CET Ranking: ಸಿಇಟಿ ಪರಿಷ್ಕೃತ ರಾಂಕಿಂಗ್ ಶನಿವಾರ ಪ್ರಕಟ
ಇಂದು ಮಧ್ಯಾಹ್ನ 2 ಗಂಟೆಗೆ ಸಿಇಟಿ ಪರಿಷ್ಕೃತ ರಾಂಕಿಂಗ್ ಪಟ್ಟಿ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ.
ಬೆಂಗಳೂರು: ಹೈಕೋರ್ಟ್ ಆದೇಶವನ್ನು ಮನ್ನಿಸಿ ಸಿದ್ಧಪಡಿಸಿರುವ ಸಿಇಟಿ ಪರಿಷ್ಕೃತ ರಾಂಕಿಂಗ್ ಪಟ್ಟಿಯನ್ನು ಶನಿವಾರ (ಅಕ್ಟೋಬರ್ 1) ಮಧ್ಯಾಹ್ನ 2 ಗಂಟೆಗೆ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ. ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ karresults.nic.in ನಲ್ಲಿ ನೋಡಬಹುದು ಎಂದು ತಿಳಿಸಿದ್ದಾರೆ. ಅಕ್ಟೋಬರ್ 3 ರಿಂದ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭವಾಗಲಿದೆ.
ಫಲಿತಾಂಶ ವೀಕ್ಷಿಸುವುದು ಹೇಗೆ?
- ಮೊದಲು kea.kar.nic.in ಗೆ ಭೇಟಿ ನೀಡಿ.
- ಕೆಸಿಇಟಿ ಪರಿಷ್ಕೃತ ಫಲಿತಾಂಶ 2022 ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನೋಂದಣಿ ಸಂಖ್ಯೆಯನ್ನು ನಮೂದಿಸಿ.
- ನಂತರ Submit ಮೇಲೆ ಕ್ಲಿಕ್ ಮಾಡಿ.
- ಕರ್ನಾಟಕ ಸಿಇಟಿ ಪರಿಷ್ಕೃತ ರಾಂಕಿಂಗ್ 2022 ಪರದೆಯ ಮೇಲೆ ಕಾಣಿಸುತ್ತದೆ.
- ನಂತರ ಪ್ರಿಂಟ್‌ಔಟ್ ತೆಗೆದುಕೊಳ್ಳಬಹುದು
ಪುನಾರಾವರ್ತಿತರ 2021ನೇ ಸಾಲಿನ ಪಿಯು ಅಂಕಗಳನ್ನು 2022ನೇ ಸಾಲಿನ ಸಿಇಟಿಗೆ ಪರಿಗಣಿಸುವ ವಿಚಾರದಲ್ಲಿ ಸಮಸ್ಯೆ ಉದ್ಭವಿಸಿತ್ತು. ಈ ಕುರಿತು ಸಿಇಟಿ ರ್ಯಾಂಕಿಗ್ನಲ್ಲಿ ಪುನರಾವರ್ತಿತ ವಿದ್ಯಾರ್ಥಿಗಳ ಪಿಯು ಅಂಕ ಪರಿಗಣಿಸಲ್ಲವೆಂದು ಜುಲೈ 30ರಂದು ಆದೇಶ ಹೊರಡಿಸಿತ್ತು. ರಾಜ್ಯ ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಪುನರಾವರ್ತಿತ ವಿದ್ಯಾರ್ಥಿಗಳು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ ಪುನರಾವರ್ತಿತ ವಿದ್ಯಾರ್ಥಿಗಳ ಪಿಯುಸಿ ಅಂಕವನ್ನು ಪರಿಗಣಿಸುವಂತೆ ಆದೇಶ ನೀಡಿತ್ತು. ಇದನ್ನೂ ಓದಿ: ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್! ಇಂದಿನಿಂದ ಪರಿಷ್ಕೃತ ವಿದ್ಯುತ್ ದರ ಜಾರಿ
ಹೈಕೋರ್ಟ್ 2020-21ನೇ ಸಾಲಿನ ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆಯಾಗಿದ್ದ, ಸಿಇಟಿ ಪರೀಕ್ಷೆಗೆ ಪುನರಾವರ್ತಿತರಾಗಿರುವ ಅಭ್ಯರ್ಥಿಗಳಿಗೆ ವೃತ್ತಿಪರ ಕೋರ್ಸ್ಗಳ ಸೀಟು ಹಂಚಿಕೆ ಮಾಡುವಾಗ ದ್ವಿತೀಯ ಪಿಯುಸಿಯಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳನ್ನು ಸಹ ಪರಿಗಣಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್ ಆದೇಶ ನೀಡಿತ್ತು.
ಆದರೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸರ್ಕಾರ ಹೈಕೋರ್ಟ್ ಮೇಲ್ಮನವಿ ಸಲ್ಲಿಸಲು ಮುಂದಾಗಿತ್ತು. ಸರ್ಕಾರದ ಈ ನಿರ್ಧಾರಕ್ಕೆ ಪುನರಾವರ್ತಿತ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಆಕ್ರೋಶ ವ್ಯಕ್ತಪಡಿಸಿದರು. ನಿಮ್ಮ ಶಿಕ್ಷಣ ಇಲಾಖೆ ನೀಡಿದ ಪಿಯು ಬೋರ್ಡ್ ಅಂಕಪಟ್ಟಿಯನ್ನೇ ಪರಿಗಣಿಸೊಲ್ಲ ಅಂದರೆ ಹೇಗೆ? ಒಂದು ವರ್ಷ ಮಕ್ಕಳಿಗೆ ಪ್ಲೇಸ್ಮೆಂಟ್ ಇಲ್ಲದಂತಾಗುತ್ತೆ. ಇದಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವೇ ನೇರ ಹೊಣೆಯಾಗುತ್ತೆ ಎಂದು ಎಚ್ಚರಿಕೆ ನೀಡಿದರು.
ಒಂದು ವರ್ಷ ಮಕ್ಕಳ ಭವಿಷ್ಯ ಹಾಳಾಗುತ್ತೆ. ಕೋರ್ಟ್ ಆದೇಶವನ್ನ ಪಾಲಿಸದೆ ಮೇಲ್ಮನವಿ ಸಲ್ಲಿಸಿದರೆ ಕೋರ್ಟ್ ಆದೇಶಕ್ಕೂ ಬೆಲೆ ಇಲ್ವಾ ? ಸಾವಿರಾರು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಬೇಡಿ. ನಾವೂ ಕಾನೂನಾತ್ಮಕವಾಗಿ ಹೋರಾಟಕ್ಕೆ ಮುಂದಾಗುತ್ತೇವೆ. ಯಾವ ಮಕ್ಕಳಿಗೂ ಅನ್ಯಾಯವಾಗದಂತೆ ಸಮಿತಿ ರಚಿಸಿ ಎಂದು ಆಗ್ರಹಿಸಿದ್ದರು. ಇದನ್ನೂ ಓದಿ: ರೂಪೇಶ್ ಶೆಟ್ಟಿ-ಸಾನ್ಯಾ ಮಧ್ಯೆ ಬಂದ ಕಾವ್ಯಶ್ರೀ ಗೌಡ; ಐಯ್ಯರ್ ಕಣ್ಣಲ್ಲಿ ತುಂಬಿತು ನೀರು
ಈ ಸಂಬಂಧ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ.ಬಿ. ತಿಮ್ಮೇಗೌಡ ಅಧ್ಯಕ್ಷತೆಯಲ್ಲಿ ಐವರ ಸಮಿತಿ ರಚಿಸಿತ್ತು. ಸಮಿತಿ ವರದಿಯನ್ನು ಸಿದ್ದಪಡಿಸಿತ್ತು. ವರದಿಯನ್ನು ಸರ್ಕಾರದ ಪರ ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ ಮುಚ್ಚಿದ ಲಗೋಟೆಯಲ್ಲಿ ಇಂದು ಹೈಕೋರ್ಟ್‌ಗೆ ವರದಿಯನ್ನು ನೀಡಿದರು.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 8:12 am, Sat, 1 October 22