ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿರುವ ಬಾಂಗ್ಲಾದೇಶ ನಿವಾಸಿಗಳ ಮನೆ ಮೇಲೆ ಸಿಸಿಬಿ ಪೊಲೀಸರಿಂದ ದಾಳಿ

| Updated By: Ganapathi Sharma

Updated on: May 30, 2024 | 1:00 PM

CCB Raid on illegal Bangladesh immigrants: ಅಕ್ರಮ ಬಾಂಗ್ಲಾದೇಶ ವಲಸಿಗರ ವಿರುದ್ಧ ಬೆಂಗಳೂರಿನಲ್ಲಿ ಪೊಲೀಸರು ಮತ್ತೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಬಾಂಗ್ಲಾದೇಶದಿಂದ ನುಸುಳಿಕೊಂಡು ಅಕ್ರಮವಾಗಿ ಬೆಂಗಳೂರಿಗೆ ಬಂದಿರುವವರನ್ನು ಗುರಿಯಾಗಿಸಿ ಬುಧವಾರ ಮಧ್ಯರಾತ್ರಿ 1 ಗಂಟೆಯಿಂದ ಬೆಳಗ್ಗಿನ ಜಾವ 5 ಗಂಟೆವರೆಗೂ ದಾಳಿ ನಡೆದಿದೆ.

ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿರುವ ಬಾಂಗ್ಲಾದೇಶ ನಿವಾಸಿಗಳ ಮನೆ ಮೇಲೆ ಸಿಸಿಬಿ ಪೊಲೀಸರಿಂದ ದಾಳಿ
ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಬಾಂಗ್ಲಾದೇಶ ನಿವಾಸಿಗಳ ಮನೆ ಮೇಲೆ ಸಿಸಿಬಿ ಪೊಲೀಸರಿಂದ ದಾಳಿ
Follow us on

ಬೆಂಗಳೂರು, ಮೇ 30: ಅಕ್ರಮವಾಗಿ ಬೆಂಗಳೂರಿನಲ್ಲಿ (Bengaluru) ನೆಲೆಸಿದ್ದ ಬಾಂಗ್ಲಾದೇಶ (Bangladesh) ನಿವಾಸಿಗಳ ಮನೆ ಮೇಲೆ ಬುಧವಾರ ತಡರಾತ್ರಿಯಿಂದ ಗುರುವಾರ ಮುಂಜಾನೆ ವರೆಗೂ ಸಿಸಿಬಿ ಪೋಲೀಸರು (CCB Police) ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಸಿಸಿಬಿ ಜಂಟಿ ಆಯುಕ್ತ ಚಂದ್ರಗುಪ್ತ ಮಾರ್ಗದರ್ಶನದಲ್ಲಿ ದಾಳಿ ನಡೆದಿದೆ. ಬಾಂಗ್ಲಾದೇಶದಿಂದ ನುಸುಳಿಕೊಂಡು ಅಕ್ರಮವಾಗಿ ಬೆಂಗಳೂರಿಗೆ ಬಂದಿರುವವರನ್ನು ಗುರಿಯಾಗಿಸಿ ದಾಳಿ ಮಾಡಲಾಗಿದೆ. ಮಧ್ಯರಾತ್ರಿ 1 ಗಂಟೆಯಿಂದ ಬೆಳಗ್ಗಿನ ಜಾವ 5 ಗಂಟೆವರೆಗೂ ದಾಳಿ ನಡೆದಿದೆ.

ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾ ಪ್ರಜೆಗಳನ್ನು ಒಂದು ತಿಂಗಳ ಹಿಂದಷ್ಟೇ ಸಿಸಿಬಿ ಪೊಲೀಸರು ಬಂಧಿಸಿದ್ದರು. ಶಮೀಮ್ ಅಹ್ಮದ್‌, ಮೊಹಮ್ಮದ್ ಅಬ್ದುಲ್ಲಾ, ಹರೂನ್ ಮೊಹಮ್ಮದ್ ಹಾಗೂ ನೂರ್ ಜಹಾನ್ ಎಂಬ ಬಾಂಗ್ಲಾ ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಇವರು ಬಾಂಗ್ಲಾದೇಶದಿಂದ ಅಕ್ರಮವಾಗಿ ಬಂದು ಬೆಂಗಳೂರಿನಲ್ಲಿ ನೆಲೆಸಿದ್ದರು. ಜೊತೆಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಪಾಸ್‌ಪೋರ್ಟ್ ಸಹ ಪಡೆದಿದ್ದರು. ಬಂಧಿತರಿಂದ ಆಧಾರ್ ಕಾರ್ಡ್, ಜಾತಿ ಪ್ರಮಾಣಪತ್ರ, ರೇಷನ್ ಕಾರ್ಡ್, ಆಯುಷ್ಮಾನ್ ಕಾರ್ಡ್, ಮಜ್ದೂರ್ ಕಾರ್ಡ್, ವೋಟರ್ ಐಡಿ ಜಪ್ತಿ ಮಾಡಲಾಗಿತ್ತು.

ಇದನ್ನೂ ಓದಿ: ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾ ಪ್ರಜೆಗಳ ಬಂಧನ

ಇವರೆಲ್ಲ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಬಿಸ್ಮಿಲಾನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ನಕಲಿ ಬಾಡಿಗೆ ಕರಾರು ಪತ್ರ ಮತ್ತು ವಾಸದ ದೃಢೀಕರಣ ಪತ್ರಗಳನ್ನು ಕೂಡ ತಯಾರಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:22 am, Thu, 30 May 24