ಕೇಂದ್ರ ಚುನಾವಣಾ ಆಯೋಗದಿಂದ ರಾಜ್ಯದ 2 ಮಹಿಳಾ ಐಎಎಸ್ ಅಧಿಕಾರಿಗಳಿಗೆ ಪ್ರಶಸ್ತಿ ಘೋಷಣೆ

ಕೇಂದ್ರ ಚುನಾವಣಾ ಆಯೋಗದಿಂದ ಕರ್ನಾಟಕದ ಇಬ್ಬರು ಮಹಿಳಾ ಐಎಎಸ್ ಅಧಿಕಾರಿಗಳಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಸಾಮಾನ್ಯ ವರ್ಗದಡಿಯಲ್ಲಿ ಚಿತ್ರದುರ್ಗ ಡಿಸಿ ದಿವ್ಯಾ ಪ್ರಭುಗೆ ಮತ್ತು ಅತ್ಯುತ್ತಮ ಕಾರ್ಯನಿರ್ವಹಿಸಿದ ಇಲಾಖೆ ವರ್ಗದಡಿ ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತೆ ಸಿ.ಶಿಖಾಗೆ ಪ್ರಶಸ್ತಿ ನೀಡಲಾಗಿದೆ.

ಕೇಂದ್ರ ಚುನಾವಣಾ ಆಯೋಗದಿಂದ ರಾಜ್ಯದ 2 ಮಹಿಳಾ ಐಎಎಸ್ ಅಧಿಕಾರಿಗಳಿಗೆ ಪ್ರಶಸ್ತಿ ಘೋಷಣೆ
ಮಹಿಳಾ ಐಎಎಸ್ ಅಧಿಕಾರಿಗಳು
Edited By:

Updated on: Jan 17, 2024 | 9:10 PM

ಬೆಂಗಳೂರು, ಜನವರಿ 17: ಕೇಂದ್ರ ಚುನಾವಣಾ ಆಯೋಗ (Central Election Commission) ದಿಂದ ಕರ್ನಾಟಕದ ಇಬ್ಬರು ಮಹಿಳಾ ಐಎಎಸ್ ಅಧಿಕಾರಿಗಳಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಸಾಮಾನ್ಯ ವರ್ಗದಡಿಯಲ್ಲಿ ಚಿತ್ರದುರ್ಗ ಡಿಸಿ ದಿವ್ಯಾ ಪ್ರಭುಗೆ ಮತ್ತು ಅತ್ಯುತ್ತಮ ಕಾರ್ಯನಿರ್ವಹಿಸಿದ ಇಲಾಖೆ ವರ್ಗದಡಿ ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತೆ ಸಿ.ಶಿಖಾಗೆ ಪ್ರಶಸ್ತಿ ನೀಡಲಾಗಿದೆ. 4 ವರ್ಗಗಳಲ್ಲಿ ಕೇಂದ್ರ ಚುನಾವಣಾ ಆಯೋಗ ರಾಷ್ಟ್ರೀಯ ಪ್ರಶಸ್ತಿ ನೀಡುತ್ತದೆ. ಚುನಾವಣೆಗಳಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿಗಳನ್ನು ಪ್ರೋತ್ಸಾಹಿಸಲು ಪ್ರಶಸ್ತಿ ನೀಡಲಾಗುತ್ತಿದ್ದು, ಜನವರಿ 25ರಂದು ದೆಹಲಿಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ದಿವ್ಯಾ ಪ್ರಭು ಅವರಿಗೆ ಮತದಾರರ ಪಟ್ಟಿ ನಿರ್ವಹಣೆಯಲ್ಲಿ ಯುವ ಮತದಾರರ ನೋಂದಣಿ, ವಿಶೇಷ ಮತದಾರರ ನೋಂದಣಿ ಹೆಚ್ಚಳ ಸೇರಿದಂತೆ ಚುನಾವಣೆಯಲ್ಲಿ ನಿರ್ವಹಿಸಿದ ಕಾರ್ಯಗಳಿಗೆ ಪ್ರಶಸ್ತಿ ನೀಡಲಾಗುತ್ತಿದೆ.

ಇದನ್ನೂ ಓದಿ: ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ, ಲೋಕಸಭಾ ಚುನಾವಣೆ: ಕರ್ನಾಟಕದಲ್ಲೆಡೆ ಕಟ್ಟೆಚ್ಚರ

ಶಿಖಾ ಅವರಿಗೆ 2023ರ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ವಾಣಿಜ್ಯ ತೆರಿಗೆ ಆಯುಕ್ತರಾಗಿ ಇಲಾಖೆಯ ಮೂಲಕ ಮತದಾರರಲ್ಲಿ ಉಚಿತ ಉಡುಗೊರೆಗಳ ಕುರಿತು ಹಮ್ಮಿಕೊಂಡಿದ್ದ ಜನಜಾಗೃತಿ, ವಾಣಿಜ್ಯ ಕ್ಷೇತ್ರದಲ್ಲಿ ಚುನಾವಣಾ ನೀತಿ ಸಂಹಿತಿ ಪಾಲನೆ ಸೇರಿದಂತೆ ಕಟ್ಟುನಿಟ್ಟಿನ ಚುನಾವಣೆ ನಡೆಸಲು ಪ್ರಮುಖ ಪಾತ್ರವಹಿಸಿದ್ದಕ್ಕಾಗಿ ಪ್ರಶಸ್ತಿ ನೀಡಲಾಗುತ್ತಿದೆ.

ಇದನ್ನೂ ಓದಿ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ವಿಚಾರ: ಅನುಮತಿ ಪಡೆದು ಕಟೌಟ್ ಹಾಕಿದ್ದರೂ FIR ದಾಖಲು

ಆಯೋಗವು ಚುನಾವಣೆಗಳಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿಗಳನ್ನು ಪ್ರೋತ್ಸಾಹಿಸಲು ಹಾಗೂ ಅವರನ್ನು ಅಭಿನಂದಿಸಲು ಪ್ರತಿ ವರ್ಷ ಸಾಮಾನ್ಯ ವರ್ಗ, ವಿಶೇಷ ವರ್ಗ, ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಸರ್ಕಾರಿ ಇಲಾಖೆ ಅಥವಾ ಸಂಸ್ಥೆಗಳು ಹಾಗೂ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ರಾಜ್ಯ ಎಂದು ನಾಲ್ಕು ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಿ ಗೌರವಿಸುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:01 pm, Wed, 17 January 24

ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More
Loading...
Unable to load recommendations.
Follow Us