ಬೆಂಗಳೂರು: ಕೆಇಎ ಯಡವಟ್ಟಿಗೆ ವಿದ್ಯಾರ್ಥಿಗಳ ಭವಿಷ್ಯ ಅಡಕತ್ತರಿಗೆ ಸಿಲುಕಿದಂತ್ತಾಗಿದೆ. 24 ಸಾವಿರ ರಿಪೀಟರ್ಸ್ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ. ಕೋರ್ಟ್ ಆದೇಶ ಪ್ರಶ್ನಿಸಿ ಕೆಇಎ ಮತ್ತೆ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಕೆಗೆ ಮುಂದಾಗಿದೆ. ಹೀಗಾಗಿ ಸಿಇಟಿ ರ‍್ಯಾಂಕ್ಕಿಂಗ್ ವಿಚಾರದಲ್ಲಿ ಗೊಂದಲ ಮುಂದುವರೆದಿದೆ. ಸರ್ಕಾರ VS ಸಿಇಟಿ ರಿಪೀಟರ್ಸ್ ವಿದ್ಯಾರ್ಥಿಗಳು ಎನ್ನುವಂತಾಗಿದೆ. ಸಿಇಟಿ ಪುನರಾವರ್ತಿತ ವಿದ್ಯಾರ್ಥಿಗಳ ಪಿಯುಸಿ ಅಂಕ ಪರಿಗಣಿಸಿ ಎಂದು ಹೈಕೋರ್ಟ್ ಆದೇಶ ಮಾಡಿತ್ತು. ಸಿಇಟಿ 75 ಅಂಕ, 25 ಪಿಯುಸಿ ಅಂಕ ಪರಿಗಣಿಸಬಹುದೇ ನೋಡಿ ಎಂದು ಕೋರ್ಟ್ ಸಲಹೆ ನೀಡಿತ್ತು. ಈ ಸಲಹೆಯನ್ನ ಕೆಇಎ ಸುತಾರಂ ಒಪ್ಪಿರಲಿಲ್ಲ. ಈಗ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಕೆಗೆ ನಿರ್ಧಾರ ಮಾಡಲಾಗಿದೆ.
ಸಿಇಟಿ ರ್ಯಾಂಕಿಂಗ್ ವಿವಾದ ಏನು?
ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ 2020-21ನೇ ಸಾಲಿನಲ್ಲಿ ದ್ವಿತೀಯ ಪಿಯು ತೇರ್ಗಡೆಯಾದ ವಿದ್ಯಾರ್ಥಿಗಳು ಗಳಿಸಿದ ಶೇ 50 ಹಾಗೂ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿಇಟಿ) ಪಡೆದ ಶೇ 50ರಷ್ಟು ಅಂಕಗಳನ್ನು ಪರಿಗಣಿಸಿ ಹೊಸದಾಗಿ ರ‍್ಯಾಂಕ್ ಪಟ್ಟಿ ಪ್ರಕಟಿಸಬೇಕು ಎಂದು ಹೈಕೋರ್ಟ್ ಹೇಳಿತ್ತು. ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ 2020-21ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸಲಾಗದು ಎಂದು 2022 ಜುಲೈ 30ರಂದು ಕೆಇಎ ಆದೇಶ ಹೊರಡಿಸಿತ್ತು.
ಹಾಗಿದ್ರೆ ಈ ವಿಚಾರವಾಗಿ ಕೆಇಎ ಹೇಳುವುದು ಏನು?
ನ್ಯಾಯಾಲಯದ ಮೊರೆ ಹೋದವರು ತಾಂತ್ರಿಕ ಅಂಶಕ್ಕೆ ಬದ್ಧರಾಗಿದ್ದಾರೆ. ಕಳೆದ ವರ್ಷ ಸಾಂಕ್ರಾಮಿಕ ರೋಗದ ದೃಷ್ಟಿಯಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಹೈಕೋರ್ಟ್‌ನ ಹಿಂದಿನ ಆದೇಶ ಜಾರಿಯಾದ್ರೆ 3 ಲಕ್ಷ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಕಳೆದ ವರ್ಷದ ವಿದ್ಯಾರ್ಥಿಗಳ ಪಿಯು ಅಂಕಗಳನ್ನು ಪರಿಗಣನೆಗೆ ತೆಗೆದುಕೊಂಡರೆ, ಈ ವರ್ಷದ ವಿದ್ಯಾರ್ಥಿಗಳು ಗಳಿಸಿದ ರ‍್ಯಾಂಕಿಂಗ್ ಗಣನೀಯ ಕುಸಿಯುತ್ತೆ. ಸಾಂಕ್ರಾಮಿಕ ರೋಗದಿಂದಾಗಿ ಕಳೆದ ವರ್ಷ ಪರೀಕ್ಷೆಗಳು ನಡೆಯದ ಕಾರಣ ಎಲ್ಲಾ ವಿದ್ಯಾರ್ಥಿಗಳು ತಮ್ಮ SSLC ಮತ್ತು 1st Puc ಅಂಕಗಳ ಆಧಾರದ ಮೇಲೆ ಉತ್ತೀರ್ಣರಾಗಿದ್ದಾರೆ. ಇದರಿಂದ ಹೆಚ್ಚಿನ ವಿದ್ಯಾರ್ಥಿಗಳು ಶೇ. 90ರಿಂದ 95ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾರೆ.
ಹೈಕೋರ್ಟ್ ಹೇಳಿದ್ದೇನು?
ಇತರ ಪದವಿ ಪೂರ್ವ ಕೋರ್ಸ್‌ಗಳಿಗೆ ಪಿಯು ಅಂಕಗಳನ್ನು ಪರಿಗಣಿಸುವ ನಿರ್ಧಾರವು ಎಂಜಿನಿಯರಿಂಗ್ ಮತ್ತು ತಾಂತ್ರಿಕ ಕೋರ್ಸ್‌ಗಳಿಗೆ ಅನ್ವಯಿಸುವುದಿಲ್ಲ. ಇದು ತಾರತಮ್ಯ, ಅನಿಯಂತ್ರಿತ ಮತ್ತು ಅಭ್ಯರ್ಥಿಗಳಿಗೆ ಅನ್ಯಾಯ ಮತ್ತು ಅಸಮಂಜಸವಾಗಿದೆ. ಈ ನಿರ್ಧಾರವನ್ನು ಪುನರಾವರ್ತಿತರಿಗೆ ಮುಂಚಿತವಾಗಿ ತಿಳಿಸಲು ಕೆಇಎ ವಿಫಲವಾದ ಕಾರಣ ಅವರು ಅರ್ಹತಾ ಪರೀಕ್ಷೆಯನ್ನು ಮರುಪಡೆಯುವ ಅವಕಾಶವನ್ನು ತಡೆಯಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 12:02 pm, Fri, 9 September 22