ಬೆಂಗಳೂರಿನಲ್ಲಿ 553 ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್ಗಳ ಮೇಲೆ ಸಿಸಿಬಿ ದಾಳಿ
ಬೆಂಗಳೂರು ನಗರದಲ್ಲಿ ಸಿಸಿಬಿ ಪೊಲೀಸರು ಏಕಕಾಲದಲ್ಲಿ 553 ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಈ ವೇಳೆ 131 ಹೊಟೇಲ್, ರೆಸ್ಟೋರೆಂಟ್ಗಳು ನಿಯಮಗಳನ್ನು ಉಲ್ಲಂಘಿಸಿ ವ್ಯವಹಾರ ನಡೆಸುತ್ತಿರುವುದು ಪತ್ತೆಯಾಗಿದ್ದು, ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿವೆ.
ಬೆಂಗಳೂರು, ಸೆ.18: ನಗರದಲ್ಲಿ ಸಿಸಿಬಿ ಪೊಲೀಸರು ಭರ್ಜರಿ ದಾಳಿ (CCB Raid) ನಡೆಸುವ ಮೂಲಕ ನಿಯಮ ಉಲ್ಲಂಘಿಸಿ ವ್ಯವಹಾರ ನಡೆಸುತ್ತಿದ್ದ ಹೊಟೇಲ್, ಬಾರ್ ಆ್ಯಂಡ್ ರೆಸ್ಟೋರೆಂಟ್ಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಹೌದು, ಒಂದಲ್ಲ, ಎರಡದಲ್ಲ, 553 ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್ಗಳ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ.
ದಾಳಿ ವೇಳೆ 131 ಹೋಟೆಲ್, ರೆಸ್ಟೋರೆಂಟ್, ಬಾರ್ಗಳಲ್ಲಿ ನಿಯಮ ಉಲ್ಲಂಘನೆ ಮಾಡಿರುವುದು ಬೆಳಕಿಗೆ ಬಂದಿದೆ. ಅದರಂತೆ, ನಿಯಮ ಉಲ್ಲಂಘಸಿದ ಹೋಟೆಲ್, ರೆಸ್ಟೋರೆಂಟ್, ಬಾರ್ಗಳ ವಿರುದ್ಧ ಕೋಟ್ಪಾ, ಜೆಜೆ ಆ್ಯಕ್ಟ್ ಅಡಿ 2,300ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ. ಡಿಸಿಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ನಡೆದ ದಾಳಿ ಇದಾಗಿದೆ.
ಇದನ್ನೂ ಓದಿ: ಕೋಟಿ-ಕೋಟಿ ಒಡತಿ ಚೈತ್ರಾ ಕುಂದಾಪುರ, ಈಕೆಯ ಖಜಾನೆ ಕಂಡು ಸಿಸಿಬಿ ಅಧಿಕಾರಿಗಳೇ ಶಾಕ್
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ