ಬೆಂಗಳೂರಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಗಮನ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಇಂದು ರಾತ್ರಿ ಖಾಸಗಿ ಹೋಟೆಲ್​ನಲ್ಲಿಯೇ ಸಚಿವರು ವಾಸ್ತವ್ಯ ಹೂಡಲಿದ್ದಾರೆ. ರಾಜನಾಥ್ ಸಿಂಗ್ 2 ದಿನಗಳ ಕಾಲ ರಾಜ್ಯ ಪ್ರವಾಸದಲ್ಲಿದ್ದಾರೆ.

ಬೆಂಗಳೂರಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಗಮನ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ
ರಕ್ಷಣಾ ಸಚಿವ ರಾಜನಾಥ್​ ಸಿಂಗ್​
Edited By:

Updated on: Oct 21, 2021 | 2:21 PM

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿಗೆ ಕೇಂದ್ರದ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಆಗಮಿಸಿದ್ದಾರೆ. ರೇಸ್ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್​ಗೆ ಆಗಮಿಸಿದ್ದಾರೆ. ಹೆಚ್ಎಎಲ್, ಬಿಇಎಲ್ ಕಾರ್ಯಕ್ರಮಗಳಲ್ಲಿ ಇಂದು ಭಾಗಿಯಾಗಲಿದ್ದಾರೆ. ಇಂದು ರಾತ್ರಿ ಖಾಸಗಿ ಹೋಟೆಲ್​ನಲ್ಲಿಯೇ ಸಚಿವರು ವಾಸ್ತವ್ಯ ಹೂಡಲಿದ್ದಾರೆ. ರಾಜನಾಥ್ ಸಿಂಗ್ 2 ದಿನಗಳ ಕಾಲ ರಾಜ್ಯ ಪ್ರವಾಸದಲ್ಲಿದ್ದಾರೆ.

ರಾಜನಾಥ್ ಸಿಂಗ್ ಇಂದು (ಅ.21) ರಕ್ಷಣಾ ಸಚಿವಾಲಯದ ಸಮಾಲೋಚನಾ ಸಮಿತಿಯ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದರು. ಕಳೆದ ಕೆಲವು ವರ್ಷಗಳಲ್ಲಿ, ಡಿಪಿಎಸ್‌ಯುಗಳ ಮೂಲಕ ಸರ್ಕಾರವು ವಿವಿಧ ರಕ್ಷಣಾ ಸಾಧನಗಳ ಉತ್ಪಾದನಾ ಸೌಲಭ್ಯಗಳನ್ನು ಸ್ಥಾಪಿಸಲು ಅನುಕೂಲ ಮಾಡಿಕೊಟ್ಟಿದೆ ಎಂದು ಹೇಳಿದ್ದಾರೆ.

2024-25ರ ವೇಳೆಗೆ ರಕ್ಷಣಾ ಉತ್ಪನ್ನಗಳ ರಫ್ತು ಹೆಚ್ಚಿಸುವ ಗುರಿ ಹೊಂದಿದ್ದೇವೆ ಎಂದು ತಿಳಿಸಿದ ರಾಜನಾಥ್ ಸಿಂಗ್, ಭಾರತವನ್ನು ಸಾರ್ವಜನಿಕ ಮತ್ತು ಖಾಸಗಿ ವಲಯದ ಸಕ್ರಿಯ ಪಾಲುದಾರಿಕೆಯೊಂದಿಗೆ ರಕ್ಷಣಾ ವಲಯದಲ್ಲಿ ಸ್ವಾವಲಂಬಿಗಳನ್ನಾಗಿ ಮಾಡುವುದು ಮಾತ್ರವಲ್ಲದೆ, ವಿಶ್ವದ ಅಗ್ರ ರಾಷ್ಟ್ರಗಳಲ್ಲಿ ಸ್ಥಾನ ಪಡೆಯುವುದು ನಮ್ಮ ಗುರಿ ಅಂತ ಅಭಿಪ್ರಾಯಪಟ್ಟರು.

ಇದನ್ನೂ ಓದಿ

Ananya Pandey: ಚಿತ್ರರಂಗದಲ್ಲಿ ಬೆಳೆಯುವುದಕ್ಕೂ ಮುನ್ನವೇ ಕುಖ್ಯಾತಿ ಪಡೆದ ಅನನ್ಯಾ ಪಾಂಡೆಗೆ ಆರ್ಯನ್​​​ ಜತೆ ಏನು ನಂಟು?

‘ರಮ್ಯಾ ಕೇವಲ ವಿಶ್​ ಮಾಡೋದಲ್ಲ, ನಮ್ಮ ಜತೆ ಸಿನಿಮಾ ಮಾಡಬೇಕು’; ಮನದಾಳದ ಮಾತು ಹೇಳಿಕೊಂಡ ಧನಂಜಯ​

Published On - 2:01 pm, Thu, 21 October 21