ಇಂದಿನಿಂದ ನಮ್ಮ ಮೆಟ್ರೋದ ಬೈಯ್ಯಪ್ಪನಹಳ್ಳಿ-ಕೆಆರ್​ಪುರ ಮಾರ್ಗ ತಪಾಸಣೆ

2 ಕಿ.ಮೀ ಉದ್ದದ ಕೆ.ಆರ್​.ಪುರ-ಬೈಯಪ್ಪನಹಳ್ಳಿ ಮಾರ್ಗ, 1.9 ಕಿಮೀ ಕೆಂಗೇರಿ-ಚಲಘಟ್ಟ ಮಿಸ್ಸಿಂಗ್ ಲಿಂಕ್ ಮಾರ್ಗದ ಸುರಕ್ಷತಾ ತಪಾಸಣೆಯನ್ನು ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರು ಇಂದಿನಿಂದ ನಡೆಸಲಿದ್ದಾರೆ.

ಇಂದಿನಿಂದ ನಮ್ಮ ಮೆಟ್ರೋದ ಬೈಯ್ಯಪ್ಪನಹಳ್ಳಿ-ಕೆಆರ್​ಪುರ ಮಾರ್ಗ ತಪಾಸಣೆ
ನಮ್ಮ ಮೆಟ್ರೋ
Follow us
Kiran HV
| Updated By: ವಿವೇಕ ಬಿರಾದಾರ

Updated on: Sep 13, 2023 | 9:24 AM

ಬೆಂಗಳೂರು ಸೆ.13: ಐಟಿ ಉದ್ಯೋಗಿಗಳ ಬಹುನಿರೀಕ್ಷಿತ ಬೈಯ್ಯಪ್ಪನಹಳ್ಳಿ- ಕೆ.ಆರ್.ಪುರ (Baiyappanahalli- KR Puram), ಕೆಂಗೇರಿ- ಚಲಘಟ್ಟ (Kengeri-Challaghatta) ಮೆಟ್ರೋ ಮಾರ್ಗದ ತಪಾಸಣೆಯನ್ನು ಕೇಂದ್ರ ರೈಲ್ವೆ ಸುರಕ್ಷತಾ ಆಯುಕ್ತರು (CMRS) ಇಂದು ಸೆ.13 ಮತ್ತು ಸೆ.14 ಎರಡು ದಿನ ನಡೆಸಲಿದ್ದಾರೆ ಎಂದು ಬೆಂಗಳೂರು ಮೆಟ್ರೋ ರೈಲ್ವೆ ನಿಗಮ (BMRCL) ತಿಳಿಸಿದೆ. ಎರಡು ಕಿ.ಮೀ ಉದ್ದದ ಕೆ.ಆರ್​.ಪುರ-ಬೈಯಪ್ಪನಹಳ್ಳಿ ಮಾರ್ಗ, 1.9 ಕಿಮೀ ಕೆಂಗೇರಿ-ಚಲಘಟ್ಟ ಮಿಸ್ಸಿಂಗ್ ಲಿಂಕ್ ಮಾರ್ಗದ ಸುರಕ್ಷತಾ ತಪಾಸಣೆ ನಡೆಯಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಆರು ತಿಂಗಳ ಹಿಂದೆ ವೈಟ್​ಫಿಲ್ಡ್​ನ ಕಾಡುಗೋಡಿ-ಕೆಆರ್​ಪುರಂ ಮಾರ್ಗಕ್ಕೆ ಚಾಲನೆ ನೀಡಿದ್ದರು. ಕೆಆರ್​ಪುರ-ಬೈಯಪ್ಪನಹಳ್ಳಿವರೆಗಿನ ಎರಡು ಕಿ.ಮಿ ಮಾರ್ಗ ಪೂರ್ಣಗೊಳ್ಳದ ಹಿನ್ನೆಲೆ ಉದ್ಘಾಟನೆಯಾಗಿರಲಿಲ್ಲ. ಸದ್ಯ ಇಂದಿನ ತಪಾಸಣೆ ಬಳಿಕ ಶೀಘ್ರದಲ್ಲೇ ಮಾರ್ಗ ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆ ಇದೆ.

ಇಂದು‌ ಮತ್ತು ನಾಳೆ ಕೇಂದ್ರ ರೈಲ್ವೆ ಸುರಕ್ಷತೆಯ ಹತ್ತು ಅಧಿಕಾರಿಗಳು, ಎರಡು ತಂಡಗಳಾಗಿ ತಪಾಸಣೆ ನಡೆಸಲಿವೆ. ರೈಲಿನ ವೇಗ, ತಿರುವು, ವಿದ್ಯುತ್ ಪ್ರವಹಿಸುವಿಕೆ, ಸಿಗ್ನಲಿಂಗ್, ನಿಲ್ದಾಣದಲ್ಲಿ ಮೂಲಭೂತ ಸೌಲಭ್ಯಗಳ ಬಗ್ಗೆ ತಪಾಸಣೆ ನಡೆಸಲಿದ್ದಾರೆ. ಬಿಎಂಆರ್​ಸಿಎಲ್​ ಈಗಾಗಲೇ ಸಂಪೂರ್ಣ ಮಾಹಿತಿಯನ್ನು ಕೇಂದ್ರ ತಂಡಕ್ಕೆ ಸಲ್ಲಿಸಿದೆ.

ಇದನ್ನೂ ಓದಿ: ಬೆಂಗಳೂರಿನ ಶೇ 95 ರಷ್ಟು ಜನರಿಗೆ ತಮ್ಮ ಸ್ವಂತ ವಾಹನಕ್ಕಿಂತ ನಮ್ಮ ಮೆಟ್ರೋ ಪ್ರಯಾಣವೇ ಅಚ್ಚುಮೆಚ್ಚು

ನೇರಳೆ ಮಾರ್ಗದ ಕೆ.ಆರ್. ಪುರ ಹಾಗೂ ವೈಟ್‌ ಫೀಲ್ಡ್ ನಡುವಣ 13.71 ಕಿ.ಮೀ. ಮೆಟ್ರೋ ಉದ್ಘಾಟನೆಯಾಗಿ ಆರು ತಿಂಗಳ ಬಳಿಕ ಬೈಯಪ್ಪನಹಳ್ಳಿ-ಕೆ.ಆರ್​.ಪುರ ನಡುವಿನ ಕಾಮಗಾರಿ ಮುಗಿದಿದೆ. ಜೊತೆಗೆ ಕೆಂಗೇರಿ-ಚಲ್ಲಘಟ್ಟದ ನಡುವಿನ ಕಾಮಗಾರಿ ಮುಗಿದಿರುವ ಕಾರಣ ಏಕಕಾಲಕ್ಕೆ ಎರಡೂ ವಿಸ್ತರಿತ ಮಾರ್ಗವನ್ನು ಜನ ಸಂಚಾರಕ್ಕೆ ಮುಕ್ತಗೊಳಿಸಲು ಬಿಎಂಆರ್​ಸಿಎಲ್ ನಿರ್ಧರಿಸಿದೆ.

ಸಂಪೂರ್ಣ 43ಕಿಮೀ ನೇರಳೆ ಮಾರ್ಗ ತೆರೆದುಕೊಳ್ಳಲಿರುವ ಕಾರಣದಿಂದ ರೈಲುಗಳ ಸಮಯ, ಸಿಗ್ನಲಿಂಗ್ ವ್ಯವಸ್ಥೆ ಸೇರಿದಂತೆ ಹಲವು ಮಾಹಿತಿಗಳನ್ನು ಅಧಿಕಾರಿಗಳಿಂದ ಪಡೆದುಕೊಳ್ಳಲಿದ್ದಾರೆ. ಇದಾದ ಬಳಿಕ ಕೆಂಗೇರಿ-ಚಲ್ಲಘಟ್ಟದ ಮಾರ್ಗವನ್ನು ಪರಿಶೀಲಿಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ನಮ್ಮಣ್ಣ ಹುಟ್ಟೇ ಇರಲಿಲ್ಲ ಅಂತ ಸರ್ಕಾರ ಹೇಳಬಹುದು: ಸಚಿನ್ ಸಹೋದರಿ
ನಮ್ಮಣ್ಣ ಹುಟ್ಟೇ ಇರಲಿಲ್ಲ ಅಂತ ಸರ್ಕಾರ ಹೇಳಬಹುದು: ಸಚಿನ್ ಸಹೋದರಿ