ಚೈತ್ರಾ ಆ್ಯಂಡ್ ಗ್ಯಾಂಗ್ ವಂಚನೆ ಪ್ರಕರಣ: 9 ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದ ಸಿಸಿಬಿ
ಚೈತ್ರಾ ಗ್ಯಾಂಗ್ನಿಂದ ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ 9 ಆರೋಪಿಗಳ ವಿರುದ್ಧ ಸಿಸಿಬಿ ಚಾರ್ಜ್ಶೀಟ್ ಸಲ್ಲಿಸಿದೆ. 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದೆ. 75 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಿ ಸುಮಾರು 800 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದೆ. ಪ್ರಮುಖ ಆರೋಪಿ ಚೈತ್ರಾ, ಶ್ರೀಕಾಂತ್, ಗಗನ್ ಕಡೂರ್, ಹಾಲಶ್ರೀ, ಧನರಾಜ್ ಸೇರಿದಂತೆ 9 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.
ಬೆಂಗಳೂರು, ನ.08: MLA ಟಿಕೆಟ್ ಆಮಿಷವೊಡ್ಡಿ ಉದ್ಯಮಿಯಿಂದ 5 ಕೋಟಿ ಹಣ ಪಡೆದು ವಂಚನೆ ಮಾಡಿದ್ದ ಚೈತ್ರಾ (Chaitra) ಗ್ಯಾಂಗ್ ಪ್ರಕರಣ ಸಂಬಂಧ 1ನೇ ಎಸಿಎಂಎಂ ನ್ಯಾಯಾಲಯಕ್ಕೆ 9 ಆರೋಪಿಗಳ ವಿರುದ್ಧ ಸಿಸಿಬಿ (CCB) ಅಧಿಕಾರಿಗಳು ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಚೈತ್ರಾ, ಹಾಲಶ್ರೀ ಸೇರಿ 9 ಮಂದಿ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲಾಗಿದೆ. ಸಿಸಿಬಿ ಅಧಿಕಾರಿಗಳು 75 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಿ ಸುಮಾರು 800 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಡಿಜಿಟಲ್ ಸಾಕ್ಷಿಗಳು, ಬ್ಯಾಂಕ್ ಸ್ಟೇಟ್ ಮೆಂಟ್ಗಳು, ಸಾಂದರ್ಭಿಕ ಸಾಕ್ಷಿಗಳು, ಸ್ವಾಮಿಜಿ ಕಾರು ಚಾಲಕ ಹಣ ಇಟ್ಟು ಹೋಗಿದ್ದ ಬಗ್ಗೆ ಮೈಸೂರು ಮೂಲದ ವ್ಯಕ್ತಿಯು ನೀಡಿದ ಹೇಳಿಕೆ ಸೇರಿದಂತೆ ಸ್ಪಾಟ್ ಮಹಜರ್ ನಡೆಸಿ ಹಣ ಸೀಜ್ ಮಾಡಿದ ಸ್ಥಳಗಳ ಬಗ್ಗೆ ಸಿಸಿಬಿ ಪೊಲೀಸರು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಿದ್ದಾರೆ.
ಸಿಸಿಬಿ ತಂಡ ಚೈತ್ರಾ ವಂಚನೆ ಪ್ರಕರಣದ ತನಿಖೆ ಪೂರ್ಣಗೊಳಿಸಿದ್ದು ಎಂಎಲ್ಎ ಟಿಕೆಟ್ ಡೀಲ್ ಸಂಬಂಧ 68 ಸಾಕ್ಷ್ಯಗಳನ್ನ ಕಲೆ ಹಾಕಿ, 75 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಿ ಸುಮಾರು 800 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದೆ. ಚೈತ್ರಾ ವಂಚನೆ ಪ್ರಕರಣದಲ್ಲಿ ಬರೋಬ್ಬರಿ 4 ಕೋಟಿ 11 ಲಕ್ಷ ರೂಪಾಯಿ ರಿಕವರಿ ಮಾಡಲಾಗಿದೆ. ಬೃಹತ್ ಮೊತ್ತದ ಹಣ ರಿಕವರಿ ಹಿನ್ನಲೆ ಚೈತ್ರಾ ಗ್ಯಾಂಗ್ಗೆ ಸಂಕಷ್ಟ ಕಟ್ಟಿಟ್ಟ ಬುತ್ತಿ. ಪ್ರಮುಖ ಆರೋಪಿ ಚೈತ್ರಾ, ಶ್ರೀಕಾಂತ್, ಗಗನ್ ಕಡೂರ್, ಹಾಲಶ್ರೀ, ಧನರಾಜ್ ಸೇರಿದಂತೆ 9 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.
ಸಿಸಿಬಿ ಪೊಲೀಸರು ದೂರುದಾರ ಗೋವಿಂದ ಬಾಬು ಪೂಜಾರಿ ಬಳಿ ಎಲ್ಲಾ ಆಡಿಯೋ, ವಿಡಿಯೋವನ್ನು ಪಡೆದಿದ್ದಾರೆ. ಆಡಿಯೋ, ವಿಡಿಯೋಗಳ ಬಗ್ಗೆ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಗೋವಿಂದ ಪೂಜಾರಿ ಬಳಿಯೇ ಡೀಲ್ ಸಂಬಂಧ 10 ವಿಡಿಯೋ ಪಡೆಯಲಾಗಿದೆ. ಆರೋಪಿಗಳ ಮೊಬೈಲ್ ಗಳ ಡೇಟಾ ರಿಟ್ರೀವ್ ವರದಿ ಕೂಡ ಉಲ್ಲೇಖಿಸಲಾಗಿದೆ. ಆರೋಪಿಗಳ ಮೊಬೈಲ್ ಚಾಟ್, ಕರೆಗಳ ಸಂಬಂಧ ಡೇಟಾ ರಿಟ್ರೀವ್ ಮಾಡಿ ವರದಿ ಸಲ್ಲಿಸಲಾಗಿದೆ. ಸದ್ಯ ಚೈತ್ರಾ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇನ್ನೂ ಕೂಡ ಜಾಮೀನು ಸಿಗದೇ ಪರದಾಡುತ್ತಿದ್ದಾರೆ.
ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 2:05 pm, Wed, 8 November 23