Amit Shah: ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ, ಅಮಿತ್ ಶಾ 3 ದಿನ ರಾಜ್ಯ ಪ್ರವಾಸ: ಇಲ್ಲಿದೆ ವೇಳಾಪಟ್ಟಿ

ಕೇಂದ್ರ ಗೃಹ ಸಚಿವ ಅಮಿತ್​ ಶಾ ಡಿ.29ರಿಂದ 31ರವರೆಗೆ 3 ದಿನ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.

Amit Shah: ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ, ಅಮಿತ್ ಶಾ 3 ದಿನ ರಾಜ್ಯ ಪ್ರವಾಸ: ಇಲ್ಲಿದೆ ವೇಳಾಪಟ್ಟಿ
ಕೇಂದ್ರ ಸಚಿವ ಅಮಿತ್ ಶಾ Image Credit source: News18
Follow us
TV9 Web
| Updated By: ವಿವೇಕ ಬಿರಾದಾರ

Updated on:Dec 28, 2022 | 5:29 PM

ಬೆಂಗಳೂರು: ವಿಧಾನಸಭೆ ಚುನಾವಣೆಗೆ 4 ರಿಂದ 5 ತಿಂಗಳು ಬಾಕಿ ಇರುವಾಗಲೇ ಬಿಜೆಪಿಯ ಕೇಂದ್ರ ನಾಯಕರು ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಇದಕ್ಕೆ ಪೂರಕವೆಂಬಂತೆ ಕೆಲವು ದಿನಗಳ ಹಿಂದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ (JP Nadda) ರಾಜ್ಯಕ್ಕೆ ಬಂದು ಹೋಗಿದ್ದು, ಈ ಬೆನ್ನಲ್ಲೇ ಈಗ ಕೇಂದ್ರ ಗೃಹ ಸಚಿವ ಅಮಿತ್​ ಶಾ (Amit Shah) ಡಿ.29ರಿಂದ 31ರವರೆಗೆ 3 ದಿನ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಅಮಿತ್ ಶಾ ಡಿ.29ರಂದು ದೆಹಲಿಯಿಂದ (Delhi) ವಿಶೇಷ ವಿಮಾನದಲ್ಲಿ ಹೊರಟು ಅಂದೇ ರಾತ್ರಿ 10 ಗಂಟೆಗೆ ಯಲಹಂಕ ವಾಯುನೆಲೆಗೆ ಬಂದಿಳಿಯಲಿದ್ದಾರೆ.

ಅಮಿತ್​ ಶಾ ಡಿ.29ರಂದು ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿ, ಮರುದಿನ ಡಿ.30ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 12.15ರವರೆಗೆ ಸಮಯ ಕಾಯ್ದಿರಿಸಿದ್ದಾರೆ. ಈ ಅವಧಿಯಲ್ಲಿ ರಾಜ್ಯದ ಪ್ರಮುಖ ಬಿಜೆಪಿ ನಾಯಕರು ಭೇಟಿಯಾಗು ಸಾಧ್ಯತೆ ಇದೆ. ನಂತರ ಮಂಡ್ಯದ ಬಾಲಕರ ಕಾಲೇಜು ಮೈದಾನದಲ್ಲಿ ಮಧ್ಯಾಹ್ನ 1.45ರಿಂದ 3.15ರವರೆಗೆ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಈ ಮೂಲಕ ಹಳೇ ಮೈಸೂರು ಭಾಗದಲ್ಲಿ ಪಕ್ಷವನ್ನು ಗಟ್ಟಿಗೊಳಿಸುವ ಕಾರ್ಯಕ್ಕೆ ಅಧಿಕೃತ ಬುನಾದಿ ಹಾಕಲಿದ್ದಾರೆ.

ಇದನ್ನೂ ಓದಿ: ಸ್ನೇಹವೋ.. ಅಧಿಕಾರವೋ.. ಆಪ್ತ ಸ್ನೇಹಿತ‌ನ ರೀ ಎಂಟ್ರೀ, ಇಕ್ಕಟ್ಟಿಗೆ ಸಿಲುಕಿದ ಸಚಿವ ಶ್ರೀರಾಮುಲು…!

ಮಧ್ಯಾಹ್ನ 3.30ರಿಂದ ಸಂಜೆ 4.30ಕ್ಕೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮದ ಡೇರಿ ಉದ್ಘಾಟಿಸಿ, ಸಂಜೆ 4.50ಕ್ಕೆ ಮಂಡ್ಯದಿಂದ ವಿಮಾನದ ಮೂಲ ಬೆಂಗಳೂರಿಗೆ ವಾಪಸಾಗಲಿದ್ದಾರೆ. ಸಂಜೆ 5.20ಕ್ಕೆ ಬೆಂಗಳೂರಿಗೆ ಬಂದಿಳಿಯಲಿದ್ದಾರೆ. ಅಲ್ಲಿಂದ ಸಂಜೆ 5.45ರಿಂದ 6.45ರವರೆಗೆ ಅರಮನೆ ಮೈದಾನದಲ್ಲಿ ನಡೆಯಲಿರುವ ಸಹಕಾರ ವಲಯದ ಸಮ್ಮೇಳನದಲ್ಲಿ ಭಾಗಿಯಾಗಲಿದ್ದಾರೆ.

ರಾತ್ರಿ 8ರಿಂದ 9.30ರವರೆಗೆ ಪಕ್ಷದ ಮುಖಂಡರ ಜತೆ ಸಭೆ ನಡೆಸಲಿದ್ದಾರೆ. ಮರುದಿನ ಡಿ.31ರಂದು ಬೆಳಗ್ಗೆ 8.30ರಿಂದ 9.30ರವರೆಗೆ ರಾಜ್ಯ ನಾಯಕರ ಜೊತೆ ಉಪಾಹಾರ ಸೇವಿಸುತ್ತಾರೆ. ನಂತರ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಆವತಿಯಲ್ಲಿ ಬೆಳಗ್ಗೆ 10.55ಕ್ಕೆ ನೆರವೇರುವ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ:  ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಟಿಕೆಟ್‌ಗಾಗಿ ಕಾಂಗ್ರೆಸ್ ಕಚೇರಿಯಲ್ಲಿ ಕಿತ್ತಾಟ, ಜಯಘೋಷ

ಬಳಿಕ ಮಧ್ಯಾಹ್ನ 1 ಗಂಟೆಗೆ ಮಲ್ಲೇಶ್ವರಂನಲ್ಲಿ ನಡೆಯುವ ಸೌಹಾರ್ದ ಸಹಕಾರ ಮಂಡಳಿ ಕಾರ್ಯಕ್ರಮ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 3ರಿಂದ 4.30ರವರೆಗೆ ಬೆಂಗಳೂರಿನ ಬಿಜೆಪಿ ಬೂತ್ ಅಧ್ಯಕ್ಷರು, ಬೂತ್ ಏಜೆಂಟರ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಾರೆ. ಕೊನೆಗೆ ಸಂಜೆ 7.10ಕ್ಕೆ ಯಲಹಂಕ ವಾಯುನೆಲೆಯಿಂದ ನವದೆಹಲಿಗೆ ತೆರಳುತ್ತಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:30 pm, Tue, 27 December 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ