ಈಗಲ್ಟನ್ ರೆಸಾರ್ಟ್ ಮೇಲೆ ಸಿಸಿಬಿ ದಾಳಿ; ಇಬ್ಬರು ಇರಾನಿ ವಿದೇಶಿ ಪ್ರಜೆ ಸೇರಿ ಒಟ್ಟು ನಾಲ್ವರ ಬಂಧನ
ಸೆಪ್ಟೆಂಬರ್ 27ರಂದು ಬಿಡದಿಯ ಈಗಲ್ಟನ್ ವಿಲೇಜ್ ವಿಲ್ಲಾ ಮೇಲೆ ಸಿಸಿಬಿ ದಾಳಿ ನಡೆಸಿತ್ತು. ಆಗ ಮತ್ತಿಬ್ಬರು ಆರೋಪಿಗಳು ಸಿಸಿಬಿ ಕೈಗೆ ಸಿಕ್ಕಿ ಹಾಕಿಕೊಂಡಿದ್ದಾರೆ. ಆರೋಪಿಗಳು ಈಗಲ್ಟನ್ ರೆಸಾರ್ಟ್ ವಿಲ್ಲಾದಲ್ಲಿ ಹೈಡ್ರೋ ಗಾಂಜಾ ಪ್ಲಾಂಟ್ಸ್ ಬೆಳೆಸಿದ್ರು.
ಬೆಂಗಳೂರು: ಈಗಲ್ಟನ್ ರೆಸಾರ್ಟ್ ಮೇಲೆ ಸಿಸಿಬಿ ದಾಳಿ ಕೇಸ್ಗೆ ಸಂಬಂಧಿಸಿ ಇಬ್ಬರು ಇರಾನಿ ವಿದೇಶಿ ಪ್ರಜೆ ಸೇರಿ ಒಟ್ಟು ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಸ್ಟೂಡೆಂಟ್ ವೀಸಾದಡಿ ಭಾರತಕ್ಕೆ ಬಂದಿದ್ದ ಇಬ್ಬರು ಇರಾನ್ ದೇಶಿ ಪ್ರಜೆಗಳು ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ನಗರದಲ್ಲಿ ನೆಲೆಸಿದ್ದರು. ಜಾವದ್ ರೋಸ್ಟಂಪೌರ್, ಬಾಬಕ್ ಶಿರ್ಮೊಹಮ್ಮಾದಿ, ಮೋಸಿನ್ ಖಾನ್, ಮೋಸಿನ್ ಉಝ್ ಝಮಾನ್ ಬಂಧಿತರು.
ಆರೋಪಿಗಳು ಡಾರ್ಕ್ ವೆಬ್ ಸೈಟ್ನಲ್ಲಿ ಹೈಡ್ರೋ ಗಾಂಜಾ ಬೀಜಗಳನ್ನ ತರಿಸಿಕೊಳ್ತಿದ್ದರು. ಈಗಲ್ಟನ್ ರೆಸಾರ್ಟ್ ವಿಲ್ಲಾದಲ್ಲಿ ಹೈಡ್ರೋ ಗಾಂಜಾ ಪ್ಲಾಂಟ್ಸ್ ಬೆಳೆಸಿದ್ರು. ಸೆಪ್ಟೆಂಬರ್ 26 ರಂದು ಡಿ.ಜೆ ಹಳ್ಳಿಯ ಕಾವೇರಿನಗರದಲ್ಲಿ ಸಿಸಿಬಿ ದಾಳಿ ನಡೆಸಿತ್ತು. ದಾಳಿ ವೇಳೆ ಎಲ್.ಎಸ್.ಡಿ, ಹೈಡ್ರೋ ಗಾಂಜಾ ಸಮೇತ ಸಿಸಿಬಿ ಕೈಗೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಸೆಪ್ಟೆಂಬರ್ 27ರಂದು ಬಿಡದಿಯ ಈಗಲ್ಟನ್ ವಿಲೇಜ್ ವಿಲ್ಲಾ ಮೇಲೆ ಸಿಸಿಬಿ ದಾಳಿ ನಡೆಸಿತ್ತು. ಆಗ ಮತ್ತಿಬ್ಬರು ಆರೋಪಿಗಳು ಸಿಸಿಬಿ ಕೈಗೆ ಸಿಕ್ಕಿ ಹಾಕಿಕೊಂಡಿದ್ದಾರೆ.
ಮತ್ತೊಂದೆಡೆ ಆರೋಪಿಗಳು ಕಾಲೇಜು ವಿದ್ಯಾರ್ಥಿಗಳು, ಟೆಕ್ಕಿಗಳು ಹಾಗೂ ಉದ್ಯಮಿಗಳಿಗೆ ಸಿಂಥೆಟಿಕ್ ಡ್ರಗ್ ಹಾಗೂ ಹೈಡ್ರೋ ಗಾಂಜಾ ಮಾರಾಟ ಮಾಡುತ್ತಿದ್ರು. ಸದ್ಯ ಬಂಧಿತರಿಂದ 130 ಹೈಡ್ರೋ ಗಾಂಜಾ ಗಿಡಗಳು, ಯುವಿ ಲೈಟ್ಸ್, ಎಲ್.ಇ.ಡಿ ಲ್ಯಾಂಪ್ಸ್, ಎಲೆಕ್ಟ್ರಿಕಲ್ ವೆಯ್ಟಿಂಗ್ ಮಷಿನ್, 1 ಕೋಟಿ ಬೆಲೆಯ 12 ಕೆಜಿ 850 ಗ್ರಾಂ ತೂಕದ ಹೈಡ್ರೋ ಗಾಂಜಾ, ಒಂದು ಸ್ಕೋಡಾ ಕಾರು, 4 ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಬಂಧಿತರ ಪೈಕಿ ಇರಾನಿ ಮೂಲದ ಜಾವೀದ್ ರುಸ್ತುಂ ವಿರುದ್ಧ ಈ ಹಿಂದೆ ಯಶವಂತಪುರ ಠಾಣೆಯಲ್ಲಿ ಎರಡು ಪ್ರಕರಣಗಳಿವೆ. ಬಂಧಿತ ನಾಲ್ವರ ವಿರುದ್ಧ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬಿಡದಿ: ಈಗಲ್ಟನ್ ರೆಸಾರ್ಟ್ ಒತ್ತುವರಿ ಮಾಡ್ಕೊಂಡಿದ್ದ 928 ಕೋಟಿ ರೂ. ಮೌಲ್ಯದ 77 ಎಕರೆ ಸರ್ಕಾರಿ ಭೂಮಿ ಜಿಲ್ಲಾಡಳಿತ ವಶಕ್ಕೆ
Published On - 7:50 am, Tue, 28 September 21