ಚೈತ್ರಾ ವಂಚನೆ ಕೇಸ್​; ಅಭಿನವ ಹಾಲಶ್ರೀಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು

| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 08, 2023 | 7:02 PM

ಚೈತ್ರಾ ಆ್ಯಂಡ್​ ಗ್ಯಾಂಗ್​ನಿಂದ 5 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯಾದ ಅಭಿನವ ಹಾಲಶ್ರೀ(Abhinava Halashree)ಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಆಗಿದೆ.

ಚೈತ್ರಾ ವಂಚನೆ ಕೇಸ್​; ಅಭಿನವ ಹಾಲಶ್ರೀಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು
ಅಭಿನವ ಹಾಲಾಶ್ರೀ
Follow us on

ಬೆಂಗಳೂರು, ನ.08: ಚೈತ್ರಾ ಆ್ಯಂಡ್​ ಗ್ಯಾಂಗ್​ನಿಂದ 5 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯಾದ ಅಭಿನವ ಹಾಲಶ್ರೀ(Abhinava Halashree)ಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಆಗಿದೆ. ಹೌದು, ಹೈಕೋರ್ಟ್ ಏಕಸದಸ್ಯ ಪೀಠದಿಂದ ಜಾಮೀನು ಮಂಜೂರು ಮಾಡಲಾಗಿದೆ.

ಇನ್ನು ವಂಚನೆ ಪ್ರಕರಣದಲ್ಲಿ ತನ್ನ ಹೆಸರು ಕೇಳಿಬರುತ್ತಿದ್ದಂತೆಯೇ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಹಾಲಶ್ರೀ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅಕ್ಟೋಬರ್​ 16 ರಂದು ಚೈತ್ರಾ ಮತ್ತು ತಂಡದಿಂದ ಉದ್ಯಮಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದ ಮೂರನೇ ಆರೋಪಿಯಾದ ಅಭಿನವ ಹಾಲಶ್ರೀ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಸಿಸಿಹೆಚ್ 57ನೇ ನ್ಯಾಯಾಲಯ ವಜಾಗೊಳಿಸಿತ್ತು.

ಇದನ್ನೂ ಓದಿ:ಸಿಸಿಬಿ ಕಚೇರಿಗೆ ತನ್ನ ವಕೀಲನೊಂದಿಗೆ ಆಗಮಿಸಿದ ಅಭಿನವ ಹಾಲಶ್ರೀ ಸ್ವಾಮಿಯ ಆಪ್ತ ಮೈಸೂರಿನ ಪ್ರಣವ್

ಜಾಮೀನು ನೀಡದಂತೆ ಆಕ್ಷೇಪಣೆ ಸಲ್ಲಿಸಿದ್ದ ಸಿಸಿಬಿ

ಹೌದು, ಹಾಲಾಶ್ರೀಗೆ ಜಾಮೀನು ನೀಡದಂತೆ ಈ ಹಿಂದೆ ಸಿಸಿಬಿ ಆಕ್ಷೇಪಣೆ ಸಲ್ಲಿಸಿತ್ತು. ಬಳಿಕ ಹಾಲಶ್ರೀ ಪರ ವಕೀಲರು, ವಂಚನೆ ಪ್ರಕರಣದಲ್ಲಿ ಹಾಲಶ್ರೀ ವಿರುದ್ಧ ಯಾವುದೇ ಆರೋಪವಿಲ್ಲ, ಚೈತ್ರಾ ವಿರುದ್ಧ ಮಾತ್ರ ವಂಚನೆ ಆರೋಪವಿದೆ. ಹೀಗಾಗಿ ಅಭಿನವ ಹಾಲಶ್ರೀಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಮನವಿ ಮಾಡಿದ್ದರು. ಈ ಕುರಿತು ಸುದಿರ್ಘ ವಿಚಾರಣೆ ನಡೆಸಿದ್ದ ಕೋರ್ಟ್, ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸಿಸಿಬಿಗೆ ಸೂಚಿಸಿತ್ತು. ಈ ನಡುವೆ ಹಾಲಶ್ರೀಗೆ ನಿರೀಕ್ಷಣಾ ಜಾಮೀನು ನೀಡದಂತೆ ವಂಚನೆಗೆ ಒಳಗಾದ ಉದ್ಯಮಿ ಗೋವಿಂದಬಾಬು ಪೂಜಾರಿ ಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:50 pm, Wed, 8 November 23