ಬೆಂಗಳೂರು,ಡಿ.21: ರೌಡಿಶೀಟರ್ಸ್, ಮೀಟರ್ ಬಡ್ಡಿ ನಡೆಸ್ತಿದ್ದವರ ಮನೆ ಮೇಲೆ ಸಿಸಿಬಿ (CCB) ದಾಳಿ ನಡೆಸಿ ಭರ್ಜರಿ ಕಾರ್ಯಾಚರಣೆ ನಡೆಸಿದೆ. ಬೆಂಗಳೂರಿನ (Bengaluru) ಅನ್ನಪೂರ್ಣೇಶ್ವರಿ ನಗರ ರೌಡಿಶೀಟರ್ ಅನಿಲ್ ಕುಮಾರ್, ಯಶವಂತಪುರ ರೌಡಿಶೀಟರ್ ಗಿರೀಶ್ ಅಲಿಯಾಸ್ ರಾಬರಿ ಗಿರಿ, ವಿವೇಕನಗರ ರೌಡಿಶೀಟರ್ಗಳಾದ ನಾರಾಯಣ, ಹೇಮಂತ್, ರಾಮು, ಸೋಲದೇವನಹಳ್ಳಿ ರೌಡಿಶೀಟರ್ ತಿಮ್ಮ ಸೇರಿ ಅನೇಕರ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ತಲಾಶ್ ಮಾಡಿದ್ದಾರೆ. ಅನಿಲ ಮನೆಯಲ್ಲಿ ತಕಾರಾರು ಆಸ್ತಿಪತ್ರ, ಹಲವು ಚೆಕ್ಗಳು ಪತ್ತೆಯಾಗಿವೆ.
ಸಿಸಿಬಿ ಅಧಿಕಾರಿಗಳು ಏಕಾಏಕಿ ರೌಡಿಶೀಟರ್ಸ್, ಮೀಟರ್ ಬಡ್ಡಿ ನಡೆಸ್ತಿದ್ದವರ ಮನೆ ಮೇಲೆ ದಾಳಿ ಮಾಡಿ ತಪಾಸಣೆ ನಡೆಸಿದ್ದಾರೆ. ಬೋರ್ ವೆಲ್ ಅನಿಲ ಮನೆಯಲ್ಲಿ ತಕಾರಾರು ಆಸ್ತಿಪತ್ರ, ಹಲವು ಚೆಕ್ಗಳು ಪತ್ತೆಯಾಗಿವೆ. ಅನಿಲ್ ಮೇಲೆ ಅಮಾಯಕರಿಗೆ ಬೆದರಿಸಿ ನಿವೇಶನ ಕಬಳಿಸಿರುವ ದೂರು ಕೇಳಿಬಂದಿತ್ತು. ಅಷ್ಟೇ ಅಲ್ಲದೆ ಮೀಟರ್ ಬಡ್ಡಿ ವ್ಯವಹಾರದ ಶಂಕೆ ಕೂಡ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅನಿಲ್ ಮನೆ ಮೇಲೆ ಸಿಸಿಬಿ ತಂಡ ದಾಳಿ ಮಾಡಿದೆ. ಅನಿಲ್ ಮನೆಯಲ್ಲಿ ಸಿಕ್ಕ ದಾಖಲೆ ಪರಿಶೀಲನೆ ಮಾಡಲಾಗುತ್ತಿದೆ. ಉದ್ಯಮಿ ಕೃಷ್ಣೇಗೌಡ ಕಚೇರಿ ಮೇಲೂ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಿನದ ಲೆಕ್ಕದಲ್ಲಿ ಬಡ್ಡಿ ವ್ಯವಹಾರ ನಡೆಸುತ್ತಿದ್ದ ಕೃಷ್ಣೇಗೌಡರ ಕಚೇರಿಯಲ್ಲಿ ಅಗ್ರಿಮೆಂಟ್ ಪೇಪರ್, ಚೆಕ್ಗಳು ಪತ್ತೆಯಾಗಿವೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಬಲೆಗೆ ಬಿದ್ದ ಉದ್ಯಮಿ: ದಂಪತಿ ಸಹಿತ ನಾಲ್ವರನ್ನು ಬಂಧಿಸಿದ ಸಿಸಿಬಿ
ಆಸ್ತಿ ತೆರಿಗೆ ರಶೀದಿ, ಖಾತಾ, ನಕ್ಷೆ ಮಂಜೂರಾತಿಗೆ ಕ್ಯೂಆರ್ ಕೋಡ್ ನೀಡಿ ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ. ಬಿಬಿಎಂಪಿಗೆ ನ್ಯಾ.ಸೂರಜ್ ಗೋವಿಂದರಾಜ್ ಅವರಿದ್ದ ಹೈಕೋರ್ಟ್ ಪೀಠ ನಿರ್ದೇಶನ ಮಾಡಿದೆ. ಡಿಜಿಲಾಕರ್ ವ್ಯವಸ್ಥೆಯಿರುವ ಈ ಕಾಲದಲ್ಲೂ ಬಿಬಿಎಂಪಿ ತಂತ್ರಜ್ಞಾನ ಅಳವಡಿಸಿಕೊಂಡಿಲ್ಲ. ಕೋರ್ಟ್ಗಳಲ್ಲೂ ತೀರ್ಪುಗಳಿಗೆ ಕ್ಯೂಆರ್ ಕೋಡ್ ಹಾಕಲಾಗುತ್ತಿದೆ. ಆಸ್ತಿಯ ನಕಲಿ ಖಾತಾ ತಡೆಗೆ QRಕೋಡ್ ಅಳವಡಿಸಬೇಕು ಎಂದು ಬಿಬಿಎಂಪಿ ದಾಖಲೆಗಳ ಡಿಜಿಟಲೀಕರಣ ಮಾಡಲು ಮುಂದಾಗಬೇಕು ಎಂದು ಬಿಬಿಎಂಪಿಗೆ ಹೈಕೋರ್ಟ್ ಸೂಚಿಸಿದೆ.
ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 9:01 am, Thu, 21 December 23