ಸಿಸಿಬಿ ದಾಳಿ: ಪ್ರಜ್ವಲ್ ರೇವಣ್ಣ​ ಬ್ಯಾರಕ್​ನಲ್ಲಿದ್ದ ಫೋನ್​​​​ನಲ್ಲಿ ಏನೇನು ಸಿಕ್ತು? ಸ್ಫೋಟಕ ಅಂಶ ಬಿಚ್ಚಿಟ್ಟ ಅಲೋಕ್​​ ಕುಮಾರ್

Parappana Agrahara Jail: ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ ನಡೆಸಿದಾಗ ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆಯಾಗಿದೆ. ಸದ್ಯ ಇದು ಚಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಕುರಿತಾಗಿ ಪ್ರತಿಕ್ರಿಯಿಸಿರುವ ಡಿಜಿಪಿ ಅಲೋಕ್ ಕುಮಾರ್, ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್, ಚಾರ್ಜರ್ ಪತ್ತೆಯಾಗಿದೆ. ಆತನ ಮೊಬೈಲ್​ನಲ್ಲಿ ಒಟಿಟಿ ಆ್ಯಪ್​ಗಳು ಪತ್ತೆಯಾಗಿವೆ ಎಂದಿದ್ದಾರೆ.

ಸಿಸಿಬಿ ದಾಳಿ: ಪ್ರಜ್ವಲ್ ರೇವಣ್ಣ​ ಬ್ಯಾರಕ್​ನಲ್ಲಿದ್ದ ಫೋನ್​​​​ನಲ್ಲಿ ಏನೇನು ಸಿಕ್ತು? ಸ್ಫೋಟಕ ಅಂಶ ಬಿಚ್ಚಿಟ್ಟ ಅಲೋಕ್​​ ಕುಮಾರ್
ಅಲೋಕ್​ ಕುಮಾರ್
Image Credit source: tv9 kannada
Edited By:

Updated on: Aug 12, 2026 | 3:10 PM

ಮುಖ್ಯಾಂಶಗಳು

  • ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ
  • ಕೈದಿಗಳ ಜೊತೆಗೆ ಜೈಲಿನ ಅಧಿಕಾರಿಗಳೇ ಶಾಮೀಲು ಆಗಿದ್ದಾರೆ ಎಂದ ಡಿಜಿಪಿ
  • ಅಸಿಸ್ಟೆಂಟ್ ಸೂಪರಿಂಡೆಂಟ್ ಈರಣ್ಣರನ್ನು ಸಸ್ಪೆಂಡ್

ಬೆಂಗಳೂರು, ಆಗಸ್ಟ್​​ 12: ನಗರದ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ (CCB) ದಾಳಿ ವೇಳೆ ಮಾಜಿ ಸಂಸದ ಪ್ರಜ್ವಲ್​​ ರೇವಣ್ಣ ಬ್ಯಾರಕ್​​​ ಸೇರಿ ವಿವಿಧೆಡೆ 10ಕ್ಕೂ ಹೆಚ್ಚು ಮೊಬೈಲ್​​ಗಳು​​ ಪತ್ತೆ ಆಗಿವೆ. ಸದ್ಯ ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಬೆನ್ನಲ್ಲೇ ‘ಅಸಿಸ್ಟೆಂಟ್ ಸೂಪರಿಂಡೆಂಟ್ ಈರಣ್ಣರನ್ನು ಸಸ್ಪೆಂಡ್ ಮಾಡಿದ್ದೇನೆ. ಎಸ್​ಪಿ ಅನ್ಶುಕುಮಾರ್​ಗೆ ನೋಟಿಸ್ ನೀಡಿ ಮಾಹಿತಿ ಕೇಳಿದ್ದೇನೆ’ ಎಂದು ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ (DGP Alok Kumar) ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್, ಚಾರ್ಜರ್ ಪತ್ತೆ

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿ9 ಜೊತೆಗೆ ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಮಾತನಾಡಿದ್ದು, ‘ನಿನ್ನೆ ಸಿಸಿಬಿ ಪೊಲೀಸರು ಜೈಲಿನ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್, ಚಾರ್ಜರ್ ಪತ್ತೆಯಾಗಿದೆ. ಆತನ ಮೊಬೈಲ್​ನಲ್ಲಿ ಒಟಿಟಿ ಆ್ಯಪ್​ಗಳು ಪತ್ತೆಯಾಗಿವೆ. ಜೈಲಿನ ವೈಫೈ ಏನಾದರೂ ಬಳಕೆ ಆಗಿದೆಯಾ ಎಂದು ಪರಿಶೀಲನೆ ಮಾಡ್ತೀನಿ’ ಎಂದಿದ್ದಾರೆ.

ADGP Alok Kumar: ಪ್ರಜ್ವಲ್​ ಬಳಿ ಮೊಬೈಲ್.. ಅಧಿಕಾರಿಗಳ ಕೈವಾಡ ಇದ್ರೆ ಮುಲಾಜಿಲ್ಲದೆ ಸಸ್ಪೆಂಡ್ ಮಾಡ್ತೇನೆ!| #TV9D

ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ: ಪ್ರಜ್ವಲ್​​ ರೇವಣ್ಣ ಬ್ಯಾರಕ್​​ ಸೇರಿ ವಿವಿಧೆಡೆ ಒಟ್ಟು 10ಕ್ಕೂ ಹೆಚ್ಚು ಮೊಬೈಲ್​​ಗಳು​​ ಪತ್ತೆ

‘ಈ ಹಿಂದೆ ಸರಬರಾಜು ಆದ ಮೊಬೈಲ್​ಗಳು ಇನ್ನೂ ಒಳಗೆ ಇದೆ. ಕೆಲ ದಿನಗಳ ಹಿಂದೆ ನಾವು ದಾಳಿ ಮಾಡಿದ್ದಾಗ ಏನೂ ಸಿಕ್ಕಿರಲಿಲ್ಲ. ಸದ್ಯ ಅಸಿಸ್ಟೆಂಟ್ ಸೂಪರಿಂಡೆಂಟ್ ಈರಣ್ಣರನ್ನು ಸಸ್ಪೆಂಡ್ ಮಾಡಿದ್ದೇನೆ. ಎಸ್​ಪಿ ಅನ್ಶುಕುಮಾರ್​ಗೆ ನೋಟಿಸ್ ನೀಡಿ ಮಾಹಿತಿ ಕೇಳಿದ್ದೇನೆ’ ಎಂದು ಅವರು ಹೇಳಿದರು.

ಮುಲಾಜಿಲ್ಲದೆ ಸಸ್ಪೆಂಡ್ ಎಂದ ಅಲೋಕ್​ ಕುಮಾರ್

ಇನ್ನು ‘ಕೈದಿಗಳ ಜೊತೆಗೆ ಜೈಲಿನ ಅಧಿಕಾರಿಗಳೇ ಶಾಮೀಲು ಆಗಿದ್ದಾರೆ ಎಂದಿರುವ ಅಲೋಕ್​ ಕುಮಾರ್, ಅಧಿಕಾರಿಗಳ ಕೈವಾಡ ಗೊತ್ತಾದರೆ ಮುಲಾಜಿಲ್ಲದೆ ಸಸ್ಪೆಂಡ್ ಮಾಡುತ್ತೇನೆ. ಸರ್ಕಾರ ಕೆಲಸ, ಊಟ ಕೊಟ್ಟಿದೆ ಅಂದರೆ ಅದಕ್ಕೆ ನಿಯತ್ತಾಗಿರಬೇಕು’ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ರಾಜ್ಯಾದ್ಯಂತ ತಂಬಾಕು, ನಿಕೋಟಿನ್ ಉತ್ಪನ್ನಗಳ ವಿರುದ್ಧ ಸಮರ: ಗುಟ್ಕಾ, ಪಾನ್ ಮಸಾಲಾ ಒಂದು ವರ್ಷ ನಿಷೇಧ

‘ಮಂಗಳವಾರ ಸಿಸಿಬಿ ದಾಳಿ ನಡೆಸಿ ಹೋದ ಮೇಲೆ ಜೈಲು ಅಧಿಕಾರಿಗಳಿಗೆ ಮತ್ತೆ ಎರಡು ಮೊಬೈಲ್ ಸಿಕ್ಕಿದೆ. ಇನ್ನೂ ಶೇ.10ರಷ್ಟು ಮೊಬೈಲ್​ಗಳು ಒಳಗೆ ಇರುವ ಸಾಧ್ಯತೆ ಇದೆ’ ಎಂದು ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.

ADGP Alok Kumar: ಪ್ರಜ್ವಲ್​ ಬ್ಯಾರಕ್​ನಲ್ಲಿ ಮೊಬೈಲ್​ ಸಿಕ್ಕ ಬಗ್ಗೆ ಕಾರಗೃಹ ADGP ಅಲೋಕ್ ಹೇಳಿದ್ದೇನು?| #TV9D

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವಿಕಾಸ್​ ಬಿಎಂ

ವಿಕಾಸ್​ ಬಿಎಂ ಅವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ. ಮೈಸೂರು ಯೂನಿವರ್ಸಿಟಿ ಯಲ್ಲಿ ಶಿಕ್ಷಣ ಮುಗಿಸಿ, 2014 ರಿಂದ ಎಲೆಕ್ಟ್ರಾನಿಕ್ ಮಾದ್ಯಮದಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ಸದ್ಯ ಬೆಂಗಳೂರು ಕ್ರೈಂ ವರದಿಗಾರನಾಗಿ 11 ವರ್ಷ ಸೇವೆ ಸಲ್ಲಿಸಿದ್ದಾರೆ. ಕ್ರೈಂ ರಿಪೋರ್ಟಿಂಗ್ ಹಾಗು ಇನ್ವೆಷ್ಟಿಗೇಟಿವ್ ವರದಿಗಾರರಾಗಿ ಹಾಗು ಸ್ಟಿಂಗ್ ಆಪರೇಷನ್​ಗಳನ್ನ ಮಾಡಿದ್ದಾರೆ. ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಸುದ್ದಿ ಮೊದಲು ಬ್ರೇಕ್ ಮಾಡಿದ್ದಲ್ಲದೆ, ಶಂಕಿತರ ಸಿಸಿ ಕ್ಯಾಮರಾ ವಿಡಿಯೋಗಳನ್ನ ಪ್ರಸರಣ ಮಾಡಿ ಸಂಸ್ಥೆಯಿಂದ ಪ್ರಶಂಸೆಗೆ ಪಾತ್ರನಾಗಿದ್ದಾರೆ. ಅಲ್ಲದೇ ಬೆಂಗಳೂರಲ್ಲಿ ಟೈಡಾಲ್ ಡ್ರಗ್ ಸೇವನೆಯ ಸ್ಟಿಂಗ್ ಆಪರೇಷನ್ ಮಾಡಿ, ಮೆಡಿಕಲ್ ಗಳಲ್ಲಿ ಟೈಡಾಲ್ ಮಾತ್ರೆಯ ಮಾರಟ ನಿಯಂತ್ರಣಕ್ಕೆ ಬರುವಂತೆ ಮಾಡಿದ್ದಾರೆ. ನೊಂದವರ ಪರವಾಗಿ ನಿಂತು ವಸ್ತುನಿಷ್ಠವಾಗಿ ಸುದ್ದಿಗಳನ್ನ ನೀಡಿ ನ್ಯಾಯ ಕೊಡಿಸುವುದು ಇವರ ಮೊದಲ ಉದ್ದೇಶ. ಸದ್ಯ ಟಿವಿ9 ಸಂಸ್ಥೆಯಲ್ಲಿ ಬೆಂಗಳೂರು ಕ್ರೈಂ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ರೋಡ್ ಟ್ರಿಪ್, ಕ್ರಿಕೆಟ್‌, ವಾಲಿಬಾಲ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್ ಪುಸ್ತಕ ಓದುವುದು ಮತ್ತು ಕ್ರೈಂ ತ್ರಿಲ್ಲರ್ ಸಿನಿಮಾಗಳನ್ನ ನೋಡುವುದು ಇವರ ಹವ್ಯಾಸಗಳು.

Read More
Loading...
Unable to load recommendations.
Follow Us