ಬೆಂಗಳೂರಲ್ಲಿ ಸಿಸಿಬಿ ಮೆಗಾ ಬೇಟೆ: 5.5 ಕೋಟಿ ಮೌಲ್ಯದ ಮಾದಕ ವಸ್ತು ವಶಕ್ಕೆ; ಇಬ್ಬರು ಅರೆಸ್ಟ್​

ರಾಜಧಾನಿ ಬೆಂಗಳೂರಲ್ಲಿಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಲ್ಲಿ ಅಂದಾಜು 5.5 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ಸಂಬಂಧ ನೈಜೀರಿಯಾ ಮೂಲದ ಇಬ್ಬರನ್ನು ಬಂಧಿಸಲಾಗಿದ್ದು, ಆರೋಪಿಗಳು ಬ್ಯುಸಿನೆಸ್ ವೀಸಾ ಪಡೆದು ಭಾರತಕ್ಕೆ ಬಂದು, ಡ್ರಗ್ ಪೆಡ್ಲಿಂಗ್​ನಲ್ಲಿ ತೊಡಗಿರೋದು ತನಿಖೆ ವೇಳೆ ಗೊತ್ತಾಗಿದೆ.

ಬೆಂಗಳೂರಲ್ಲಿ ಸಿಸಿಬಿ ಮೆಗಾ ಬೇಟೆ: 5.5 ಕೋಟಿ ಮೌಲ್ಯದ ಮಾದಕ ವಸ್ತು ವಶಕ್ಕೆ; ಇಬ್ಬರು ಅರೆಸ್ಟ್​
ಸಾಂದರ್ಭಿಕ ಚಿತ್ರ

Updated on: Oct 24, 2025 | 7:48 PM

ಬೆಂಗಳೂರು, ಅಕ್ಟೋಬರ್​ 24: ರಾಜಧಾನಿ ಬೆಂಗಳೂರಲ್ಲಿ (Bengaluru) ಮಾದಕ ವಸ್ತು ಮಾರಾಟ ಜಾಲಕ್ಕೆ ಖಾಕಿ ಬಿಗ್​ ಶಾಕ್​ ಕೊಟ್ಟಿದೆ. ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಲ್ಲಿ ಅಂದಾಜು 5.5 ಕೋಟಿ ಮೌಲ್ಯದ 1.047 ಕೆ.ಜಿ. ಎಂಡಿಎಂಎ ಕ್ರಿಸ್ಟಲ್ ಮತ್ತು 3 ಕೆ.ಜಿ. ಹೈಡ್ರೋಗಾಂಜಾ ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಬಂಧಿಸಲಾಗಿದ್ದು, 42,800 ರೂ. ನಗದನ್ನು ಆರೋಪಿಗಳಿಂದ ಜಪ್ತಿ ಮಾಡಲಾಗಿದೆ.

ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಸಂಗ್ರಹದ ಬಗ್ಗೆ ಖಚಿತ ಮಾಹಿತಿಯ ಆಧಾರದಲ್ಲಿ ದಾಳಿ ನಡೆಸಿರುವ ಮಾದಕ ದ್ರವ್ಯ ನಿಗ್ರಹ ದಳದ ಪಿಐ ವಿ.ಡಿ.ಶಿವರಾಜು ಮತ್ತು ಸಿಬ್ಬಂದಿ, ನೈಜೀರಿಯಾ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಅಂದಾಜು 2.5 ಕೋಟಿ ರೂ. ಮೌಲ್ಯದ 1,047 ಕೆ.ಜಿ. ತೂಕದ ಎಂಡಿಎಂಎ ಕ್ರಿಸ್ಟೆಲ್ ಮತ್ತು 42,800 ರೂ. ನಗದನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಬ್ಯುಸಿನೆಸ್ ವೀಸಾ ಪಡೆದು ಭಾರತಕ್ಕೆ ಬಂದು, ಡ್ರಗ್ ಪೆಡ್ಲಿಂಗ್​ನಲ್ಲಿ ತೊಡಗಿರೋದು ತನಿಖೆ ವೇಳೆ ಗೊತ್ತಾಗಿದೆ.

ಇದನ್ನೂ ಓದಿ: ಬ್ಯಾಂಕಾಕ್​ನಿಂದ ಅಕ್ರಮವಾಗಿ ಪ್ರಾಣಿಗಳ ಸಾಗಾಟ, ಬೆಂಗಳೂರು ಏರ್​ಪೋರ್ಟ್​ನಲ್ಲಿ ಆರೋಪಿ ಲಾಕ್​

ಕೆ.ಜಿ. ನಗರ ಠಾಣಾ ವ್ಯಾಪ್ತಿಯಲ್ಲಿರುವ ಅಂಚೆ ಕಚೇರಿಗೆ ವಿದೇಶದಿಂದ ಮಾದಕ ವಸ್ತುವಿರುವ ಅನುಮಾನಾಸ್ಪದ ಪಾರ್ಸೆಲ್‌ಗಳು ಬಂದಿರುವ ಬಗ್ಗೆ ಮಾಹಿತಿ ಹಿನ್ನಲೆ, ಮಾದಕ ದ್ರವ್ಯ ನಿಗ್ರಹ ದಳದ ಪಿಐ ರಕ್ಷಿತ್ ಮತ್ತು ತಂಡ ದಾಳಿ ನಡೆಸಿದೆ. ಈ ವೇಳೆ ಅಂದಾಜು 3 ಕೋಟಿ ರೂ ಮೌಲ್ಯದ 3 ಕೆ.ಜಿ. ತೂಕದ ಹೈಡ್ರೋಗಾಂಜಾ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ವಿದೇಶಿ ಕಂಪನಿಗಳ ಬಿಸ್ಕತ್​, ಚಾಕೊಲೇಟ್ ಪ್ಯಾಕೇಟ್‌ಗಳಲ್ಲಿ ಡ್ರಗ್ಸ್ ಮರೆಮಾಚಿ ಥೈಲ್ಯಾಂಡ್, ಫ್ರಾನ್ಸ್ ದೇಶಗಳಿಂದ ಆಮದು ಮಾಡಿಕೊಂಡಿದ್ದರು ಎಂಬುದು ಗೊತ್ತಾಗಿದೆ. ಈ ಬಗ್ಗೆ ಕೆ.ಜಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಕಾರ್ಯ ಮುಂದುವರಿದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:47 pm, Fri, 24 October 25