ಬೆಂಗಳೂರು: ಸರಗಳ್ಳತನ ನಂತರ ಮಲೆ ಮಹದೇಶ್ವರನಿಗೆ ಹರಕೆ ಸಂದಾಯ ಮಾಡಿದ ಆರೋಪಿಗಳು, ಮುಂದೇನಾಯ್ತು?

ಸರಗಳ್ಳತನ ಯಶಸ್ವಿಯಾದರೆ ಮಲೆ ಮಹದೇಶ್ವರನಿಗೆ ಮುಡಿ ಕೊಡುವುದಾಗಿ ಕಳ್ಳರು ಹರಕೆ ಹೊತ್ತಿದ್ದರಂತೆ. ಅದರಂತೆ ಸರ ಕಳ್ಳತನ ಮಾಡಿದ ಕಳ್ಳರು ಬೆಟ್ಟಕ್ಕೆ ಹೋಗಿ ಹರಕೆ ಸಂದಾಯ ಮಾಡಿ ಹೊರಬರುತ್ತಿದ್ದಂತೆ ಆರೋಪಿಗಳನ್ನು ಬೆಂಗಳೂರಿನ ಗಿರಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಸರಗಳ್ಳತನ ನಂತರ ಮಲೆ ಮಹದೇಶ್ವರನಿಗೆ ಹರಕೆ ಸಂದಾಯ ಮಾಡಿದ ಆರೋಪಿಗಳು, ಮುಂದೇನಾಯ್ತು?
ಸರಗಳ್ಳತನ ಮಾಡಿ ಬಂಧಿತರಾಗಿರುವ ಆರೋಪಿಗಳು
Follow us
Prajwal Kumar NY
| Updated By: Rakesh Nayak Manchi

Updated on: Aug 20, 2023 | 4:19 PM

ಬೆಂಗಳೂರು, ಆಗಸ್ಟ್ 20: ಸರಗಳ್ಳತನ (Chain Snatching) ಮಾಡಿದ ನಂತರ ಹೊತ್ತುಕೊಂಡಿದ್ದ ಹರಕೆಯನ್ನು ಸಂದಾಯ ಮಾಡಲು ಕಳ್ಳರು ಮಲೆ ಮಹದೇಶ್ವರನ ಬೆಟ್ಟಕ್ಕೆ (Male Mahadeshwara Hills) ಹೋಗಿ ಮುಡಿಕೊಟ್ಟು ಮಾದೇಶ್ವರನ ದರ್ಶನ ಪಡೆದು ಹೊರಬರುತ್ತಿದ್ದಂತೆ ಬೆಂಗಳೂರಿನ (Bengaluru) ಗಿರಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಮಂಜುನಾಥ್ ಹಾಗೂ ಯತೀಶ್ ಬಂಧಿತ ಆರೋಪಿಗಳಾಗಿದ್ದಾರೆ. ಐಶಾರಾಮಿ ಜೀವನ ನಡೆಸಲು ಆರೋಪಿಗಳು ಸರಗಳ್ಳತನಕ್ಕೆ ಇಳಿದಿದ್ದರು. ಅದರಂತೆ ಸರಗಳ್ಳತನ ಯಶಸ್ವಿಯಾಗಲೆಂದು ಮಲೆ ಮಹದೇಶ್ವರನಿಗೆ ಹರಕೆ ಹೊತ್ತುಕೊಂಡಿದ್ದರಂತೆ. ಅದರಂತೆ ಆಗಸ್ಟ್ 13 ರಂದು ಬೆಳಗಿನ ಜಾವ ಮನೆ ಮುಂದೆ ವಾಕಿಂಗ್ ಮಾಡುತ್ತಿದ್ದ ಶ್ಯಾಮಲ ಎಂಬ ವೃದ್ಧೆಯ ಸರ ಕಳ್ಳತನ ಮಾಡಿ ಪರಾರಿಯಾಗಿದ್ದರು.

ಇದನ್ನೂ ಓದಿ: ಬೆಂಗಳೂರು: ಅಪರಿಚಿತನ ಬಳಿ ಕ್ವಾಟರ್ ಎಣ್ಣೆ ಆಸೆಗೆ ಬಿದ್ದು ಆಟೋ ಕಳ್ಕೊಂಡ ಚಾಲಕ; ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಸರಗಳ್ಳತನ ನಡೆಸಿದ ನಂತರ ಆರೋಪಿ ಮಂಜುನಾಥ್ ತಾನು ಹೊತ್ತುಕೊಂಡಿದ್ದ ಹರಕೆಯನ್ನು ಸಂದಾಯ ಮಾಡಲೆಂದು ಮತ್ತೊಬ್ಬ ಆರೋಪಿ ಯತೀಶ್ ಜೊತೆ ಸೇರಿ ಮಲೆ ಮಹದೇಶ್ವರನ ಬೆಟ್ಟಕ್ಕೆ ಹೋಗಿದ್ದಾರೆ. ಇಬ್ಬರು ಹರಕೆ ಸಂದಾಯ ಮಾಡಿ ಹೊರಬರುತ್ತಿದ್ದಂತೆ ಪೊಲೀಸರ ಕೈಗೆ ಲಾಕ್ ಆಗಿದ್ದಾರೆ.

ವಿಚಾರಣೆ ವೇಳೆ ಆರೋಪಿಗಳು ಬೈಕ್ ಕಳ್ಳತನ ಮಾಡುತ್ತಿದ್ದ ಪ್ರಕರಣಗಳು ಬೆಳಕಿಗೆ ಬಂದಿವೆ. ಅಲ್ಲದೆ, ಕಳವು ಮಾಡಿದ ಬೈಕ್​ನಲ್ಲೇ ಸರಗಳ್ಳತನ ಮಾಡಿರುವ ಬಗ್ಗೆಯೂ ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾರೆ. ಸದ್ಯ ಬಂಧಿತರಿಂದ 25 ಗ್ರಾಂ ತೂಕದ ಚಿನ್ನದ ಸರ ಹಾಗೂ ಮೂರು ಬೈಕ್​ಗಳನ್ನು ಪೊಲೀಸರು ವಶಕ್ಕೆ ಪಡೆದು ಆರೋಪಿಗಳನ್ನು ಪರಪ್ಪನ ಅಗ್ರಹಾರದ ಜೈಲಿಗೆ ಕಳುಹಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ