ಕರ್ನಾಟಕದ ತೆಂಗು ಬೆಳೆಗಾರರಿಗೆ ಕೇಂದ್ರ ಸರ್ಕಾರ ಬಂಪರ್ ಕೊಡುಗೆ: ಕೊಬ್ಬರಿ ಖರೀದಿಯ ಬೆಂಬಲ ಬೆಲೆ ಹೆಚ್ಚಳ

ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕೊಬ್ಬರಿ ಖರೀದಿಯ ಬೆಂಬಲ ಬೆಲೆಯನ್ನು ಹೆಚ್ಚಿಸಲು ಅನುಮೋದನೆ ದೊರೆತಿದೆ. ಅದರಂತೆ ಮಿಲ್ಲಿಂಗ್‌ ಕೊಬ್ಬರಿ ಹಾಗೂ ಪೂರ್ಣ ಕೊಬ್ಬರಿಗೆ ಕ್ರಮವಾಗಿ ಪ್ರತಿ ಕ್ವಿಂಟಾಲ್‌ಗೆ 300 ರೂಪಾಯಿ ಹಾಗೂ 250 ರೂಪಾಯಿ ಹೆಚ್ಚಳ ಮಾಡಲಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ(R Ashoka) ಟ್ವೀಟ್​ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಕೋರಿದ್ದಾರೆ.

ಕರ್ನಾಟಕದ ತೆಂಗು ಬೆಳೆಗಾರರಿಗೆ ಕೇಂದ್ರ ಸರ್ಕಾರ ಬಂಪರ್ ಕೊಡುಗೆ: ಕೊಬ್ಬರಿ ಖರೀದಿಯ ಬೆಂಬಲ ಬೆಲೆ ಹೆಚ್ಚಳ
ತೆಂಗು ಬೆಳೆಗಾರರಿಗೆ ಕೇಂದ್ರ ಸರ್ಕಾರ ಬಂಪರ್ ಕೊಡುಗೆ
Follow us
|

Updated on: Dec 27, 2023 | 8:29 PM

ಬೆಂಗಳೂರು, ಡಿ.27: ಕರ್ನಾಟಕದ ತೆಂಗು ಬೆಳೆಗಾರರಿಗೆ (Coconut Growers) ಕೇಂದ್ರ ಸರ್ಕಾರ(Central Government) ಬಂಪರ್ ಕೊಡುಗೆ ನೀಡಿದೆ. ಇಂದಿನ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕೊಬ್ಬರಿ ಖರೀದಿಯ ಬೆಂಬಲ ಬೆಲೆಯನ್ನು ಹೆಚ್ಚಿಸಲು ಅನುಮೋದನೆ ದೊರೆತಿದೆ. ಅದರಂತೆ ಮಿಲ್ಲಿಂಗ್‌ ಕೊಬ್ಬರಿ ಹಾಗೂ ಪೂರ್ಣ ಕೊಬ್ಬರಿಗೆ ಕ್ರಮವಾಗಿ ಪ್ರತಿ ಕ್ವಿಂಟಾಲ್‌ಗೆ 300 ರೂಪಾಯಿ ಹಾಗೂ 250 ರೂಪಾಯಿ ಹೆಚ್ಚಳ ಮಾಡಲಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ(R Ashoka) ಟ್ವೀಟ್​ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಕೋರಿದ್ದಾರೆ.

ರೈತರ ಪರಿಶ್ರಮಕ್ಕೆ ನ್ಯಾಯ ಒದಗಿಸಲು, ಅನ್ನದಾತರ ಆದಾಯ ಹೆಚ್ಚಿಸಲು ಕೇಂದ್ರ ಬಿಜೆಪಿ ಸರ್ಕಾರ ಸದಾ ಬದ್ಧತೆ ತೋರಿದೆ. ರಾಜ್ಯದ ತೆಂಗು ಬೆಳೆಗಾರರ ಮನವಿಗೆ ಸ್ಪಂದಿಸಿದ ಪ್ರಧಾನಿ ಅವರಿಗೆ ಕೃತಜ್ಞತೆಗಳು ಎಂದು ಟ್ವೀಟ್​ ಮಾಡಿದ್ದಾರೆ.

;

2023 ಅಕ್ಟೋಬರ್​ 02 ರಂದು ಕೇಂದ್ರದಿಂದ ಪ್ರತಿ ಕ್ವಿಂಟಾಲ್​ಗೆ 20 ಸಾವಿರ ರೂ.ಗಳ ಕನಿಷ್ಠ ಬೆಂಬಲ ಬೆಲೆ ಮತ್ತು ರಾಜ್ಯ ಸರ್ಕಾರದಿಂದ ಪ್ರತಿ ಕ್ವಿಂಟಾಲ್​ಗೆ 5 ಸಾವಿರ ರೂ.ಗಳ ಹೆಚ್ಚುವರಿ ಬೆಂಬಲ ಹಣ ನೀಡುವಂತೆ ಒತ್ತಾಯಿಸಿದ್ದರು. ಅಂದು ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡ ಬಡಗಲಪುರ ನಾಗೇಂದ್ರ ಮಾತನಾಡಿ, ಕಳೆದ 5ರಿಂದ6 ವರ್ಷಗಳಿಂದ ಕೊಬ್ಬರಿ ಬೆಲೆ ಕ್ವಿಂಟಾಲ್​ಗೆ 18 ಸಾವಿರ ರೂ.ಗಳಿಂದ ಕೇವಲ 7,000 ರೂ.ಗೆ ಕುಸಿದಿದ್ದರಿಂದ ರಾಜ್ಯದ ತೆಂಗು ಬೆಳೆಗಾರರು ತೀವ್ರ ಸಂಕಷ್ಟದಲ್ಲಿದ್ದಾರೆ. ಕೇಂದ್ರ ಸರ್ಕಾರದ ರೈತ ವಿರೋಧಿ ಆಮದು-ರಫ್ತು ನೀತಿಯೇ ಬೆಲೆ ಕುಸಿತಕ್ಕೆ ಪ್ರಮುಖ ಕಾರಣ ಎಂದು ಹೇಳಿದ್ದರು. ಇದೀಗ ಕೇಂದ್ರ ಸರ್ಕಾರ ಬೆಂಬಲ ಬೆಲೆ ಘೋಷಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!