Crime News: ಬಾಡಿಗೆ ಮನೆ ನೋಡುವ ನೆಪದಲ್ಲಿ ಮಚ್ಚು ತೋರಿಸಿ ಮಹಿಳೆಯ ಕತ್ತಿನಲ್ಲಿದ್ದ ಸರಗಳವು

Karnataka News: ಪಲ್ಸರ್ ಬೈಕಿನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳಿಂದ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ. ಅಮ್ಮನ ಜೊತೆಯಲ್ಲಿದ್ದ ಮಗಳು ಸೌಮ್ಯ (18) ಅವರಿಗೂ ಮಚ್ಚು ತೋರಿಸಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Crime News: ಬಾಡಿಗೆ ಮನೆ ನೋಡುವ ನೆಪದಲ್ಲಿ ಮಚ್ಚು ತೋರಿಸಿ ಮಹಿಳೆಯ ಕತ್ತಿನಲ್ಲಿದ್ದ ಸರಗಳವು
ಸರಗಳ್ಳತನ (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: ganapathi bhat

Updated on: Jan 04, 2022 | 9:50 PM

ಬೆಂಗಳೂರು: ಬಾಡಿಗೆ ಮನೆ ನೋಡುವ ನೆಪದಲ್ಲಿ ಮಚ್ಚು ತೋರಿಸಿ ಮಹಿಳೆಯ ಕತ್ತಿನಲ್ಲಿದ್ದ ಸರಗಳನ್ನು ಕದ್ದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕಾಚೋಹಳ್ಳಿ ಎಂಬಲ್ಲಿನ ವೀರಭದ್ರಪ್ಪ ಲೇಔಟ್​ನಲ್ಲಿ ನಡೆದಿದೆ. ಶಾಂತಮ್ಮ (38) ಎಂಬವರು 60 ಗ್ರಾಂ ಮಾಂಗಲ್ಯ ಸರ ಕಳೆದುಕೊಂಡಿದ್ದಾರೆ. ಪಲ್ಸರ್ ಬೈಕಿನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳಿಂದ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ. ಅಮ್ಮನ ಜೊತೆಯಲ್ಲಿದ್ದ ಮಗಳು ಸೌಮ್ಯ (18) ಅವರಿಗೂ ಮಚ್ಚು ತೋರಿಸಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಆನೇಕಲ್: ಆರು ತಿಂಗಳ ಹಿಂದೆ ಮದುವೆಯಾಗಿದ್ದ ಯುವತಿ ಸಾವು ಆರು ತಿಂಗಳ ಹಿಂದೆ ಮದುವೆಯಾಗಿದ್ದ ಯುವತಿ ಅನುಮಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಆನೇಕಲ್ ತಾಲ್ಲೂಕಿನ ರಾಜಾಪುರದಲ್ಲಿ ನಡೆದಿದೆ. ರಾಣಿ (21) ಅನುಮಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ದುರ್ದೈವಿ. ಬೆಂಗಳೂರಿನ ಟೀಚರ್ಸ್ ಕಾಲೋನಿಯ ನಿವಾಸಿಯಾಗಿದ್ದ ರಾಣಿ, ಆರು ತಿಂಗಳ ಹಿಂದೆ ಯಶವಂತ್ ಎಂಬವರನ್ನು ಪ್ರೀತಿಸಿ ಮದುವೆ ಆಗಿದ್ದರು. ರಾಜಾಪುರದ ಯಶ್ವಂತ್ ನನ್ನ ಪ್ರೀತಿಸಿ ಮದುವೆಯಾಗಿದ್ದರು. ಅಂತರ್ಜಾತಿ ವಿವಾಹವಾಗಿದ್ದರು. ಇದೀಗ ಪತ್ನಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಸಾವನ್ನಪ್ಪಿರುವುದು ತಿಳಿದುಬಂದಿದೆ. ಗಂಡನೇ ನೇಣು ಹಾಕಿ ಕೊಲೆ ಮಾಡಿಸಿದ್ದಾನೆ ಎಂದು ಆರೋಪ ಕೇಳಿಬಂದಿದೆ.

ನೇಣು ಹಾಕಿಕೊಂಡರೂ ನೋಡಿಯೂ ಪತಿ ಆಸ್ಪತ್ರೆಗೆ ಕರೆದುಕೊಂಡು ಹೋಗಿಲ್ಲ. ಯುವತಿ ಮನೆಯವರು ಬರುತ್ತಿದ್ದಂತೆ ಎಸ್ಕೇಪ್ ಆಗಿದ್ದಾನೆ ಎಂದು ಮನೆಯ ಬಳಿ ಕುಟುಂಬಸ್ಥರಿಂದ ಆಕ್ರೋಶ ವ್ಯಕ್ತವಾಗಿದೆ. ಕುಟುಂಬಸ್ಥರಿಂದ ಮನೆಯವರು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಸ್ಥಳಕ್ಕೆ dysp ಮಲ್ಲೇಶ್ ಹಾಗೂ ಜಿಗಣಿ ಪೊಲೀಸರ ತಂಡ ಭೇಟಿ ನೀಡಿದೆ.

ಶಿವಮೊಗ್ಗ: ಅಕ್ರಮವಾಗಿ ಶ್ರೀಗಂಧದ ಚಕ್ಕೆಗಳನ್ನು ಕೆತ್ತುತ್ತಿದ್ದವರ ಬಂಧನ ಅಕ್ರಮವಾಗಿ ಶ್ರೀಗಂಧದ ಚಕ್ಕೆಗಳನ್ನು ಕೆತ್ತುತ್ತಿದ್ದ ಅಬ್ದುಲ್ ರಜಾಕ್ ಮತ್ತು ವೆಂಕಟರಮಣ ಎಂಬವರನ್ನು ಬಂಧಿಸಿದ ಘಟನೆ ಸಾಗರ ಅರಣ್ಯ ವಲಯ ಅಧಿಕಾರಿಗಳ ಕಾರ್ಯಾಚರಣೆ ವೇಳೆ ನಡೆದಿದೆ. ಮಂಕೋಡು ಗ್ರಾಮ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ. ಆರೋಪಿಗಳಿಂದ ಐದು ಕಾಲು ಕೆಜಿ ಶ್ರೀಗಂಧದ ಚಕ್ಕೆ, ಒಂದು ಹೀರೋ ಸ್ಪ್ಲೆಂಡರ್ ಬೈಕ್ ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರು: ಅಂಗಡಿ ಮಾಲೀಕರನ್ನ ಬೆದರಿಸಿ ಲಂಚ ಪಡೆಯುತ್ತಿದ್ದ ASI ಬಲೆಗೆ ಅಂಗಡಿ ಮಾಲೀಕರನ್ನ ಬೆದರಿಸಿ ಲಂಚ ಪಡೆಯುತ್ತಿದ್ದ ASI ಬಲೆಗೆ ಬಿದ್ದಿದ್ದಾರೆ. ಬೆಂಗಳೂರಿನ ವೈಟ್​ಫೀಲ್ಡ್​​ ಠಾಣೆ ASI ದೇವರಾಜ್​ ಎಸಿಬಿ ಬಲೆಗೆ ಬಿದ್ದಿದ್ದಾರೆ. ಸ್ಟೀಲ್ ಅಂಗಡಿ ಮಾಲೀಕರನ್ನ ಬೆದರಿಸುತ್ತಿದ್ದ ಎಎಸ್​​ಐ ದೇವರಾಜ, ಬಿಲ್ ನೀಡದೆ ಮಾರಾಟ ಮಾಡುತ್ತಿರಾ ಎಂದು ಬೆದರಿಸಿ ಲಂಚ ಪಡೆಯುತ್ತಿದ್ದ ಎಂದು ತಿಳಿದುಬಂದಿದೆ. 10 ಸಾವಿರ ಲಂಚ ಪಡೆಯುತ್ತಿದ್ದಾಗ ದೇವರಾಜ ಎಸಿಬಿ ಬಲೆಗೆ ಬಿದ್ದಿದ್ದಾರೆ.

ವಿಜಯಪುರ: ನಗರದಲ್ಲಿ ವಾಟರ್​ಬೋರ್ಡ್​​ ಎಇಇ ಎಸಿಬಿ ಬಲೆಗೆ ವಿಜಯಪುರ ನಗರದಲ್ಲಿ ವಾಟರ್​ಬೋರ್ಡ್​​ ಎಇಇ, ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿ ಇಎಎ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. 50,000 ರೂ. ಲಂಚ ಸ್ವೀಕರಿಸುವಾಗ ಎಇಇ ಬಾಬು ನದಾಫ್​ ಎಸಿಬಿ ಬಲೆಗೆ ಬಿದ್ದಿದ್ದಾರೆ. ಗುತ್ತಿಗೆದಾರ ಸಗರ ಎಂಬುವರಿಂದ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ವಾಟರ್​ಬೋರ್ಡ್​​ ಎಇಇ ಬಾಬು ನದಾಫ್​ ರನ್ನು ಎಸಿಬಿ ವಶಕ್ಕೆ ಪಡೆದಿದೆ. ಎಸಿಬಿ DySP ಮಂಜುನಾಥ ಗಂಗಲ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

ಚಿತ್ರದುರ್ಗ: ಕಾರು ಡಿಕ್ಕಿ ಆಗಿ, ಟಾಟಾ ಏಸ್‌ನಲ್ಲಿದ್ದ ಇಬ್ಬರ ಸಾವು ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಪೀಲಾಪುರ ಗ್ರಾಮದ ಬಳಿ ಕಾರು ಡಿಕ್ಕಿ ಆಗಿ, ಟಾಟಾ ಏಸ್‌ನಲ್ಲಿದ್ದ ಇಬ್ಬರ ಸಾವು ಸಂಭವಿಸಿದೆ. ಕರಿಯಮ್ಮ (50), ಧನುಷ್ (3) ಸಾವನ್ನಪ್ಪಿದ್ದು, ಐವರಿಗೆ ಗಾಯವಾಗಿದೆ. ಮೃತರು ಹೊನ್ನೆಕೆರೆ ಗೊಲ್ಲರಹಟ್ಟಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬಾಗಲಕೋಟೆ: ಸ್ನಾನ ಮಾಡಲೆಂದು ನದಿಗೆ ತೆರಳಿದ್ದ ಮಹಿಳೆ ನೀರುಪಾಲು ಸ್ನಾನ ಮಾಡಲೆಂದು ನದಿಗೆ ತೆರಳಿದ್ದ ಮಹಿಳೆ ನೀರುಪಾಲು ಆದ ದುರ್ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕೂಡಲಸಂಗಮದ ನದಿಯಲ್ಲಿ ನಡೆದಿದೆ. ಇಲ್ಲಿನ ಜ್ಯೋತಿ ಬುಡಕಹಳ್ಳಿ (23) ಎಂಬವರು ನೀರುಪಾಲಾಗಿದ್ದಾರೆ. ಗದಗದ ದಾಸರ ಓಣಿಯ ನಿವಾಸಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಹುನಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹಾವೇರಿ: ಬಡಮಲ್ಲಿ ತಾಂಡಾದಲ್ಲಿ ಆಕಸ್ಮಿಕ ಬೆಂಕಿಯಿಂದ ಗುಡಿಸಲು ಭಸ್ಮ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಬಡಮಲ್ಲಿ ತಾಂಡಾದಲ್ಲಿ ಆಕಸ್ಮಿಕ ಬೆಂಕಿಯಿಂದ ಗುಡಿಸಲು ಭಸ್ಮವಾದ ದುರ್ಘಟನೆ ನಡೆದಿದೆ. ಅಂಗನವಾಡಿ ಸಹಾಯಕಿ ವಿನೋದಾಗೆ ಸೇರಿದ ಗುಡಿಸಲು ಭಸ್ಮವಾಗಿದೆ. ವಿನೋದ, ದೇವರ ಫೋಟೋ ಮುಂದೆ ದೀಪ ಹಚ್ಚಿ ಕರ್ತವ್ಯಕ್ಕೆ ತೆರಳಿದ್ದರು. ಈ ವೇಳೆ, ಗುಡಿಸಲಿನಲ್ಲಿದ್ದ 3 ಲಕ್ಷ ನಗದು, 50 ಗ್ರಾಂ ಚಿನ್ನಾಭರಣ ಭಸ್ಮ ಆಗಿದೆ. ಕಾಗಿನೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಆನೇಕಲ್: ಕಾಡಿನಿಂದ‌ ನಾಡಿಗೆ ಬಂದಿದ್ದ ಆನೆಗಳನ್ನು ಹಿಮ್ಮೆಟ್ಟಿಸಿದ ಅರಣ್ಯ ಸಿಬ್ಬಂದಿ ಕಾಡಿನಿಂದ‌ ನಾಡಿಗೆ ಬಂದಿದ್ದ ಆನೆಗಳನ್ನು ಅರಣ್ಯ ಸಿಬ್ಬಂದಿ ಹಿಮ್ಮೆಟ್ಟಿಸಿದ ಘಟನೆ ಆನೇಕಲ್ ಹೊರವಲಯದ ವಣಕನ ಹಳ್ಳಿ ಬಳಿ ಕಾರ್ಯಚರಣೆಯ ವೇಳೆ ನಡೆದಿದೆ. ಸುಮಾರು 15 ಕ್ಕೂ ಹೆಚ್ಚಿದ್ದ ಆನೆಗಳ ಗುಂಪನ್ನು ಅರಣ್ಯ ಸಿಬ್ಬಂದಿ ಹಿಮ್ಮೆಟ್ಟಿಸಿದ್ದಾರೆ. ಹೊಲಕ್ಕೆ ನುಗ್ಗಿ ಬೆಳೆ ನಾಶ ಮಾಡಿದ್ದ ಕಾಡಾನೆ ಗುಂಪನ್ನು ಗ್ರಾಮಸ್ಥರ ಮನವಿಗೆ ಸ್ಪಂದಿಸಿ, ಕಾಡಿನ ಕಡೆ ಓಡಿಸಿದ್ದಾರೆ. ಪಾಟಾಕಿ ಸಿಡಿಸಿ ಆನೆಗಳಿಗೆ ಕಾಡಿನ ಕಡೆ ತೆರಳಲು ಅನುವು ಮಾಡಿಕೊಟ್ಟಿದ್ದಾರೆ.

ಇದನ್ನೂ ಓದಿ: Crime News: ಬೆಂಗಳೂರಿನಲ್ಲಿ ಕಳವಾದ ಕಾರು ಫಾಸ್ಟ್​ಟ್ಯಾಗ್ ಸಹಾಯದಿಂದ ಹುಬ್ಬಳ್ಳಿಯಲ್ಲಿ ಪತ್ತೆ!

ಇದನ್ನೂ ಓದಿ: Crime News: ಪ್ರಿಯಕರನೊಂದಿಗೆ ಸೇರಿ ಅತ್ತೆ-ಮಾವನನ್ನೇ ಕೊಂದು, ಸುಟ್ಟು ಹಾಕಿದ ಸೊಸೆ

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ