ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಸಾಕ್ಷ್ಯ ಕಲೆ ಹಾಕಿ ಚಾರ್ಜ್ ಶೀಟ್ ಸಲ್ಲಿಸಲು ಮುಂದಾದ ಸಿಸಿಬಿ
ಸಿಸಿಬಿ ಪೊಲೀಸರು ತನಿಖೆ ಪೂರ್ಣಗೊಳಿಸಿ ಚಾರ್ಜ್ ಶೀಟ್ ಸಲ್ಲಿಕೆಗೆ ಸಿದ್ದತೆ ನಡೆಸಿದ್ದಾರೆ. ಚೈತ್ರಾ ಆ್ಯಂಡ್ ಗ್ಯಾಂಗ್ ವಿರುದ್ಧ ದೋಷಾರೋಪಣೆ ಪಟ್ಟಿಗೆ ಸಿದ್ದತೆ ನಡೆದಿದೆ. ಸಿಸಿಬಿ ಮುಂದಿನ ವಾರ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಿದೆ. ಎಂಎಲ್ಎ ಡೀಲ್ ಬಗ್ಗೆ 68 ಸಾಕ್ಷಿಗಳ ಹೇಳಿಕೆ ಪಡೆಯಲಾಗಿದ್ದು ಚಾರ್ಜ್ ಶೀಟ್ ಸಲ್ಲಿಕೆಗೆ ಸಿದ್ದತೆ ನಡೆದಿದೆ.
ಬೆಂಗಳೂರು, ನ.02: ಉಡುಪಿಯ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚಿಸಿದ ಚೈತ್ರಾ ಕುಂದಾಪುರ (Chaitra Kundapura) ಮತ್ತು ಗ್ಯಾಂಗ್ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ (CCB) ತನಿಖೆ ಪೂರ್ಣಗೊಳಿಸಿದೆ. ಎಂಎಲ್ಎ ಟಿಕೆಟ್ ಡೀಲ್ ಸಂಬಂಧ 68 ಸಾಕ್ಷ್ಯಗಳನ್ನ ಕಲೆ ಹಾಕಿದೆ. ತನಿಖೆ ಪೂರ್ಣಗೊಳಿಸಿ ಚಾರ್ಜ್ ಶೀಟ್ ಸಲ್ಲಿಕೆಗೆ ಸಿದ್ದತೆ ನಡೆಸಿದೆ. ಚೈತ್ರಾ ಆ್ಯಂಡ್ ಗ್ಯಾಂಗ್ ವಿರುದ್ಧ ದೋಷಾರೋಪಣೆ ಪಟ್ಟಿಗೆ ಸಿದ್ದತೆ ನಡೆದಿದೆ. ಸಿಸಿಬಿ ಮುಂದಿನ ವಾರ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಿದೆ. ಎಂಎಲ್ಎ ಡೀಲ್ ಬಗ್ಗೆ 68 ಸಾಕ್ಷಿಗಳ ಹೇಳಿಕೆ ಪಡೆಯಲಾಗಿದ್ದು ಚಾರ್ಜ್ ಶೀಟ್ ಸಲ್ಲಿಕೆಗೆ ಸಿದ್ದತೆ ನಡೆದಿದೆ.
ಚೈತ್ರಾ ವಂಚನೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಬರೋಬ್ಬರಿ 4 ಕೋಟಿ 11 ಲಕ್ಷ ರೂ. ಹಣವನ್ನು ರಿಕವರಿ ಮಾಡಿದ್ದಾರೆ. ವಂಚನೆ ಪ್ರಕರಣದಲ್ಲಿ ಬೃಹತ್ ಮೊತ್ತದ ಹಣ ರಿಕವರಿ ಹಿನ್ನಲೆ ಚೈತ್ರಾ ಗ್ಯಾಂಗ್ಗೆ ಸಂಕಷ್ಟ ಕಟ್ಟಿಟ್ಟ ಬುತ್ತಿ. ಪ್ರಮುಖ ಆರೋಪಿ ಚೈತ್ರಾ, ಶ್ರೀಕಾಂತ್, ಗಗನ್ ಕಡೂರ್, ಹಾಲಶ್ರೀ, ಧನರಾಜ್ ಸೇರಿದಂತೆ 7 ಆರೋಪಿಗಳ ವಿರುದ್ಧ ಸಿಸಿಬಿ, ಚಾರ್ಜ್ ಶೀಟ್ಗೆ ತಯಾರಿ ಮಾಡಿಕೊಂಡಿದೆ. ಆರೋಪಿಗಳ ವಂಚನೆ ಕುರಿತಾಗಿ ಪ್ರಾಥಮಿಕ ಸಾಕ್ಷ್ಯ, ಡಿಜಿಟಲ್ ಸಾಕ್ಷ್ಯ, ಸಾಂದರ್ಭಿಕ ಸಾಕ್ಷ್ಯ ಕಲೆಹಾಕಲಾಗಿದೆ.
ಇದನ್ನೂ ಓದಿ: ಚೈತ್ರಾ ವಂಚನೆ ಪ್ರಕರಣ: ಹಾಲಶ್ರೀ ಜಾಮೀನು ಅರ್ಜಿ ವಜಾ
ಇನ್ನು ಸಿಸಿಬಿ ಪೊಲೀಸರು, ದೂರುದಾರ ಗೋವಿಂದ ಬಾಬು ಪೂಜಾರಿ ಬಳಿ ಎಲ್ಲಾ ಆಡಿಯೋ, ವಿಡಿಯೋ ಪಡೆದಿದ್ದಾರೆ. ಈ ಆಡಿಯೋ, ವಿಡಿಯೋಗಳ ಬಗ್ಗೆ ಚಾರ್ಜ್ ಶೀಟ್ನಲ್ಲಿ ಉಲ್ಲೇಖಿಸಿದ್ದಾರೆ. ಗೋವಿಂದ ಪೂಜಾರಿ ಬಳಿಯೇ ಡೀಲ್ ಸಂಬಂಧ 10 ವಿಡಿಯೋ ಪಡೆಯಲಾಗಿದೆ. ಆರೋಪಿಗಳ ಮೊಬೈಲ್ ಗಳ ಡೇಟಾ ರಿಟ್ರೀವ್ ವರದಿ ಕೂಡ ಚಾರ್ಜ್ ಶೀಟ್ನಲ್ಲಿ ಉಲ್ಲೇಖಿಸಲಾಗಿದೆ. ಆರೋಪಿಗಳ ಮೊಬೈಲ್ ಚಾಟ್, ಕರೆಗಳ ಸಂಬಂಧ ಡೇಟಾ ರಿಟ್ರೀವ್ ಮಾಡಲಾಗಿದೆ. ಸದ್ಯ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇನ್ನೂ ಕೂಡ ಜಾಮೀನು ಸಿಗದೇ ಆರೋಪಿಗಳು ಪರದಾಡುತ್ತಿದ್ದಾರೆ. ಇದೇ ವೇಳೆ ಸಿಸಿಬಿ ಪೊಲೀಸರು ಚಾರ್ಜ್ ಶೀಟ್ ಸಿದ್ದಗೊಳಿಸಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ