ತಕ್ಷಣ ಸಿದ್ದರಾಮಯ್ಯನ್ನ ಬಂಧಿಸಿ ನನಗೆ ನ್ಯಾಯ ಕೊಡಿಸಿ; ಸಿದ್ದು ವಿರುದ್ಧ ಜಾತಿ ನಿಂದನೆ ದೂರು ದಾಖಲಿಸಿದ ಛಲವಾದಿ ನಾರಾಯಣಸ್ವಾಮಿ

ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡುವ ಭರದಲ್ಲಿ ಸದಾ ಅಸ್ಪೃಶ್ಯ ಅಂತ ನಮ್ಮ ಜಾತಿ ನಿಂದನೆ ಮಾಡಿದ್ದಾರೆ. ನಮ್ಮ ನಡೆ ಕೇವಲ ರಾಜಕೀಯ ಜಿದ್ದಾ ಜಿದ್ದಿ ವಿಚಾರದಲ್ಲಿ ಮಾತ್ರ. ಸರ್ಕಾರ, ಅಭಿವೃದ್ಧಿ ವಿಚಾರದಲ್ಲಿ ಏನು ಬೇಕಾದ್ರೂ ಹೇಳಲಿ.

ತಕ್ಷಣ ಸಿದ್ದರಾಮಯ್ಯನ್ನ ಬಂಧಿಸಿ ನನಗೆ ನ್ಯಾಯ ಕೊಡಿಸಿ; ಸಿದ್ದು ವಿರುದ್ಧ ಜಾತಿ ನಿಂದನೆ ದೂರು ದಾಖಲಿಸಿದ ಛಲವಾದಿ ನಾರಾಯಣಸ್ವಾಮಿ
ವಿಪಕ್ಷ ನಾಯಕ ಸಿದ್ದರಾಮಯ್ಯ
TV9kannada Web Team

| Edited By: Ayesha Banu

Jun 17, 2022 | 4:10 PM

ಬೆಂಗಳೂರು: ಆಕ್ಷೇಪಾರ್ಹ ಟ್ವೀಟ್ ಆರೋಪದಡಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ(siddaramaiah) ವಿರುದ್ಧ ವಿಧಾನ ಪರಿಷತ್ BJP ಸದಸ್ಯ ಛಲವಾದಿ ನಾರಾಯಣಸ್ವಾಮಿ(Chalavadi Narayanaswamy) ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಿವೆನ್ಷನ್ ಆಫ್ ಅಟ್ರಾಸಿಟಿ 1989 ಕಾಯ್ದೆಯಡಿ ದೂರು ದಾಖಲಾಗಿದೆ. ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯನವರು ʼಅಸ್ಪೃಶ್ಯ- ಗುಲಾಮ ಎಂದು ಉಲ್ಲೇಖಿಸುವ ಮೂಲಕ ನನ್ನ ಜಾತಿಗೆ ಅಪಮಾನ ಮಾಡಿದ್ದಾರೆʼ ಎಂದು ಆರೋಪಿಸಿ ಬಿಜೆಪಿ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ದೂರು ದಾಖಲಿಸಿದ್ದಾರೆ. ಹಾಗೂ ಸಿದ್ದರಾಮಯ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡುವ ಭರದಲ್ಲಿ ಸದಾ ಅಸ್ಪೃಶ್ಯ ಅಂತ ನಮ್ಮ ಜಾತಿ ನಿಂದನೆ ಮಾಡಿದ್ದಾರೆ. ನಮ್ಮ ನಡೆ ಕೇವಲ ರಾಜಕೀಯ ಜಿದ್ದಾ ಜಿದ್ದಿ ವಿಚಾರದಲ್ಲಿ ಮಾತ್ರ. ಸರ್ಕಾರ, ಅಭಿವೃದ್ಧಿ ವಿಚಾರದಲ್ಲಿ ಏನು ಬೇಕಾದ್ರೂ ಹೇಳಲಿ. ಜನ ಟ್ವೀಟ್ ಮಾಡಿದಾಗ ಅನೇಕ ಟ್ವೀಟ್ ಡಿಲೀಟ್ ಮಾಡಿದ್ದಾರೆ. ಜೂನ್ ಏಳರಂದು ಸಿದ್ದರಾಮಯ್ಯನವರು, ನಾರಾಯಣಸ್ವಾಮಿ ಅವರೇ ನೀವು ಸದಾ ಅಸ್ಪೃಶ್ಯರು ಅಂತ ಹೇಳಿದ್ದಾರೆ. ನಿಮ್ಮ ಗುಲಾಮ ಮನಸ್ಥಿತಿಗೆ ನನ್ನ ಧಿಕ್ಕಾರವಿರಲಿ ಅಂತ ಹೇಳಿದ್ದಾರೆ. ನನ್ನನ್ನು ನಿಂದಿಸುವ ಭರದಲ್ಲಿ ನನ್ನ ಜಾತಿಯನ್ನು ನಿಂದಿಸಿದ್ದಾರೆ. ಈ ವಿಚಾರದಲ್ಲಿ ಅಟ್ರಾಸಿಟಿ ಪ್ರಿವೆನ್ಷನ್ ಆಕ್ಟ್ ಅಡಿ ದೂರು ನೀಡಿದ್ದೇನೆ. ಜಾತಿ ನಿಂದನೆ ಕೇಸ್ ದಾಖಲಿಸಿದ್ದೇನೆ. ಅವರನ್ನು ಅರೆಸ್ಟ್ ಮಾಡಬೇಕಾಗುತ್ತದೆ. ಇದರಲ್ಲಿ ಯಾವುದೇ ತಡ ಮಾಡಿದ್ರೆ ನಾನು ಧರಣಿ ಮಾಡುತ್ತೇನೆ. ಜಾತಿಗೆ ಅಪಮಾನ ಮಾಡುವ ಕೆಲಸ ಮಾಡಿದ್ದಾರೆ ಎಂದು ನಾರಾಯಣಸ್ವಾಮಿ ಸಿದ್ದರಾಮಯ್ಯರ ವಿರುದ್ಧ ದೂರು ದಾಖಲಿಸಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಕ್ರಿಕೆಟ್ ಪ್ರಿಯರಿಗೆ ಸಿಹಿ ಸುದ್ದಿ; ಒಂದೇ ತಂಡದಲ್ಲಿ ಆಡಲಿದ್ದಾರೆ ಕೊಹ್ಲಿ- ಬಾಬರ್! ಪಂದ್ಯ ಯಾವಾಗ ಗೊತ್ತಾ?

ಸಿದ್ದರಾಮಯ್ಯ ವಿರುದ್ಧ ಜಾತಿ ನಿಂದನೆ, ದಲಿತ ವಿರೋಧಿ ಕೇಸ್ ದಾಖಲಿಸಬೇಕು. ದಲಿತ ಮಹಿಳೆ ಮೋಟಮ್ಮ ಅವರು ಅತ್ಮಕಥೆ ಬರೆದಿದ್ದಾರೆ. ನನ್ನ ಬೆಳವಣಿಗೆ ಸಹಿಸದೇ ನನ್ನ ಕಥೆಯನ್ನೇ ಮುಗಿಸಿದ್ದಾರೆ ಅಂತ ಬರೆದಿದ್ದಾರೆ. ರಾಜಕಾರಣ ಬಂದಾಗ ನಮ್ಮ ಪಕ್ಷದ ಸಿದ್ಧಾಂತ ಬೇರೆ, ಕಾಂಗ್ರೆಸ್ ಬೇರೆ. ಕಾಂಗ್ರೆಸ್ ಮನಸ್ಥಿತಿ ದಲಿತ ವಿರೋಧಿ ಮನಸ್ಥಿತಿ ಇದೆ. ಸರ್ಕಾರ ತೀಕ್ಷ್ಣ ಕ್ರಮ ಕೈಗೊಳ್ಳಬೇಕು. ಯಾವುದೇ ತಡಮಾಡದೇ ಸಿದ್ದರಾಮಯ್ಯ ಬಂಧಿಸಿ ನನಗೆ ನ್ಯಾಯ ಕೊಡಿಸಬೇಕು. ಇಲ್ಲದಿದ್ದರೆ ಅಟ್ರಾಸಿಟಿ ಕೇಸಿಗೆ ಅಪಮಾನ ಮಾಡಿದಂತಾಗಲಿದೆ ಎಂದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada