AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪಬ್​​​​ಗಳ ಮೇಲೆ ದಾಳಿ: ಸಿಕ್ಕಿಬಿದ್ದ ವಿದೇಶಿ ಡ್ರಗ್​ ಪೆಡ್ಲರ್​ಗಳು

ಬೆಂಗಳೂರಿನಲ್ಲಿ ಡ್ರಗ್ಸ್ ಮಾರಾಟ ಮತ್ತು ಸೇವನೆಯನ್ನು ತಡೆಯಲು ಪೊಲೀಸರು ದೊಡ್ಡ ಪ್ರಮಾಣದ ಕಾರ್ಯಾಚರಣೆ ನಡೆಸಿದ್ದಾರೆ. FRRO ಮತ್ತು CCB ಅಧಿಕಾರಿಗಳು ಜಂಟಿಯಾಗಿ MG ರಸ್ತೆ ಮತ್ತು ಕೋರಮಂಗಲದ ಪಬ್‌ಗಳ ಮೇಲೆ ದಾಳಿ ಮಾಡಿ ವಿದೇಶಿ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. ಈ ಆರೋಪಿಗಳು ಟೆಕ್ನೋ ಪಾರ್ಟಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಪೊಲೀಸರು ಈ ಪ್ರಕರಣವನ್ನು ತನಿಖೆ ಮಾಡುತ್ತಿದ್ದಾರೆ.

ಬೆಂಗಳೂರಿನಲ್ಲಿ ಪಬ್​​​​ಗಳ ಮೇಲೆ ದಾಳಿ: ಸಿಕ್ಕಿಬಿದ್ದ ವಿದೇಶಿ ಡ್ರಗ್​ ಪೆಡ್ಲರ್​ಗಳು
ಸಾಂದರ್ಭಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: |

Updated on:Jul 13, 2025 | 3:36 PM

Share

ಬೆಂಗಳೂರು, ಜುಲೈ 13: ಬೆಂಗಳೂರು (Bengaluru) ಪೊಲೀಸರು ಡ್ರಗ್ಸ್​ (Drugs) ಮಾರಾಟ ಮತ್ತು ಸೇವನೆ ವಿರುದ್ಧ ಸಮರ ಸಾರಿದ್ದಾರೆ. ಡ್ರಗ್ಸ್​ ಮುಕ್ತ ಬೆಂಗಳೂರು ಮಾಡಲು ಪಣ ತೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO) ಅಧಿಕಾರಿಗಳು ಮತ್ತು ಸಿಸಿಬಿ ಪೊಲೀಸರು ಜಂಟಿಯಾಗಿ ಬೆಂಗಳೂರಿನ ಪಬ್​ಗಳ ಮೇಲೆ ದಾಳಿ ನಡೆಸಿ ವಿದೇಶಿ ಡ್ರಗ್​​ ಪೆಡ್ಲರ್​ಗಳನ್ನು ಬಂಧಸಿದ್ದಾರೆ.

ಎಫ್​ಆರ್​ಆರ್​ಒ ಮತ್ತು ಸಿಸಿಬಿ ಅಧಿಕಾರಿಗಳು ಜಂಟಿಯಾಗಿ ಶನಿವಾರ (ಜುಲೈ 12) ರ ಮಹಾತ್ಮಾ ಗಾಂಧಿ ರಸ್ತೆ (MG Road)ಯಲ್ಲಿರುವ ಮಿರಾಜ್ ಪಬ್ ಮತ್ತು ಕೋರಮಂಗಲದಲ್ಲಿರುವ ಸನ್​ಬರ್ನ್ ಪಬ್ ಮೇಲೆ ದಾಳಿ ಮಾಡಿ ವಿದೇಶಿ ಡ್ರಗ್ ಪೆಡ್ಲರ್​ಗಳನ್ನು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಕಬ್ಬನ್ ಪಾರ್ಕ್ ಮತ್ತು ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿವೆ. ಎಫ್​ಆರ್​ಆರ್​ಒ ಅಧಿಕಾರಿಗಳು ಈ ವಿದೇಶಿ ಡ್ರಗ್​​ ಪೆಡ್ಲರ್​ಗಳ ವಿಸಾ ಅವಧಿ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಆರೋಪಿಗಳು ಟೆಕ್ನೋ ಪಾರ್ಟಿಗಳಿಗೆ ಡ್ರಗ್ ಸರಬರಾಜು ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಓದಲು ಬಂದವಳು ಪೆಡ್ಲರ್ ಆದಳು

ವಿದೇಶದಿಂದ ಭಾರತಕ್ಕೆ ಓದಲು ಬಂದಿದ್ದ ಪ್ರಿನ್ಸಸ್ ಎಂಬ ವಿದೇಶಿ ಮಹಿಳೆ ಬೆಂಗಳೂರಿನಲ್ಲಿ ಡ್ರಗ್​ ಪೆಡ್ಲಿಂಗ್​ ಮಾಡುತ್ತಿದ್ದಳು. ಈ ಮಾಹಿತಿ ತಿಳಿದ ಸಿಸಿಬಿ ಹಾಗೂ ಬೆಂಗಳೂರಿನ ಚಿಕ್ಕಜಾಲ ಠಾಣೆಯ ಪೊಲೀಸರು ಕಾರ್ಯಾಚರಣೆ ಡ್ರಗ್​ ಪೆಡ್ಲರ್​ ಪ್ರಿನ್ಸಸ್​​ಳನ್ನು ಬಂಧಿಸಿದ್ದರು. ಪ್ರಿನ್ಸಸ್​ ಬಳಿ ಇದ್ದ 10 ಕೋಟಿ ರೂಪಾಯಿ ಮೌಲ್ಯದ 5.325 ಕೆಜಿ ಎಂಡಿಎಂಎ ಜಪ್ತಿ ಮಾಡಿದ್ದರು.

ಇದನ್ನೂ ಓದಿ
Image
ಬೆಂಗಳೂರಿನಲ್ಲಿ 10 ಕೋಟಿ ರೂ. ಮೌಲ್ಯದ MDMA ಡ್ರಗ್ಸ್‌ ಜಪ್ತಿ!
Image
ಹೊಸ ವರ್ಷಾಚರಣೆ: ಲಾಡ್ಜ್, ರೆಸ್ಟೋರೆಂಟ್ ಮೇಲೆ ಪೊಲೀಸ್​ ಕಣ್ಣು
Image
ಬೆಂಗಳೂರಿಗೆ ಬರ್ತಿದೆ ವಿದೇಶಿ ಡ್ರಗ್ಸ್​: 21 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ
Image
ಲೋಕಾಯುಕ್ತ ದಾಳಿ: ಸರ್ಕಾರಿ ಕಚೇರಿಯಲ್ಲಿ ಗಾಂಜಾ, ಡ್ರಗ್ಸ್, ಮದ್ಯ ಪತ್ತೆ!

ಕಳೆದ 3 ವರ್ಷದ ಹಿಂದೆ ಬ್ಯುಸಿನೆಸ್ ವೀಸಾದಲ್ಲಿ ಭಾರತಕ್ಕೆ ಬಂದಿದ್ದ ಪ್ರಿನ್ಸಸ್ ಎಂಬ ವಿದೇಶಿ ಮಹಿಳೆ ಡ್ರಗ್ ಪೆಡ್ಲಿಂಗ್‌ ಮಾಡುತ್ತಿದ್ದಳು. ಕಳೆದ ತಿಂಗಳು ಚಿಕ್ಕಜಾಲ ಠಾಣಾ ವ್ಯಾಪ್ತಿಯ ರಾಜಾನುಕುಂಟೆ ಬಳಿ ವ್ಯಾಪಾರ ಮಾಡುವಾಗ ಸಿಕ್ಕಿಬಿದ್ದಿದ್ದಳು. ಬಂಧಿತ ಪ್ರಿನ್ಸಸ್​ನಿಂದ 10 ಕೋಟಿ ರೂ. ಮೌಲ್ಯದ 5.325 ಕೆಜಿ ಎಂಡಿಎಂಎಯನ್ನು ಪೊಲೀಸರು ಜಪ್ತಿ ಮಾಡಿದ್ದರು.

ಇದನ್ನೂ ಓದಿ: ರೆಡಿಮೇಡ್ ಬಟ್ಟೆಗಳ ಪ್ಯಾಕ್​ಗಳಲ್ಲಿ ಡ್ರಗ್ಸ್ ಮಾರಾಟ! ನೈಜೀರಿಯಾ ಪ್ರಜೆಗಳಿಬ್ಬರು ಪೊಲೀಸ್ ವಶಕ್ಕೆ

ರೆಸಾರ್ಟ್, ಹೋಂ ಸ್ಟೇ ಮಾಲೀಕರಿಗೆ ಪೊಲೀಸರ ಸೂಚನೆ

ಯಾವುದೇ ಹೋಂ ಸ್ಟೇ ನಡೆಸುವವರು ಪ್ರವಾಸೋದ್ಯಮ ಇಲಾಖೆ ಸೇರಿದಂತೆ, ಪೊಲೀಸರ‌ ಅನುಮಾತಿ ಪಡೆದಿರಬೇಕು. ಪ್ರತಿನಿತ್ಯ ಬಾಡಿಗೆ ನೀಡುವವರ ಮಾಹಿತಿಯನ್ನು ಪೊಲೀಸರಿಗೆ ತಿಳಿಸಬೇಕು ಎಂದು ಸೂಚನೆ ನೀಡಲಾಗಿದೆ. ಅಷ್ಟೇ ಅಲ್ಲದೆ, ಕಾನೂನುಬಾಹಿರ ಚಟುವಟಿಕೆಗಳು ಪಾರ್ಟಿಯಲ್ಲಿ ನಡೆದರೆ ಮಾಲೀಕರ ವಿರುದ್ಧವೂ ಕೇಸ್ ಮಾಡಲಾಗುತ್ತದೆ ಎಂದು ಈಶಾನ್ಯ ವಿಭಾಗ ಡಿಸಿಪಿ ಸಜೀತ್ ಎಚ್ಚರಿಕೆ ನೀಡಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:35 pm, Sun, 13 July 25

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ