
ಬೆಂಗಳೂರು, ಜೂನ್ 25: ಹವಾಮಾನ ವೈಪರೀತ್ಯ ಹಾಗೂ ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ಕಂಗಾಲಾಗಿರುವ ಕರ್ನಾಟಕದ ಮಾವು ಬೆಳೆಗಾರರ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ಮಿಡಿದಿದ್ದು, ಮಾರುಕಟ್ಟೆ ಹಸ್ತಕ್ಷೇಪ ಯೋಜನೆ (Market Intervention Scheme – MIS) ಅಡಿಯಲ್ಲಿ 1,30,000 ಮೆಟ್ರಿಕ್ ಟನ್ ತೋತಾಪುರಿ ಮಾವಿಗೆ ಪ್ರತಿ ಕ್ವಿಂಟಾಲ್‌ಗೆ 1,750 ರೂಪಾಯಿ ಸಹಾಯಧನವನ್ನು ರೈತರಿಗೆ ನೀಡಲು ಅನುಮೋದನೆ ನೀಡಿದೆ. ಈ ಸಂಬಂಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಎಕ್ಸ್ ಪೋಸ್ಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಕರ್ನಾಟಕದಲ್ಲಿ ಹವಾಮಾನ ವೈಪರೀತ್ಯ ಹಾಗೂ ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ತೋತಾಪುರಿ ಮಾವು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸುವಂತೆ ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು ಬೆಲೆ ಕೊರತೆ ಪಾವತಿ ಯೋಜನೆ (PDPS) ಅಡಿಯಲ್ಲಿ ಬೆಂಬಲ ನೀಡುವಂತೆ ನಾನು ಮನವಿ ಮಾಡಿದ್ದೆ.
ನನ್ನ ಮನವಿಗೆ… pic.twitter.com/9li4RuZRUx
— Pralhad Joshi (@JoshiPralhad) June 25, 2026
ತೋತಾಪುರಿ ಮಾವು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸುವಂತೆ ಕೇಂದ್ರ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು ಬೆಲೆ ಕೊರತೆ ಪಾವತಿ ಯೋಜನೆ (PDPS) ಅಡಿಯಲ್ಲಿ ಬೆಂಬಲ ನೀಡುವಂತೆ ತಾನು ಮನವಿ ಮಾಡಿದ್ದೆ. ಆ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಮಾರುಕಟ್ಟೆ ಹಸ್ತಕ್ಷೇಪ ಯೋಜನೆ (Market Intervention Scheme – MIS) ಅಡಿಯಲ್ಲಿ ರೈತರಿಗೆ ಸಹಾಯಧನವನ್ನು ನೀಡಲು ಅನುಮೋದನೆ ನೀಡಿರೋದಾಗಿ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಇದನ್ನೂ ಓದಿ: ಕೋಲಾರದಲ್ಲಿ ವಾಹನಗಳನ್ನು ತಡೆದು, ರಸ್ತೆ ಬಂದ್ ಮಾಡಿ ಮಾವು ಬೆಳೆಗಾರರ ಪ್ರತಿಭಟನೆ!
ಇನ್ನು ರಾಜ್ಯದ ಮಾವು ಬೆಳೆಗಾರರ ಹಿತಾಸಕ್ತಿಯನ್ನು ಕಾಪಾಡಲು ಅಗತ್ಯ ಕ್ರಮ ಕೈಗೊಂಡಿರುವ ಕೇಂದ್ರ ಕೃಷಿ ಸಚಿವರಿಗೆ ಹೃತ್ಪೂರ್ವಕ ಧನ್ಯವಾದವನ್ನೂ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಈ ನಿರ್ಧಾರವು ಸಾವಿರಾರು ರೈತ ಕುಟುಂಬಗಳಿಗೆ ನೆರವಾಗಲಿದ್ದು, ಅವರ ಆರ್ಥಿಕ ಸ್ಥಿರತೆ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ. ಸದಾ ರೈತರ ಕಲ್ಯಾಣಕ್ಕೆ ಬದ್ಧವಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮತ್ತು ಕೃಷಿ ಸಚಿವ ಶಿವರಾಜಸಿಂಗ್ ಚವ್ಹಾಣ್ ಅವರಿಗೆ ಕರ್ನಾಟಕದ ಸಮಸ್ತ ರೈತರ ಪರವಾಗಿ ಧನ್ಯವಾದಗಳನ್ನು ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 1:12 pm, Thu, 25 June 26