ಐಷಾರಾಮಿ ಕಾರಿಗೆ ಬೆಂಕಿ ಹಚ್ಚಿರುವ ಕಿಡಿಗೇಡಿಗಳು; ಬೆಂಕಿ ಇಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ಕಳೆದ ನಾಲ್ಕು ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೃತ್ಯದ ಅಸಲಿ ಕಾರಣ ಏನು ಎಂಬ ಬಗ್ಗೆ ಸದಾಶಿವನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಐಷಾರಾಮಿ ಕಾರಿಗೆ ಬೆಂಕಿ ಹಚ್ಚಿರುವ ಕಿಡಿಗೇಡಿಗಳು; ಬೆಂಕಿ ಇಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
ಐಷಾರಾಮಿ ಕಾರಿಗೆ ಬೆಂಕಿ
Edited By:

Updated on: Oct 23, 2021 | 2:55 PM

ಬೆಂಗಳೂರು: ಕಾರಿಗೆ ಮುಸುಕು ಹಾಕಿಕೊಂಡು ಐಷಾರಾಮಿಗೆ ಕಾರಿಗೆ ಬೆಂಕಿ ಹಚ್ಚಿರುವ ಘಟನೆ ಬೆಂಗಳೂರು ನಗರದ ನಿಕ್ಕೀಸ್ ಪಬ್ ಬಳಿಯ ನಿವಾಸದಲ್ಲಿ ನಡೆದಿದೆ. ರಿಯಲ್ ಎಸ್ಟೇಟ್ ಡೆವಲಪರ್ ಕಂ ಪ್ರಮೋಟರ್ ಆಗಿರುವ ಶ್ರೀನಿವಾಸ್ ನಾಯ್ಡುಗೆ ಸೇರಿದ ಐಷಾರಾಮಿ ಕಾರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಕಿಡಿಗೇಡಿಗಳು ಬೆಂಕಿ ಹಚ್ಚುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಕಳೆದ ನಾಲ್ಕು ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೃತ್ಯದ ಅಸಲಿ ಕಾರಣ ಏನು ಎಂಬ ಬಗ್ಗೆ ಸದಾಶಿವನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಶ್ರೀನಿವಾಸ ನಾಯ್ಡು, ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಅವರ ಸ್ನೇಹಿತ. ಸದ್ಯ ಘಟನೆ ಸಂಬಂಧಿತ ಸಿಸಿ ಟಿವಿ ದೃಶ್ಯವಳಿ ಲಭ್ಯವಾಗಿಲ್ಲ. ಆದರೆ ಈ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದು, ಕಾರಿಗೆ ಬೆಂಕಿ ಹಚ್ಚಿದ್ದರ ಹಿಂದಿನ ಕಾರಣ ಇನ್ನು ತಿಳಿದು ಬಂದಿಲ್ಲ.

ಇದನ್ನೂ ಓದಿ:

ಜಾನುವಾರಗಳ ಮೇಲೆ ದುಷ್ಟರ ಅಟ್ಟಹಾಸ; ಪೆಟ್ರೋಲ್ ಸುರಿದು ಎಮ್ಮೆಗಳಿಗೆ ಬೆಂಕಿ ಇಟ್ಟ ದುಷ್ಕರ್ಮಿಗಳು

Bengaluru: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ; ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ

Published On - 1:44 pm, Sat, 23 October 21