AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಇಟಿ ಕೇಂದ್ರದಲ್ಲಿ ವಿದ್ಯಾರ್ಥಿ ಜನಿವಾರ ತೆಗೆಸಿದ ಆರೋಪ: ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿ ಅಮಾನತು

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಬೆಂಗಳೂರು ನಗರ ಡಿಸಿಗೆ ಪತ್ರ ಬರೆದಿದೆ. ಜನಿವಾರ ತೆಗೆಯದಂತೆ ಸೂಚಿಸಿದ್ದರೂ ಘಟನೆ ನಡೆದಿರುವುದು ಉದ್ದೇಶಪೂರ್ವಕ ಎಂದು KEA ಶಂಕಿಸಿದೆ. ಈ ನಡುವೆ ಆರೋಪ ಸಂಬಂಧ ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಸಿಇಟಿ ಕೇಂದ್ರದಲ್ಲಿ ವಿದ್ಯಾರ್ಥಿ ಜನಿವಾರ ತೆಗೆಸಿದ ಆರೋಪ: ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿ ಅಮಾನತು
ಡಿಸಿಗೆ KEA ಬರೆದ ಪತ್ರImage Credit source: Tv9 Kannada
ವಿನಯ್​ ಕಾಶಪ್ಪನವರ್​
| Edited By: |

Updated on:Apr 24, 2026 | 4:03 PM

Share

ಬೆಂಗಳೂರು, ಏಪ್ರಿಲ್​​ 24: ಸಿಇಟಿ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ವಿಚಾರ ಭಾರಿ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಬೆಂಗಳೂರಿನ ಮಡಿವಾಳದಲ್ಲಿರುವ ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿ ಅಮಾನತು ಮಾಡಲಾಗಿದೆ. ಸಿಬ್ಬಂದಿಯಾದ ಸುಧಾಕರ್, ಗಿರಿಜಮ್ಮ, ಆರ್​.ಸರಿತಾ ಸಸ್ಪೆಂಡ್​ ಆಗಿದ್ದಾರೆ. ಜನಿವಾರ ತೆಗೆಸಿದ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಡಿಸಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA) ಪತ್ರ ಬರೆಯಲಾಗಿತ್ತು. ವಸ್ತ್ರಸಂಹಿತೆ ಅಧಿಕಾರಿಗಳ ನೇಮಕ ಮಾಡಿದ್ರೂ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳ ಜನಿವಾರ ತೆಗೆಸದಂತೆ ಸೂಚನೆ ನೀಡಲಾಗಿತ್ತು. ಆದ್ರೂ ಜನಿವಾರ ತೆಗೆಸಿದ್ದು ಉದ್ದೇಶಪೂರ್ವಕ ಘಟನೆಯಂತೆ ಕಂಡಿದೆ. ಹೀಗಾಗಿ ಈ ಬಗ್ಗೆ ತನಿಖೆ ನಡೆಸಿ ಕ್ರಮವಹಿಸಿದ ವಿವರ ನೀಡುವಂತೆ ಪತ್ರ ಮುಖೇನೆ KEA ಆಗ್ರಹಿಸಿತ್ತು.

2026ನೇ ಸಾಲಿನ ಸಿಇಟಿ ಪರೀಕ್ಷೆ ವೇಳೆ ಬೆಂಗಳೂರು ಕೇಂದ್ರದಲ್ಲಿ ಏಪ್ರಿಲ್​​ 23ರ ಭೌತಶಾಸ್ತ್ರ ವಿಷಯದ ಪರೀಕ್ಷೆಗೆ ಹಾಜರಾಗಲು ಬಂದಿದ್ದ ಕೆಲವು ಅಭ್ಯರ್ಥಿಗಳ ಜನಿವಾರವನ್ನು ತೆಗೆಸಲು ಅಲ್ಲಿಯ ಸಿಬ್ಬಂದಿಗಳು ಸೂಚಿಸಿರುತ್ತಾರೆಂದು, ನಂತರ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಿರುತ್ತಾರೆ ಎಂದು ಮಾಧ್ಯಮಗಳ ಮೂಲಕ ತಿಳಿದುಬಂದಿದೆ. ಇದೊಂದು ಸೂಕ್ಷ್ಮ ವಿಚಾರವಾಗಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಹಳ ಸ್ಪಷ್ಟವಾಗಿ ವಸ್ತ್ರ ಸಂಹಿತೆಯ ಬಗ್ಗೆ ವಿವರಿಸಿದೆ. ಕಳೆದ ವರ್ಷದಲ್ಲಿ ನಡೆದ ಇದೇ ತರಹದ ಘಟನೆ ಉಲ್ಲೇಖಿಸಿ ಜನಿವಾರ, ಲಿಂಗ ಇತ್ಯಾದಿ ಧಾರ್ಮಿಕ ದಿರಿಸುಗಳನ್ನು ತೆಗೆಯಬಾರದೆಂದು ಸ್ಪಷ್ಟವಾಗಿ ತರಬೇತಿಯಲ್ಲಿ ತಿಳಿಸಲಾಗಿದೆ. ಆದರೂ ಇಂತಹ ಘಟನೆ ನಡೆದಿದ್ದರೆ ಯಾರೋ ಉದ್ದೇಶ ಪೂರ್ವಕವಾಗಿ ಮಾಡಿದಂತೆ ಮೇಲ್ನೋಟಕ್ಕೆ ಕಂಡುಬರುತ್ತಿದೆ. ಹೀಗಾಗಿ ಈ ಬಗ್ಗೆ ಹಿರಿಯ ಅಧಿಕಾರಿಗಳಿಂದ ವಿಚಾರಣೆ ನಡೆಸಿ ನಿಯಮಾನುಸಾರ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಪೂರ್ಣ ವರದಿ ಸಲ್ಲಿಸುವಂತೆ ಬೆಂಗಳೂರು ನಗರ ಡಿಸಿಗೆ ಬರೆದ ಪತ್ರದಲ್ಲಿ KEA ಆಗ್ರಹಿಸಿತ್ತು.

ಇದನ್ನೂ ಓದಿ: ಬೆಂಗಳೂರಿನ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಸಿಬ್ಬಂದಿ; ಸಿಇಟಿ ಪರೀಕ್ಷೆಯೊಂದಿಗೇ ಮತ್ತೆ ಶುರುವಾಯ್ತು ವಿವಾದ

ಜನಿವಾರ ತೆಗೆಸಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ಅಶೋಕ್​​

ಸಿಇಟಿ ಬರೆಯಲು ಬಂದಿದ್ದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ ಸಂಬಂಧ ಎಕ್ಸ್ ಮೂಲಕ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಸರ್ಕಾರದಿಂದ ಮಾಂಗಲ್ಯ, ಜನಿವಾರ ತೆಗೆಸುವ ಹಿಂದೂ ವಿರೋಧಿ ಕೃತ್ಯಗಳು ನಡೆಯುತ್ತಿವೆ. ಕಾಂಗ್ರೆಸ್‌ ಸರ್ಕಾರ ಈ ವರ್ಷವೂ ತನ್ನ ಹಳೆಯ ಚಾಳಿ ಮುಂದುವರಿಸಿದೆ. ಬೆಂಗಳೂರಿನ ಕೋರಮಂಗಲದ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯೊಬ್ಬನ ಜನಿವಾರ ತೆಗೆಸಿ ಪರೀಕ್ಷೆ ಬರೆಯುವಂತೆ ಒತ್ತಾಯಿಸುವ ಮೂಲಕ ಮತ್ತೊಮ್ಮೆ ಹಿಂದೂ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತಂದಿದೆ. ಹಿಂದೆ KPSC ಪರೀಕ್ಷೆ ವೇಳೆ ಮಹಿಳೆಯೊಬ್ಬರ ಮಾಂಗಲ್ಯ ಸರ ತೆಗೆಸಿದ್ದರು ಎಂದು ಕಿಡಿ ಕಾರಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:48 pm, Fri, 24 April 26

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ