ಚೈತ್ರಾ ಕುಂದಾಪುರ ವಂಚನೆ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣಗೆ ನೋಟಿಸ್ ನೀಡಲು ಮುಂದಾದ ಸಿಸಿಬಿ
ಚೈತ್ರಾ ಕುಂದಾಪುರ ವಂಚನೆ ಕೇಸ್ ಬಗ್ಗೆ ಇತ್ತೀಚೆಗೆ ಸುದ್ದಿಗೋಷ್ಠಿ ಮಾಡಿದ್ದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ, ವಂಚನೆ ಕೇಸ್ನಲ್ಲಿ ಈವರೆಗೆ ಇಲ್ಲದ ಹೆಚ್ಚಿನ ವಿಚಾರ, ಬೇರೆ ಬೇರೆ ವ್ಯಕ್ತಿಗಳ ಹೆಸರು ಪ್ರಸ್ತಾಪಿಸಿದ್ದರು. ಹಾಗಾಗಿ ಪ್ರಕರಣದ ಬಗ್ಗೆ ಮಾಹಿತಿ ನೀಡುವಂತೆ ನೋಟಿಸ್ ನೀಡಲು ತನಿಖಾಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 21: ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ (Chaitra Kundapura) ಪಕ್ರರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ (M Lakshman) ಗೆ ನೋಟಿಸ್ ನೀಡಲು ಸಿಸಿಬಿಯಿಂದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇತ್ತೀಚೆಗೆ ಚೈತ್ರಾ ಕುಂದಾಪುರ ವಂಚನೆ ಕೇಸ್ ಬಗ್ಗೆ ಸುದ್ದಿಗೋಷ್ಠಿ ಮಾಡಿದ್ದ ಎಂ.ಲಕ್ಷ್ಮಣ, ವಂಚನೆ ಕೇಸ್ನಲ್ಲಿ ಈವರೆಗೆ ಇಲ್ಲದ ಹೆಚ್ಚಿನ ವಿಚಾರ, ಬೇರೆ ಬೇರೆ ವ್ಯಕ್ತಿಗಳ ಹೆಸರು ಪ್ರಸ್ತಾಪಿಸಿದ್ದರು. ಹಾಗಾಗಿ ಪ್ರಕರಣದ ಬಗ್ಗೆ ಮಾಹಿತಿ ನೀಡುವಂತೆ ನೋಟಿಸ್ ನೀಡಲು ತನಿಖಾಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.
ಚೈತ್ರಾ ಕುಂದಾಪುರಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರ ಜೊತೆ ನೇರ ಸಂಪರ್ಕವಿದೆ. ಮಾಜಿ ಸಚಿವ ಸಿ.ಟಿ ರವಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಚಿಂತಕ ಚಕ್ರವರ್ತಿ ಸೂಲಿಬೆಲೆ ಜೊತೆ ಈಕೆಯ ಸಂಬಂಧ ಏನು ಅನ್ನೋದನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದರು.
ಇದನ್ನೂ ಓದಿ: ಬಿಜೆಪಿ ಎಂಎಲ್ಎ ಟಿಕೆಟ್ ವಂಚನೆ: ಇದರಲ್ಲಿ 185 ಕೋಟಿ ರೂ. ವ್ಯವಹಾರ ಆಗಿದೆ; ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ
ಪಿಎಸ್‌ಐ ಹಗರಣಕ್ಕೂ ಚೈತ್ರಾಗೂ ಸಂಬಂಧವಿದೆಯಾ ಎಂಬುವುದರ ಬಗ್ಗೆ ತನಿಖೆಯಾಗಬೇಕು. ಚೈತ್ರಾ ಕುಂದಾಪುರ ಪಿಎಸ್‌ಐ ಸೇರಿದಂತೆ ನಾಲ್ಕಕ್ಕೂ ಹೆಚ್ಚು ಹಗರಣದಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಇದೆ. ಆಕೆಗೆ ಜೈಲಿನಲ್ಲಿರುವ ಕೆಲವರ ಸಂಪರ್ಕ ಇದೆ. ಈ ಬಗ್ಗೆ ನಮ್ಮ ಸರ್ಕಾರ ಪ್ರಾಮಾಣಿಕ ತನಿಖೆ ಮಾಡಿಸುತ್ತದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಹೇಳಿದ್ದರು.
ಚೈತ್ರಾ ಕುಂದಾಪುರ ಭಜರಂಗದಳ ಕಾರ್ಯಕರ್ತೆ ಅಲ್ಲ: ಶರಣ್ ಪಂಪ್ ವೆಲ್
ಮಂಗಳೂರಿನಲ್ಲಿನ ಮಾಧ್ಯದವರೊಂದಿಗೆ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಬಜರಂಗದಳ ಮುಖಂಡ ಶರಣ್ ಪಂಪ್ ವೆಲ್, ಚೈತ್ರಾ ಕುಂದಾಪುರ ಭಜರಂಗದಳ ಕಾರ್ಯಕರ್ತೆ ಅಲ್ಲ. ಚೈತ್ರಾ ಪ್ರಕಾರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಸಿಸಿಬಿ ಕಚೇರಿಗೆ ತನ್ನ ವಕೀಲನೊಂದಿಗೆ ಆಗಮಿಸಿದ ಅಭಿನವ ಹಾಲಶ್ರೀ ಸ್ವಾಮಿಯ ಆಪ್ತ ಮೈಸೂರಿನ ಪ್ರಣವ್
ಚೈತ್ರ ಕುಂದಾಪುರ ನಮ್ಮ ಸಂಘಟನೆಯವರಲ್ಲ. ಉತ್ತಮ ವಾಗ್ಮಿ ಎಂಬ ಕಾರಣಕ್ಕೆ ಭಾಷಣಕ್ಕೆ ಕರೆಸಿಕೊಳ್ಳುತ್ತಿದ್ದೆವು. ಇಂತಹ ಘಟನೆಗಳಿಗೆ ನಮ್ಮ ಸಂಘಟನೆ ಆಸ್ಪದ ಕೊಡುವುದಿಲ್ಲ. ಎರಡು ತಿಂಗಳ ಹಿಂದೆಯೇ ನನ್ನ ಗಮನಕ್ಕೆ ಬಂದಿತ್ತು. ವಜ್ರದೇಹಿ ಮಠದ ಸ್ವಾಮೀಜಿಗಳು ನನ್ನೊಂದಿಗೆ ಈ ವಿಚಾರವನ್ನ ಹಂಚಿಕೊಂಡಿದ್ದರು. ನಿಮ್ಮ ಪಾತ್ರ ಇಲ್ಲವೆಂದ ಮೇಲೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಸ್ವಾಮೀಜಿಯವರಿಗೆ ಹೇಳಿದ್ದೆ. ಈ ರೀತಿ ಪ್ರಕರಣಗಳು ಎಲ್ಲಿ ಕೂಡ ಆಗಬಾರದು ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.