AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ಭರ್ಜರಿ ಕಾರ್ಯಚರಣೆ: ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ 9 ವಿದೇಶಿಗರ ಬಂಧನ

ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ನೆಲೆಸಿದ ವಿದೇಶಿಗರನ್ನು ಬಂಧಿಸಿದ್ದಾರೆ. ಪಾಸ್​​ ಪೋರ್ಟ್​, ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ವಾಸಗಿದ್ದ ನೈಜೀರಿಯಾ, ಘಾನಾ ಹಾಗೂ ಸುಡಾನ್​ ಮೂಲದ ವ್ಯಕ್ತಿಗಳನ್ನು ಬಂಧಿಸಲಾಗಿದ್ದು, ಬಂಧಿತರನ್ನು ಅವರವರ ದೇಶಕ್ಕೆ ಕಳುಹಿಸುವ ಪ್ರಕ್ರಿಯೆ ನಡೆದಿದೆ.

ಸಿಸಿಬಿ ಭರ್ಜರಿ ಕಾರ್ಯಚರಣೆ: ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ 9 ವಿದೇಶಿಗರ ಬಂಧನ
Arrest
TV9 Web
| Edited By: |

Updated on: Jul 22, 2025 | 3:09 PM

Share

ಬೆಂಗಳೂರು, (ಜುಲೈ 22): ಸಿಸಿಬಿ ಪೊಲೀಸರು (Bengaluru CCB) ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ 9 ವಿದೇಶಿಗರನ್ನು ( foreign nationals) ಬಂಧಿಸಿದ್ದಾರೆ. ನೈಜೀರಿಯಾದ ನಾಲ್ವರು ಪ್ರಜೆಗಳು, ಘಾನಾದ ಇಬ್ಬರು ಪ್ರಜೆಗಳು, ಸುಡಾನ್ ದೇಶದ ಓರ್ವ ಪ್ರಜೆ ಸೇರಿದಂತೆ ಒಟ್ಟು ಒಂಬತ್ತು ವಿದೇಶಿಗರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಪಾಸ್​​ ಪೋರ್ಟ್​, ವೀಸಾ ಅವಧಿ ಮುಗಿದಿದ್ದರೂ ಸಹ ಅಕ್ರಮವಾಗಿ ನಗರದಲ್ಲಿ ವಾಸಗಿದ್ದರು. ಇನ್ನು ಬಂಧಿತರನ್ನು ಡಿಟೆನ್ಷನ್ ಸೆಂಟರ್​ ನಲ್ಲಿ ಇಡಲಾಗಿಗಿದ್ದು, ಸದ್ಯ ಬಂಧನ ಮಾಡಿರುವವರನ್ನು ಅವರವರ ದೇಶಕ್ಕೆ ವಾಪಸ್ ಕಳಿಸುವ ಪ್ರಕ್ರಿಯೆ ನಡೆದಿದೆ.

ವಿದ್ಯಾಭ್ಯಾಸ ಹಾಗೂ ಇನ್ನಿತರ ಉದ್ದೇಶಕ್ಕಾಗಿ ಬೆಂಗಳೂರಿಗೆ ಬಂದು ವೀಸಾ ಅವಧಿ ಮುಗಿದರೂ ಇಲ್ಲೇ ನೆಲೆಸುತ್ತಿರುವ ವಿದೇಶಿಗರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವುದು ನಗರ ಪೊಲೀಸರಿಗೆ ಸವಾಲಿನ ಕೆಲಸವಾಗಿದೆ. ಹೀಗಿದ್ದರೂ ಸಹ ಪೊಲೀಸರು ಆಗಾಗ ವಿದೇಶಿಗರ ಪತ್ತೆ ಕಾರ್ಯಚರಣೆ ನಡೆಸುತ್ತಲೇ ಇದ್ದಾರೆ.

ಇದನ್ನೂ ಓದಿ: ಬೆಂಗಳೂರು: ವರ್ತೂರು ಸಮೀಪದ ಕ್ರಿಸಲಿಸ್ ಹೈ ಶಾಲೆಗೆ ಬಾಂಬ್ ಬೆದರಿಕೆ

ಬೆಂಗಳೂರು ನಗರದಲ್ಲಿ ವೀಸಾ ಅವಧಿ ಮುಗಿದರೂ ಸಾಕಷ್ಟು ಸಂಖ್ಯೆಯಲ್ಲಿ ವಿದೇಶಿಗರು ವಾಸವಾಗಿದ್ದಾರೆ. ಇಂತಹ ವಿದೇಶಿಗರು ಕಾನೂನು ಉಲ್ಲಂಘಿಸಿ ಶಾಂತಿ ಸುವ್ಯವಸ್ಥೆಗೆ ಭಂಗ ತರುತ್ತಿದ್ದಾರೆ ಎಂಬ ಆರೋಪಗಳಿವೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯೂ ಇಂತವರ ವಿರುದ್ಧ ಕಾನೂನು ಕಣ್ಣಿಟ್ಟಿದೆ. ಇಂತಹ ವಿದೇಶಿ ಪ್ರಜೆಗಳು ಪತ್ತೆಯಾದರೆ ಅಂತಹ ಆರೋಪಿಗಳ ವಿರುದ್ಧ ಅವರ ದೇಶದ ವಿದೇಶಿ ಮಂತ್ರಾಲಯದ ಮೂಲಕ ವಾಪಸ್ ಕಳಿಸಲಾಗುತ್ತದೆ.

ಇನ್ನು ಬೆಂಗಳೂರಿನಲ್ಲಿ ಅಕ್ರಮವಾಗಿ ನೈಜೀರಿಯಾ, ಸುಡಾನ್, ಯೆಮೆನ್ ಹಾಗೂ ಕಾಂಗೋ ದೇಶದ ಪ್ರಜೆಗಳು ಹೆಚ್ಚಾಗಿ ನೆಲೆಸಿದ್ದಾರೆ. ಇನ್ನು ನೈಜೀರಿಯನ್ ಪ್ರಜೆಗಳು ಮಾದಕ ವಸ್ತುಗಳ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಯತ್ತಿದ್ದಾರೆ. ಅಂತಹ ಆರೋಪಿಗಳಿಗೆ ಯಾವ ಮೂಲಗಳಿಂದ ಮಾದಕ ವಸ್ತುಗಳು ಸರಬರಾಜು ಆಗುತ್ತಿವೆ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಿ ದಸ್ತಗಿರಿ ಮಾಡಿ ಗಡಿಪಾರಿಗೆ ಕ್ರಮ ಕೈಗೊಳ್ಳಲಾಗುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ