ಸಂಸ್ಕೃತಿಯ ಬಗ್ಗೆ ಮಾತಾಡೋರು ಹೆಣ್ಮಕ್ಕಳ ಮೇಲೆ ಹಲ್ಲೆ ಮಾಡ್ತಿದ್ದಾರೆ: ಸಿಎಫ್​ಐ ಆಕ್ರೋಶ

ಹಿಜಾಬ್ ಧರಿಸುತ್ತಿದ್ದ ಆರು ವಿದ್ಯಾರ್ಥಿಗಳ ಪೈಕಿ ಮೂವರು ಹಿಜಾಬ್ ತೆಗೆಯಲು ಒಪ್ಪಿದ್ದಾರೆ ಎಂಬ ಸಚಿವ ಸುನೀಲ್ ಕುಮಾರ್ ಹೇಳಿಕೆ ಕೂಡ ಹಾಸ್ಯಸ್ಪದ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಹೇಳಿದೆ.

ಸಂಸ್ಕೃತಿಯ ಬಗ್ಗೆ ಮಾತಾಡೋರು ಹೆಣ್ಮಕ್ಕಳ ಮೇಲೆ ಹಲ್ಲೆ ಮಾಡ್ತಿದ್ದಾರೆ: ಸಿಎಫ್​ಐ ಆಕ್ರೋಶ
ಪ್ರಾತಿನಿಧಿಕ ಚಿತ್ರ
Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 08, 2022 | 5:45 PM

ಬೆಂಗಳೂರು: ಸಂಸ್ಕೃತಿಯ ಬಗ್ಗೆ ಮಾತನಾಡುವವರು ಮುಸ್ಲಿಂ ವಿದ್ಯಾರ್ಥಿನಿಯರ ಮೇಲೆ ಹಲ್ಲೆ ಮಾಡುತ್ತಿದ್ದಾರೆ. ಉಡುಪಿ ಶಾಸಕ ರಘುಪತಿ ಭಟ್ ಸುಳ್ಳು ಹೇಳುತ್ತಿದ್ದಾರೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಕರ್ನಾಟಕ ಘಟಕದ ನಾಯಕ ಸರ್ಫರಾಜ್ ಹೇಳಿದರು. ಹಿಜಾಬ್ ಧರಿಸುತ್ತಿದ್ದ ಆರು ವಿದ್ಯಾರ್ಥಿಗಳ ಪೈಕಿ ಮೂವರು ಹಿಜಾಬ್ ತೆಗೆಯಲು ಒಪ್ಪಿದ್ದಾರೆ ಎಂಬ ಸಚಿವ ಸುನೀಲ್ ಕುಮಾರ್ ಹೇಳಿಕೆ ಕೂಡ ಹಾಸ್ಯಸ್ಪದ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಸಂವಿಧಾನವನ್ನೇ ಒಪ್ಪದ ಬಿಜೆಪಿ ಸರ್ಕಾರದ ಸಚಿವರು ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಆರೋಪ ಮಾಡಿದರು. ಎಬಿವಿಪಿ ಹಾಗೂ ಬಜರಂಗದಳ ಕಾರ್ಯಕರ್ತರಿಗೆ ಸರ್ಕಾರವೇ ಕುಮ್ಮಕ್ಕು ಕೊಡುತ್ತಿದೆ ಎಂದು ದೂರಿದರು.

ವಸ್ತ್ರಸಂಹಿತೆಗೆ ನಮ್ಮ ವಿರೋಧ ಇಲ್ಲ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ತನ್ನ ನಿಲುವು ಸ್ಪಷ್ಟಪಡಿಸಿದೆ. ನ್ಯಾಯಾಲಯದಲ್ಲಿ ನಮ್ಮ ಪರವಾಗಿ ತೀರ್ಪು ಬರುವ ನಿರೀಕ್ಷೆಯಿದೆ. ಒಂದು ವೇಳೆ ವ್ಯತಿರಿಕ್ತ ತೀರ್ಪು ಬಂದರೆ ಮುಂದೆ ಏನು ಮಾಡಬೇಕು ಎನ್ನುವ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಸಿಎಫ್​ಐ ನಾಯಕರು ಹೇಳಿದರು.

ಶಾಂತಿ ಕಾಪಾಡಲು ಸಚಿವರ ಮನವಿ
ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದ ಕಾಪಾಡಬೇಕು ಎಂದು ಸಚಿವ ಡಾ.ಅಶ್ವತ್ಥ ನಾರಾಯಣ ರಾಜ್ಯ ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದರು. ಯಾರೂ ಕಾನೂನು ಕೈಗೆತ್ತಿಕೊಳ್ಳಬೇಡಿ. ಈ ವಿಚಾರದ ಬಗ್ಗೆ ಪ್ರಸ್ತುತ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ನ್ಯಾಯಾಲಯದ ತೀರ್ಪಿಗೆ ಸರ್ಕಾರ ಬದ್ಧವಾಗಿರಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: Karnataka Hijab Row: ಜೈ ಶ್ರೀರಾಮ್ ಎಂದ ಯುವಕರೆದುರು ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಬುರ್ಖಾಧಾರಿ ವಿದ್ಯಾರ್ಥಿನಿ

ಇದನ್ನೂ ಓದಿ: Karnataka Hijab Row: ಇತ್ಯರ್ಥವಾಗದ ವಿವಾದ; ಹಿಜಾಬ್ ವಿಚಾರಣೆ ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿದ ಹೈಕೋರ್ಟ್