ಬೆಂಗಳೂರಿನಲ್ಲಿ 553 ಹೋಟೆಲ್‌, ಬಾರ್‌ ಆ್ಯಂಡ್ ರೆಸ್ಟೋರೆಂಟ್​ಗಳ ಮೇಲೆ ಸಿಸಿಬಿ ದಾಳಿ

ಬೆಂಗಳೂರು ನಗರದಲ್ಲಿ ಸಿಸಿಬಿ ಪೊಲೀಸರು ಏಕಕಾಲದಲ್ಲಿ 553 ಹೋಟೆಲ್‌, ಬಾರ್‌ ಆ್ಯಂಡ್ ರೆಸ್ಟೋರೆಂಟ್​ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಈ ವೇಳೆ 131 ಹೊಟೇಲ್, ರೆಸ್ಟೋರೆಂಟ್​ಗಳು ನಿಯಮಗಳನ್ನು ಉಲ್ಲಂಘಿಸಿ ವ್ಯವಹಾರ ನಡೆಸುತ್ತಿರುವುದು ಪತ್ತೆಯಾಗಿದ್ದು, ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿವೆ.

ಬೆಂಗಳೂರಿನಲ್ಲಿ 553 ಹೋಟೆಲ್‌, ಬಾರ್‌ ಆ್ಯಂಡ್ ರೆಸ್ಟೋರೆಂಟ್​ಗಳ ಮೇಲೆ ಸಿಸಿಬಿ ದಾಳಿ
ಬೆಂಗಳೂರಿನಲ್ಲಿ ಹೊಟೇಲ್, ಬಾರ್ ಆ್ಯಂಡ್ ರೆಸ್ಟೋರೆಂಟ್​ಗಳ ಮೇಲೆ ಸಿಸಿಬಿ ದಾಳಿ (ಫೋಟೊ: ಸಿಸಿಬಿ ಕಚೇರಿ)
Edited By: Rakesh Nayak Manchi

Updated on: Sep 18, 2023 | 9:39 PM

ಬೆಂಗಳೂರು, ಸೆ.18: ನಗರದಲ್ಲಿ ಸಿಸಿಬಿ ಪೊಲೀಸರು ಭರ್ಜರಿ ದಾಳಿ (CCB Raid) ನಡೆಸುವ ಮೂಲಕ ನಿಯಮ ಉಲ್ಲಂಘಿಸಿ ವ್ಯವಹಾರ ನಡೆಸುತ್ತಿದ್ದ ಹೊಟೇಲ್, ಬಾರ್ ಆ್ಯಂಡ್ ರೆಸ್ಟೋರೆಂಟ್​​ಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಹೌದು, ಒಂದಲ್ಲ, ಎರಡದಲ್ಲ, 553 ಹೋಟೆಲ್‌, ಬಾರ್‌ ಆ್ಯಂಡ್ ರೆಸ್ಟೋರೆಂಟ್​ಗಳ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ.

ದಾಳಿ ವೇಳೆ 131 ಹೋಟೆಲ್, ರೆಸ್ಟೋರೆಂಟ್, ಬಾರ್​ಗಳಲ್ಲಿ ನಿಯಮ ಉಲ್ಲಂಘನೆ ಮಾಡಿರುವುದು ಬೆಳಕಿಗೆ ಬಂದಿದೆ. ಅದರಂತೆ, ನಿಯಮ ಉಲ್ಲಂಘಸಿದ ಹೋಟೆಲ್, ರೆಸ್ಟೋರೆಂಟ್, ಬಾರ್​ಗಳ ವಿರುದ್ಧ ಕೋಟ್ಪಾ, ಜೆಜೆ ಆ್ಯಕ್ಟ್ ಅಡಿ 2,300ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ. ಡಿಸಿಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ನಡೆದ ದಾಳಿ ಇದಾಗಿದೆ.

ಇದನ್ನೂ ಓದಿ: ಕೋಟಿ-ಕೋಟಿ ಒಡತಿ ಚೈತ್ರಾ ಕುಂದಾಪುರ, ಈಕೆಯ ಖಜಾನೆ ಕಂಡು ಸಿಸಿಬಿ ಅಧಿಕಾರಿಗಳೇ ಶಾಕ್

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
Follow Us