ಕರ್ನಾಟಕದ ಚಿಂತಕರು, ಸಾಹಿತಿಗಳಿಗೆ ಜೀವ ಬೆದರಿಕೆ: 7 ಜನರಿಗೆ ಒಬ್ಬನೇ ಕೊಲೆ ಬೆದರಿಕೆ ಪತ್ರ ಬರೆದಿರುವುದು ದೃಢ

ಕರ್ನಾಟಕದ ಲೇಖಕರು, ಚಿಂತಕರು ಹಾಗೂ ಸಾಹಿತಿಗಳಿಗೆ ನಿದ್ದೆಗೆಡಿಸಿದ್ದ ಕೊಲೆ ಬೆದರಿಕೆ ಪತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಫೋಟ ಮಾಹಿತಿ ಲಭ್ಯವಾಗಿದೆ. ಒಬ್ಬನೇ ವ್ಯಕ್ತಿ 7 ಜನರಿಗೂ ಪತ್ರ ಬರೆದು ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಸಿಸಿಬಿ ಅಧಿಕಾರಿಗಳ ತನಿಖೆಯಿಂದ ತಿಳಿದುಬಂದಿದ್ದು, ಅಲ್ಲದೇ ಆ ವ್ಯಕ್ತಿ ಇದೀಗ ಆ ವ್ಯಕ್ತಿಯ ಪತ್ತೆಗೆ ಸಿಸಿಬಿ ಬಲೆ ಬೀಸಿದೆ.

ಕರ್ನಾಟಕದ ಚಿಂತಕರು, ಸಾಹಿತಿಗಳಿಗೆ ಜೀವ ಬೆದರಿಕೆ: 7 ಜನರಿಗೆ ಒಬ್ಬನೇ ಕೊಲೆ ಬೆದರಿಕೆ ಪತ್ರ ಬರೆದಿರುವುದು ದೃಢ
ಸಿಎಂ ಭೇಟಿಯಾಗಿದ್ದ ಸಾಹಿತಿಗಳು
Follow us
Shivaprasad
| Updated By: ರಮೇಶ್ ಬಿ. ಜವಳಗೇರಾ

Updated on: Aug 29, 2023 | 12:05 PM

ಬೆಂಗಳೂರು, (ಆಗಸ್ಟ್ 29): ಕರ್ನಾಟಕದ ಚಿಂತಕರು, ಸಾಹಿತಿಗಳಿಗೆ ಕೊಲೆ ಬೆದರಿಕೆ (life threatening)ಪತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿದ್ದು, ಸಿಸಿಬಿ (CCB) ಅಧಿಕಾರಿಗಳ ತನಿಖೆಯಿಂದ ಮಹತ್ವದ ಮಾಹಿತಿ ಲಭ್ಯವಾಗಿದೆ. ಒಬ್ಬನೇ ವ್ಯಕ್ತಿ 7 ಜನರಿಗೂ ಪತ್ರ ಬರೆದು ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ. ದಾವಣಗೆರೆ ಮೂಲದಿಂದ ಬೆದರಿಕೆ ಪತ್ರ ಬಂದಿರುವುದು ಖಚಿತವಾಗಿದ್ದು, ಒಬ್ಬನೇ ಪತ್ರ ಬರೆದು ಬೇರೆ ಬೇರೆ ಜಿಲ್ಲೆ, ತಾಲೂಕುಗಳಿಗೆ ಹೋಗಿ ಪತ್ರಗಳನ್ನು ಪೋಸ್ಟ್ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದ್ದು, ಇದೀಗ ಆ ವ್ಯಕ್ತಿಯ ಪತ್ತೆಗೆ ಸಿಸಿಬಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಕರ್ನಾಟಕದ ಲೇಖಕರು ಹಾಗೂ ಸಾಹಿತಿಗಳು ಸೇರಿದಂತೆ ಒಟ್ಟು ಹದಿನೈದಕ್ಕೂ ಹೆಚ್ಚು ಬುದ್ಧಿಜೀವಿಗಳಿಗೆ(scholar) ಜೀವ ಬೆದರಿಕೆ(life threatening) ಹಾಕಲಾಗಿದೆ. ಪ್ರೊ ಕಲ್ಬುರ್ಗಿ ಹಾಗೂ ಗೌರಿ ಲಂಕೇಶ್ ಬಳಿಕ ಈಗ ಮತ್ತೆ ಕಳೆದೊಂದು ವರ್ಷದಿಂದ ಸಾಹಿತಿ, ಲೇಖಕರಿಗೆ ಜೀವ ಬೆದರಿಕೆ ಬಂದಿರುವುದು ಬುದ್ಧಿಜೀವಿಗಳು ಆತಂಕಗೊಂಡಿದ್ದಾರೆ. ಕೋಮುವಾದ, ಜಾತಿವಾದ, ಮೌಡ್ಯವಿರೋಧಿ ನಿಲುವುಳ್ಳ ಸಾಹಿತಿಗಳು ಹಾಗೂ ಬುದ್ಧಿಜೀವಿಗಳಿಗೆ ಪತ್ರದ ಮೂಲಕ ಜೀವ ಬೆದರಿಕೆ ಹಾಕಲಾಗಿದೆ. ಇದರಿಂದ , ಸಾಹಿತಿಗಳು ಹಾಗೂ ಬುದ್ಧಿಜೀವಿಗಳು ಮಾನಸಿಕ ಹಿಂಸೆಗೊಳಗಾಗಿದ್ದು, ಯಾವ ಸಂದರ್ಭದಲ್ಲಾದರೂ ತಮ್ಮ ಮೇಲೆ ದಾಳಿಯಾಗಬಹುದು ಎನ್ನುವ ಆತಂಕದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಹಿತಿ, ಲೇಖಕರು ತಮಗೆ ರಕ್ಷಣೆ ನೀಡಬೇಕೆಂದು ಸರ್ಕಾರದ ಮೊರೆ ಹೋಗಿದ್ದರು.

ಇದನ್ನೂ ಓದಿ: ಕರ್ನಾಟಕದ ಸಾಹಿತಿಗಳಿಗೆ ಪದೇ ಪದೇ ಬೆದರಿಕೆ ಪತ್ರ: ಸಿಎಂ ಭೇಟಿ ಬೆನ್ನಲೆ ತನಿಖಾಧಿಕಾರಿ ನೇಮಕಕ್ಕೆ ಸೂಚಿಸಿದ ಪೊಲೀಸ್ ಇಲಾಖೆ

ಕೆ. ಮರುಳಸಿದ್ದಪ್ಪ ನೇತೃತ್ವದಲ್ಲಿ ಪರಮೇಶ್ವರ ಅವರನ್ನು ಮೊನ್ನೇ ಅಷ್ಟೇ ಭೇಟಿ ಮಾಡಿದ್ದ ಸಾಹಿತಿಗಳು, ನಿರಂತರವಾಗಿ ಬೆದರಿಕೆ ಕರೆಗಳು ಮತ್ತು ಪತ್ರಗಳು ಬರುತ್ತಿರುವ ಕುರಿತು ಮಾಹಿತಿ ನೀಡಿದ್ದರು. ಈ ಕುರಿತು ಗೃಹ ಸಚಿವರು ವಿವರವಾಗಿ ಮಾಹಿತಿ ಪಡೆದುಕೊಂಡು ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ