AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ: ಪ್ರಜ್ವಲ್​​ ರೇವಣ್ಣ ಬ್ಯಾರಕ್​​ ಸೇರಿ ವಿವಿಧೆಡೆ ಒಟ್ಟು 10ಕ್ಕೂ ಹೆಚ್ಚು ಮೊಬೈಲ್​​ಗಳು​​ ಪತ್ತೆ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ (CCB) ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಬ್ಯಾರಕ್ ಸೇರಿದಂತೆ ವಿವಿಧೆಡೆ 10ಕ್ಕೂ ಹೆಚ್ಚು ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಲಾಗಿದೆ. ಈ ಹಿಂದೆಯೂ ಪರಪ್ಪನ ಅಗ್ರಹಾರ ಜೈಲು ಕೈದಿಗಳಿಗೆ ಫೈವ್ ಸ್ಟಾರ್ ಹೋಟೆಲ್ ಆಗಿ ಮಾರ್ಪಟ್ಟಿರುವ ಬಗ್ಗೆ ವರದಿಯಾಗಿತ್ತು. ಬೃಹತ್ ಕಾರ್ಯಾಚರಣೆ ವೇಳೆ ಕೈದಿಗಳ ಬಳಿ ಇದ್ದ ಐಷಾರಾಮಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ: ಪ್ರಜ್ವಲ್​​ ರೇವಣ್ಣ ಬ್ಯಾರಕ್​​ ಸೇರಿ ವಿವಿಧೆಡೆ ಒಟ್ಟು 10ಕ್ಕೂ ಹೆಚ್ಚು ಮೊಬೈಲ್​​ಗಳು​​ ಪತ್ತೆ
ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ
ಶಿವಪ್ರಸಾದ್​ ಬಿ.
| Edited By: |

Updated on:Aug 12, 2026 | 10:26 AM

Share

ಮುಖ್ಯಾಂಶಗಳು

  • ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ
  • 10ಕ್ಕೂ ಹೆಚ್ಚು ಮೊಬೈಲ್​​ಗಳು ಅಧಿಕಾರಿಗಳಿಂದ ಜಪ್ತಿ
  • ಪ್ರಜ್ವಲ್​​ ರೇವಣ್ಣ ಬ್ಯಾರಕ್​​​ನಲ್ಲಿಯೂ ಮೊಬೈಲ್​​ ಪತ್ತೆ

ಬೆಂಗಳೂರು, ಆಗಸ್ಟ್​​ 12: ಕೈದಿಗಳಿಗೆ ರಾಜಾತಿಥ್ಯ ನೀಡುವ ಮೂಲಕ ಈ ಹಿಂದೆ ದೇಶಾದ್ಯಂತ ಸುದ್ದಿಯಾಗಿದ್ದ ಬೆಂಗಳೂರಿನ (Bengaluru) ಪರಪ್ಪನ ಅಗ್ರಹಾರ ಜೈಲಿನಲ್ಲಿ ಇನ್ನೂ ಆ ಪದ್ಧತಿ ಮುಂದುವರಿದಿದ್ಯಾ ಎಂಬ ಅನುಮಾನ ಹೆಚ್ಚಿದೆ. ಜೈಲಿನ ಮೇಲೆ ಡಿಸಿಪಿ ಹರಿಬಾಬು ಮತ್ತು ಇಮಾಮ್ ಖಾಸೀಂ ನೇತೃತ್ವದಲ್ಲಿ ಸಿಸಿಬಿ ದಾಳಿ ನಡೆಸಿದ್ದು, ಈ ವೇಳೆ 10ಕ್ಕೂ ಹೆಚ್ಚು ಮೊಬೈಲ್​​​ಗಳು ಪತ್ತೆಯಾಗಿವೆ. 90ಕ್ಕೂ ಹೆಚ್ಚು ಸಿಸಿಬಿ ಪೊಲೀಸರು ಪ್ರತಿ ಬ್ಯಾರಕ್​​​ನಲ್ಲಿ ನಿನ್ನೆ (ಆಗಸ್ಟ್​​​ 11) ರಾತ್ರಿ 8ರ ವರೆಗೆ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಆ್ಯಂಡ್ರಾಯ್ಡ್ ಮೊಬೈಲ್ ಬಳಸುತ್ತಿರುವ ಪ್ರಜ್ವಲ್ ?

ಪ್ರತಿ ಠಾಣಾ ವ್ಯಾಪ್ತಿಯಲ್ಲಿ ರೌಡಿ ನಿಗ್ರಹ ಪಡೆ ರಚನೆ ಹಿನ್ನೆಲೆ ಜೈಲಿನಲ್ಲಿರುವ ರೌಡಿಗಳು ಹೊರಗಿನ ರೌಡಿಗಳ ಜೊತೆ ಸಂಪರ್ಕದಲ್ಲಿರುವ ಮಾಹಿತಿ ಮತ್ತು ಜೈಲಿನಲ್ಲಿ ಅಕ್ರಮ ಚಟುವಟಿಕೆಗಳ ಆರೋಪ ಹಿನ್ನೆಲೆ ಸಿಸಿಬಿ ದಾಳಿ ನಡೆಸಿತ್ತು. ಪರಿಶೀಲನೆವೇಳೆ ಜೈಲಿನಲ್ಲಿ ಪತ್ತೆಯಾದ 10ಕ್ಕೂ ಹೆಚ್ಚು ಮೊಬೈಲ್ ಫೋನ್​​ಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಇನ್ನು ಅತ್ಯಾಚಾರ ಕೇಸ್​​ನಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜೀವಾವದಿ ಶಿಕ್ಷೆಗೆ ಗುರಿಯಾಗಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದ್ದ ಬ್ಯಾರಕ್​​ನಲ್ಲಿಯೂ ಮೊಬೈಲ್​​ ಸಿಕ್ಕಿದೆ. ಪ್ರಕ್ವಲ್​​ ಆ್ಯಂಡ್ರಾಯ್ಡ್ ಮೊಬೈಲ್ ಬಳಕೆ ಬಗ್ಗೆ ಅನುಮಾನ ಹಿನ್ನೆಲೆ, ಈ ಸಂಬಂಧ ಸಿಸಿಬಿ ಪೊಲೀಸರಿಂದ ತನಿಖೆ ಮುಂದುವರಿದಿದೆ.

ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿಂತಿಲ್ಲ ರಾಜಾತಿಥ್ಯ: ಲಕ್ಷಾಂತರ ಮೌಲ್ಯದ ವಸ್ತುಗಳು ಜಪ್ತಿ

ಜೈಲಿನ ಅಸಿಸ್ಟೆಂಟ್ ಸೂಪರಿಂಡೆಂಟ್ ಸಸ್ಪೆಂಡ್

ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ ಸಂಬಂಧ ಕರ್ತವ್ಯ ಲೋಪ ಹಿನ್ನೆಲೆ ಜೈಲಿನ ಅಸಿಸ್ಟೆಂಟ್ ಸೂಪರಿಂಡೆಂಟ್ ಈರಣ್ಣ ರಂಗಾಪುರ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಕೈದಿಗಳು ಧರಿಸುವ ಬಿಳಿ ಬಟ್ಟೆ ಧರಿಸ್ತಿರಲಿಲ್ಲ. ಅಲ್ಲದೇ ಪ್ರಜ್ವಲ್​ ಇದ್ದ ಸೆಲ್​ನಲ್ಲಿ ಆಂಡ್ರಾಯ್ಡ್ ಮೊಬೈಲ್ ಸಹ ಪತ್ತೆಯಾಗಿರುವ ಕಾರಣ ಕರ್ತವ್ಯ ಲೋಪದ ಕಾರಣ ಕೇಳಿ ಜೈಲು ಎಸ್​ಪಿ ಅನ್ಶುಕುಮಾರ್​ಗೆ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್​ರಿಂದ ಶೋಕಾಸ್ ನೋಟಿಸ್ ಜಾರಿಮಾಡಲಾಗಿದೆ. ಪ್ರಜ್ವಲ್​ಗೆ ಮೊಬೈಲ್ ಕೊಟ್ಟಿದ್ಯಾರು ಎಂದು ಮಧ್ಯಾಹ್ನದ ಒಳಗೆ ತಿಳಿಸಬೇಕೆಂದು ಅಲೋಕ್​ಕುಮಾರ್​ ತಾಕೀತು ಕೂಡ ಮಾಡಿದ್ದಾರೆ ಎನ್ನಲಾಗಿದೆ.

ಈ ಹಿಂದೆಯೂ ಪರಪ್ಪನ ಅಗ್ರಹಾರ ಜೈಲು ಕೈದಿಗಳಿಗೆ ಫೈವ್ ಸ್ಟಾರ್ ಹೋಟೆಲ್ ಆಗಿ ಮಾರ್ಪಟ್ಟಿರುವ ಬಗ್ಗೆ ವರದಿಯಾಗಿತ್ತು. ಬೃಹತ್ ಕಾರ್ಯಾಚರಣೆ ವೇಳೆ ಕೈದಿಗಳ ಬಳಿ ಫೋನ್‌ಗಳು, ಸಿಮ್ ಕಾರ್ಡ್‌ಗಳು, ಚಾರ್ಜರ್‌ಗಳು, ಇಯರ್‌ಫೋನ್‌ಗಳು, ವಿವಿಧ ಬಗೆಯ ಶೂಗಳು, ದಿಂಬುಗಳು, ಪಾತ್ರೆಗಳು, ಅಡುಗೆ ಸಾಮಗ್ರಿಗಳು ಮತ್ತು ಚೇರ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಸುಮಾರು ಎರಡು ಟ್ರ್ಯಾಕ್ಟರ್ ಲೋಡ್‌ನಷ್ಟು ವಸ್ತುಗಳನ್ನು ಜಪ್ತಿ ಮಾಡಲಾಗಿತ್ತು. ಜೈಲಿನಲ್ಲಿರುವ ಕೆಲವು ಅಧಿಕಾರಿಗಳ ಸಹಕಾರದಿಂದಲೇ ಕೈದಿಗಳಿಗೆ ಬೇಕಾದ ವಸ್ತುಗಳು ಪೂರೈಕೆಯಾಗುತ್ತಿವೆ ಎಂಬ ಆರೋಪಗಳೂ ಕೇಳಿಬಂದಿದ್ದವು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 8:18 am, Wed, 12 August 26

Follow Us
ಶಿವಪ್ರಸಾದ್​ ಬಿ.
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು