
ಬೆಂಗಳೂರು, ಜುಲೈ 13: ಬೆಂಗಳೂರು (Bengaluru) ಪೊಲೀಸರು ಡ್ರಗ್ಸ್ (Drugs) ಮಾರಾಟ ಮತ್ತು ಸೇವನೆ ವಿರುದ್ಧ ಸಮರ ಸಾರಿದ್ದಾರೆ. ಡ್ರಗ್ಸ್ ಮುಕ್ತ ಬೆಂಗಳೂರು ಮಾಡಲು ಪಣ ತೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO) ಅಧಿಕಾರಿಗಳು ಮತ್ತು ಸಿಸಿಬಿ ಪೊಲೀಸರು ಜಂಟಿಯಾಗಿ ಬೆಂಗಳೂರಿನ ಪಬ್‌ಗಳ ಮೇಲೆ ದಾಳಿ ನಡೆಸಿ ವಿದೇಶಿ ಡ್ರಗ್ ಪೆಡ್ಲರ್‌ಗಳನ್ನು ಬಂಧಸಿದ್ದಾರೆ.
ಎಫ್ಆರ್ಆರ್ಒ ಮತ್ತು ಸಿಸಿಬಿ ಅಧಿಕಾರಿಗಳು ಜಂಟಿಯಾಗಿ ಶನಿವಾರ (ಜುಲೈ 12) ರ ಮಹಾತ್ಮಾ ಗಾಂಧಿ ರಸ್ತೆ (MG Road)ಯಲ್ಲಿರುವ ಮಿರಾಜ್ ಪಬ್ ಮತ್ತು ಕೋರಮಂಗಲದಲ್ಲಿರುವ ಸನ್ಬರ್ನ್ ಪಬ್ ಮೇಲೆ ದಾಳಿ ಮಾಡಿ ವಿದೇಶಿ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಕಬ್ಬನ್ ಪಾರ್ಕ್ ಮತ್ತು ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿವೆ. ಎಫ್ಆರ್ಆರ್ಒ ಅಧಿಕಾರಿಗಳು ಈ ವಿದೇಶಿ ಡ್ರಗ್ ಪೆಡ್ಲರ್ಗಳ ವಿಸಾ ಅವಧಿ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಆರೋಪಿಗಳು ಟೆಕ್ನೋ ಪಾರ್ಟಿಗಳಿಗೆ ಡ್ರಗ್ ಸರಬರಾಜು ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ವಿದೇಶದಿಂದ ಭಾರತಕ್ಕೆ ಓದಲು ಬಂದಿದ್ದ ಪ್ರಿನ್ಸಸ್ ಎಂಬ ವಿದೇಶಿ ಮಹಿಳೆ ಬೆಂಗಳೂರಿನಲ್ಲಿ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದಳು. ಈ ಮಾಹಿತಿ ತಿಳಿದ ಸಿಸಿಬಿ ಹಾಗೂ ಬೆಂಗಳೂರಿನ ಚಿಕ್ಕಜಾಲ ಠಾಣೆಯ ಪೊಲೀಸರು ಕಾರ್ಯಾಚರಣೆ ಡ್ರಗ್ ಪೆಡ್ಲರ್ ಪ್ರಿನ್ಸಸ್ಳನ್ನು ಬಂಧಿಸಿದ್ದರು. ಪ್ರಿನ್ಸಸ್ ಬಳಿ ಇದ್ದ 10 ಕೋಟಿ ರೂಪಾಯಿ ಮೌಲ್ಯದ 5.325 ಕೆಜಿ ಎಂಡಿಎಂಎ ಜಪ್ತಿ ಮಾಡಿದ್ದರು.
ಕಳೆದ 3 ವರ್ಷದ ಹಿಂದೆ ಬ್ಯುಸಿನೆಸ್ ವೀಸಾದಲ್ಲಿ ಭಾರತಕ್ಕೆ ಬಂದಿದ್ದ ಪ್ರಿನ್ಸಸ್ ಎಂಬ ವಿದೇಶಿ ಮಹಿಳೆ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದಳು. ಕಳೆದ ತಿಂಗಳು ಚಿಕ್ಕಜಾಲ ಠಾಣಾ ವ್ಯಾಪ್ತಿಯ ರಾಜಾನುಕುಂಟೆ ಬಳಿ ವ್ಯಾಪಾರ ಮಾಡುವಾಗ ಸಿಕ್ಕಿಬಿದ್ದಿದ್ದಳು. ಬಂಧಿತ ಪ್ರಿನ್ಸಸ್ನಿಂದ 10 ಕೋಟಿ ರೂ. ಮೌಲ್ಯದ 5.325 ಕೆಜಿ ಎಂಡಿಎಂಎಯನ್ನು ಪೊಲೀಸರು ಜಪ್ತಿ ಮಾಡಿದ್ದರು.
ಇದನ್ನೂ ಓದಿ: ರೆಡಿಮೇಡ್ ಬಟ್ಟೆಗಳ ಪ್ಯಾಕ್ಗಳಲ್ಲಿ ಡ್ರಗ್ಸ್ ಮಾರಾಟ! ನೈಜೀರಿಯಾ ಪ್ರಜೆಗಳಿಬ್ಬರು ಪೊಲೀಸ್ ವಶಕ್ಕೆ
ಯಾವುದೇ ಹೋಂ ಸ್ಟೇ ನಡೆಸುವವರು ಪ್ರವಾಸೋದ್ಯಮ ಇಲಾಖೆ ಸೇರಿದಂತೆ, ಪೊಲೀಸರ ಅನುಮಾತಿ ಪಡೆದಿರಬೇಕು. ಪ್ರತಿನಿತ್ಯ ಬಾಡಿಗೆ ನೀಡುವವರ ಮಾಹಿತಿಯನ್ನು ಪೊಲೀಸರಿಗೆ ತಿಳಿಸಬೇಕು ಎಂದು ಸೂಚನೆ ನೀಡಲಾಗಿದೆ. ಅಷ್ಟೇ ಅಲ್ಲದೆ, ಕಾನೂನುಬಾಹಿರ ಚಟುವಟಿಕೆಗಳು ಪಾರ್ಟಿಯಲ್ಲಿ ನಡೆದರೆ ಮಾಲೀಕರ ವಿರುದ್ಧವೂ ಕೇಸ್ ಮಾಡಲಾಗುತ್ತದೆ ಎಂದು ಈಶಾನ್ಯ ವಿಭಾಗ ಡಿಸಿಪಿ ಸಜೀತ್ ಎಚ್ಚರಿಕೆ ನೀಡಿದ್ದರು.
Published On - 3:35 pm, Sun, 13 July 25