Bharat Rice: ಇಂದಿನಿಂದ ಕೇಂದ್ರದ ಭಾರತ್ ಬ್ರ್ಯಾಂಡ್​ನ ಅಕ್ಕಿ ಮಾರಾಟ; ಕೆಜಿಗೆ 29 ರೂ, ಆನ್​ಲೈನ್​ನಲ್ಲೂ ಖರೀದಿಸಬಹುದು

ಕೇಂದ್ರ ಸರ್ಕಾರ ಮಾರಾಟ ಮಾಡಲು ತೀರ್ಮಾನಿಸಿರುವ ಭಾರತ್ ಬ್ರ್ಯಾಂಡ್‌‌ ಅಕ್ಕಿಗೆ ಇಂದು ಸಂಜೆ 4 ಗಂಟೆಗೆ ಬೆಂಗಳೂರಿನಲ್ಲಿ ಚಾಲನೆ ಸಿಗಲಿದೆ. ಕೆಜಿ ಭಾರತ್ ಬ್ರ್ಯಾಂಡ್​ ಅಕ್ಕಿಗೆ 29 ರೂ.ದರ ನಿಗದಿ ಮಾಡಲಾಗಿದೆ. ರಿಲಯನ್ಸ್​​, ಫ್ಲಿಪ್​​ಕಾರ್ಟ್​, ಬಿಗ್​ ಬಾಸ್ಕೆಟ್​ ಅಷ್ಟೇ ಅಲ್ಲದೆ ಆನ್​ಲೈನ್​ನಲ್ಲೂ ಭಾರತ್ ಬ್ರ್ಯಾಂಡ್ ಅಕ್ಕಿ ಖರೀದಿ ಮಾಡಬಹುದು. ಇನ್ನೊಂದು ವಾರದಲ್ಲಿ ಇತರೆ ಸ್ಟೋರ್​ಗಳಲ್ಲೂ ಭಾರತ್ ಅಕ್ಕಿ ಲಭ್ಯವಾಗಲಿದೆ.

Bharat Rice: ಇಂದಿನಿಂದ ಕೇಂದ್ರದ ಭಾರತ್ ಬ್ರ್ಯಾಂಡ್​ನ ಅಕ್ಕಿ ಮಾರಾಟ; ಕೆಜಿಗೆ 29 ರೂ, ಆನ್​ಲೈನ್​ನಲ್ಲೂ ಖರೀದಿಸಬಹುದು
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
| Updated By: Digi Tech Desk

Updated on:Feb 06, 2024 | 2:30 PM

ಬೆಂಗಳೂರು, ಫೆ.06: ಲೋಕ ಸಭಾ ಚುನಾವಣೆ (Lok Sabha Election) ಸಮೀಪಿಸುತ್ತಿದ್ದು ರಾಜಕೀಯ ಪಕ್ಷಗಳು ನಾನಾ ರೀತಿಯ ತಂತ್ರಗಳನ್ನು ರೂಪಿಸುತ್ತಿವೆ. ಸದ್ಯ ಕೇಂದ್ರ ಸರ್ಕಾರ (Central Government) ಮಾರಾಟ ಮಾಡಲು ತೀರ್ಮಾನಿಸಿರುವ ಭಾರತ್ ಬ್ರ್ಯಾಂಡ್‌‌ (Bharath Brand) ಅಕ್ಕಿ ಇಂದಿನಿಂದ ಗ್ರಾಹಕರ ಕೈಗೆ ಸಿಗಲಿದೆ. ಇಂದು ಸಂಜೆ 4 ಗಂಟೆಗೆ ಬೆಂಗಳೂರಿನಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ವಾಹನಗಳಿಗೆ ಚಾಲನೆ ಸಿಗಲಿದೆ. ಈ ಮೂಲಕ ಭಾರತ್ ಅಕ್ಕಿ ಮಾರಾಟಕ್ಕೆ ಚಾಲನೆ ನೀಡಲಾಗುತ್ತಿದೆ. ಕೆಜಿ ಭಾರತ್ ಬ್ರ್ಯಾಂಡ್​ ಅಕ್ಕಿಗೆ 29 ರೂ.ದರ ನಿಗದಿ ಮಾಡಲಾಗಿದೆ.

ಅಕ್ಕಿ ದರ ಏರಿಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ಈ ಯೋಜನೆಯನ್ನು ಘೋಷಿಸಿದೆ. ನಾಫೆಡ್​​-ಭಾರತ ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟದಿಂದ ಇಂದು ನಾಫೆಡ್​​ನ 7 ಸಂಚಾರಿ ವಾಹನಗಳಲ್ಲಿ ಭಾರತ್​ ಅಕ್ಕಿ ಮಾರಾಟ ಮಾಡಲಾಗುತ್ತಿದೆ. ಭಾರತ್ ಅಕ್ಕಿ ಯೋಜನೆಯಡಿ ಕೆಜಿ ಭಾರತ್ ಅಕ್ಕಿ 29 ರೂ.ಗೆ ಲಭ್ಯವಾಗಲಿದೆ. 5 ಕೆಜಿ, 10 ಕೆಜಿ ಬ್ಯಾಗ್​ಗಳಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ಲಭ್ಯವಾಗಲಿದೆ. ಸಂಜೆ 4 ಗಂಟೆಯಿಂದ ಬೆಂಗಳೂರಿನಲ್ಲಿ ಭಾರತ್​ ಅಕ್ಕಿ ಮಾರಾಟ ಆರಂಭವಾಗುತ್ತೆ. ನಾಳೆ ಮಂಡ್ಯ, ಇನ್ನೊಂದು ವಾರದಲ್ಲಿ ಇತರೆ ಜಿಲ್ಲೆಗಳಲ್ಲೂ ಲಭ್ಯವಾಗಲಿದೆ.

ಆನ್​ಲೈನ್​ನಲ್ಲೂ ಭಾರತ್ ಬ್ರ್ಯಾಂಡ್ ಅಕ್ಕಿ ಖರೀದಿಗೆ ಅವಕಾಶ

ಇನ್ನು ರಿಲಯನ್ಸ್​​, ಫ್ಲಿಪ್​​ಕಾರ್ಟ್​, ಬಿಗ್​ ಬಾಸ್ಕೆಟ್​ ಅಷ್ಟೇ ಅಲ್ಲದೆ ಆನ್​ಲೈನ್​ನಲ್ಲೂ ಭಾರತ್ ಬ್ರ್ಯಾಂಡ್ ಅಕ್ಕಿ ಖರೀದಿ ಮಾಡಬಹುದು. ಇನ್ನೊಂದು ವಾರದಲ್ಲಿ ಇತರೆ ಸ್ಟೋರ್​ಗಳಲ್ಲೂ ಭಾರತ್ ಅಕ್ಕಿ ಲಭ್ಯವಾಗಲಿದೆ. ಎನ್‌ಸಿಸಿಎಫ್‌ನ ಮುಖ್ಯ ಗೋಡಾನ್ ಯಶವಂತಪುರದಲ್ಲಿದ್ದು ಬೆಂಗಳೂರಿನ 50 ಏರಿಯಾಗಳಿಗೆ ಮೊಬೈಲ್ ವ್ಯಾನ್ ಮೂಲಕ ಮನೆ ಮನೆಗೆ ಅಕ್ಕಿ ತಲುಪಿಸಲು ಸಿದ್ಧತೆ ನಡೆದಿದೆ.

ಇದನ್ನೂ ಓದಿ: ಅನ್ನಭಾಗ್ಯ ಯೋಜನೆಯ ಅಕ್ಕಿ ಕಳ್ಳತನ ಪ್ರಕರಣ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸಹೋದರ ಬಂಧನ

ರಾಜ್ಯದಲ್ಲಿ ದಿನಸಿ, ಧಾನ್ಯ ಎಲ್ಲಾ ವಸ್ತುಗಳ ಬೆಲೆಗಳು ಗಗನಕ್ಕೇರಿದೆ. ಇದರಿಂದ ಜನ ಕಂಗೆಟ್ಟಿದ್ದಾರೆ. ಈ ದರ ಏರಿಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ನಾನಾ ಪ್ರಯತ್ನಗಳನ್ನು ನಡೆಸುತ್ತಿದ್ದು, ಸರ್ಕಾರ ಈಗಾಗಲೇ ಭಾರತ್ ಬ್ರ್ಯಾಂಡ್‌ ಅಡಿಯಲ್ಲಿ ಗೋಧಿ ಮತ್ತು ಬೇಳೆ ಕಾಳುಗಳನ್ನು ಮಾರಾಟ ಮಾಡುತ್ತಿದೆ. ಸದ್ಯ ಈಗ ಅಕ್ಕಿಯನ್ನೂ ಕೂಡ ಮಾರಾಟ ಮಾಡಲು ಮುಂದಾಗಿದೆ. ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಮಹಾಮಂಡಳ (ನಾಫೆಡ್), ರಾಷ್ಟ್ರೀಯ ಸಹಕಾರ ಗ್ರಾಹಕರ ಮಹಾಮಂಡಳ (ಎನ್‌ಸಿಸಿಎಫ್‌) ಮತ್ತು ಕೇಂದ್ರೀಯ ಭಂಡಾರದ ಮಳಿಗೆಗಳಲ್ಲಿ ಮಾರಾಟಕ್ಕೆ ನಿರ್ಧರಿಸಲಾಗಿದ್ದು, ಇ–ಕಾರ್ಮಸ್‌ ವೇದಿಕೆಗಳಲ್ಲೂ ಅಕ್ಕಿ ದೊರೆಯಲಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:41 am, Tue, 6 February 24

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು