ಬೆಂಗಳೂರಿನಲ್ಲಿ ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದವರ ಮೇಲೆ ಸಿಸಿಬಿ ದಾಳಿ; ಭರ್ಜರಿ ಬೇಟೆ

| Updated By: Rakesh Nayak Manchi

Updated on: Nov 13, 2023 | 3:42 PM

ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿ ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದ ವ್ಯಕ್ತಿಗಳ ಮೇಲೆ ಸಿಸಿಬಿ ದಾಳಿ ನಡೆಸಿದ್ದು, ನಗದು, ಚಿನ್ನಾಭರಣ ಸಹಿತ ಇತರೆ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳಿಂದ ಈ ದಾಳಿ ನಡೆದಿದ್ದು, ಮನಿ ಲಾಂಡರಿಂಗ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದವರ ಮೇಲೆ ಸಿಸಿಬಿ ದಾಳಿ; ಭರ್ಜರಿ ಬೇಟೆ
ಮೀಟರ್ ಬಡ್ಡಿ ದಂಧೆಕೋರರಿಂದ ಸಿಸಿಬಿ ವಶಕ್ಕೆ ಪಡೆದ ವಸ್ತುಗಳು ಮತ್ತು ನಗದು
Follow us on

ಬೆಂಗಳೂರು, ನ.13: ನಗರದ ವಿವಿಧ ಕಡೆಗಳಲ್ಲಿ ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದ ವ್ಯಕ್ತಿಗಳ ಮೇಲೆ ಸಿಸಿಬಿ ದಾಳಿ (CCB Raid) ನಡೆಸಿದ್ದು, ನಗದು, ಚಿನ್ನಾಭರಣ ಸಹಿತ ಇತರೆ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳಿಂದ ಈ ದಾಳಿ ನಡೆದಿದ್ದು, ಮನಿ ಲಾಂಡರಿಂಗ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಚಾಮರಾಜ ಪೇಟೆಯಲ್ಲಿ ವೆಂಕಟೇಶ, ಬಸವನಗುಡಿಯಲ್ಲಿ ಎಎಸ್​ಐ ಒರ್ವರ ಮಗಳು ಶೀಲ, ಕಾಮಾಕ್ಷಿ ಪಾಳ್ಯದಲ್ಲಿ ರೌಡಿ ಶೀಟರ್ ಜಗದೀಶ್ ಅಲಿಯಾಸ್ ಟಾಮಿ ಎಂಬವರ ಮೇಲೆ ದಾಳಿ ನಡೆಸಲಾಗಿದ್ದು, ಸಿಟಿ ಮಾರ್ಕೆಟ್​, ಬಸವೇಶ್ವರ ನಗರದಲ್ಲೂ ದಾಳಿ ನಡೆಸಲಾಗಿದೆ.

ಇದನ್ನೂ ಓದಿ: ಸಿಸಿಬಿ ಮಿಂಚಿನ ಕಾರ್ಯಚರಣೆ: ಡ್ರಗ್ಸ್​ ಫ್ಯಾಕ್ಟರಿ ನಡೆಸುತ್ತಿದ್ದವನ ಬಂಧನ, 10 ಕೋಟಿ ರೂ. ಮೌಲ್ಯದ MDMA ವಶಕ್ಕೆ

ದಾಳಿ ವೇಳೆ 23,42,400 ನಗದು, 7,00,000 ಮೌಲ್ಯದ 127 ಗ್ರಾಂ ಚಿನ್ನಾಭರಣ, 10 ಕೆಜಿ ಬೆಳ್ಳಿ, 109 ಚೆಕ್​ಗಳು, 50 ಅನ್ ಡಿಮಾಂಡ್ ಪ್ರಾಮಿಸರಿ ನೋಟ್, 42 ಖಾಲಿ ಬಾಂಡ್ ಪೇಪರ್, 85 ಶುದ್ದ ಕ್ರಯ ಪ್ರತ್ರಗಳು, 35 ಸಾಲ ನಮೂದಿಸಿದ ದಾಖಲಾತಿ, 11 ಈ ಸ್ಪಾಂಪ್ ಪೇಪರ್​ಗಳು, 45 ಪಾಕೆಟ್ ಪುಸ್ತಕ, 15 ಅಗ್ರಿಮೆಂಟ್ ಪ್ರತಿಗಳು, 6 ರೋಲೆಕ್ಸ್ ವಾಚ್​ಗಳನ್ನು ವಶಕ್ಕೆ ಪಡೆದಿದ್ದಾರೆ.

ಹಣದ ಅವಶ್ಯಕತೆ ಇರುವ ಜನರಿಗೆ ಬಡ್ಡಿಗೆ ಎಂದು ಹಣ ನೀಡಿ ಬಳಿಕ ಮೀರಟ್ ಲೆಕ್ಕದಲ್ಲಿ ಹಿಂಸೆ ನೀಡಿ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ