾಲಮಿತಿಯೊಳಗೆ ನಿಗದಿಪಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನವನ್ನೂ ನೀಡಲಾಗಿದೆ.

Published On - 3:15 pm, Fri, 1 July 22

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು