AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ಹಗರಣದಲ್ಲೂ ಪಾದಯಾತ್ರೆ ಮಾಡ್ತೇವೆ- ಛಲವಾದಿ ನಾರಾಯಣಸ್ವಾಮಿ

ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಯಲ್ಲಿ ಭಾರೀ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದ ಹಿನ್ನಲೆ ಬೆಂಗಳೂರಿನಿಂದ ಮೈಸೂರಿನವರೆಗೂ ಬಿಜೆಪಿ-ಜೆಡಿಎಸ್​ ಪಾದಯಾತ್ರೆ ಮಾಡಿ ಯಶಸ್ವಿಯಾಗಿದೆ. ಇದರ ಬೆನ್ನಲ್ಲೆ ಇದೀಗ ಮತ್ತೊಂದು ಪಾದಯಾತ್ರೆಗೆ ಬಿಜೆಪಿ ಸಜ್ಜಾಗಿದೆ. ಈ ಕುರಿತು ಒಂದು ವರದಿ ಇಲ್ಲಿದೆ.

ವಾಲ್ಮೀಕಿ ಹಗರಣದಲ್ಲೂ ಪಾದಯಾತ್ರೆ ಮಾಡ್ತೇವೆ- ಛಲವಾದಿ ನಾರಾಯಣಸ್ವಾಮಿ
ಛಲವಾದಿ ನಾರಾಯಣಸ್ವಾಮಿ
ಪ್ರಸನ್ನ ಗಾಂವ್ಕರ್​
| Edited By: |

Updated on:Sep 11, 2024 | 5:01 PM

Share

ಬೆಂಗಳೂರು, ಸೆ.11: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (muda) ಅಕ್ರಮ ವಿಚಾರವಾಗಿ ಬೆಂಗಳೂರಿನಿಂದ ಮೈಸೂರಿನವರೆಗೂ ಬಿಜೆಪಿ-ಜೆಡಿಎಸ್​ ಪಾದಯಾತ್ರೆ ಮಾಡಿ ಯಶಸ್ವಿಯಾಗಿದೆ. ಇದರ ಬೆನ್ನಲ್ಲೇ ಬಿಜೆಪಿ ಮತ್ತೊಂದು ಪಾದಯಾತ್ರೆಗೆ ಸಜ್ಜಾಗುತ್ತಿದೆ. ಹೌದು, ಈ ಕುರಿತು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ(Chalavadi Narayanaswamy), ‘ ವಾಲ್ಮೀಕಿ ಹಗರಣದಲ್ಲೂ ಪಾದಯಾತ್ರೆ ಮಾಡುತ್ತೇವೆ ಎಂದಿದ್ದಾರೆ.

ಇಂದು(ಬುಧವಾರ) ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ನಾರಾಯಣಸ್ವಾಮಿ, ‘ಹೈಕಮಾಂಡ್ ನಮಗೆ ಸಲಹೆ ನೀಡಿದೆ. ನಾವೂ ಕೂಡ ವಾಲ್ಮೀಕಿ ಹಗರಣದ ವಿಚಾರದಲ್ಲಿ ಪಾದಯಾತ್ರೆ ಮಾಡುತ್ತೇವೆ. ವಾಲ್ಮೀಕಿ ಹಗರಣದಲ್ಲಿ ನಮ್ಮ ಎರಡನೇ ಹಂತದ ಹೋರಾಟ ಶುರುವಾಗಲಿದೆ. ಅದು ಯತ್ನಾಳ್ ಪಾದಯಾತ್ರೆ ಅಂತಲ್ಲ, ನಮ್ಮದೇ ಬಿಜೆಪಿ ಪಾದಯಾತ್ರೆ. ಪಾದಯಾತ್ರೆ ದಿನಾಂಕ‌ ಮತ್ತು ಸ್ವರೂಪದ ಬಗ್ಗೆ ಬಿಜೆಪಿ ನಾಯಕರೆಲ್ಲ ಕೂತು ಚರ್ಚೆ ಮಾಡುತ್ತೇವೆ. ನಮ್ಮೆಲ್ಲ ಸ್ನೇಹಿತರೂ ಕೂಡ ವಾಲ್ಮೀಕಿ ಪಾದಯಾತ್ರೆ ಬಗ್ಗೆ ಚರ್ಚೆ ಮಾಡ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ:ಬಿಜೆಪಿ ಭಿನ್ನಮತಕ್ಕೆ ದಿನಕ್ಕೊಂದು ಆಯಾಮ: ಬಳ್ಳಾರಿ ಪಾದಯಾತ್ರೆಗೆ ಶಾಸಕಾಂಗ ಪಕ್ಷದ ನಾಯಕರಿಂದಲೇ ಬೆಂಬಲ

ಮುಡಾ ಅವ್ಯವಹಾರ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ-ಜೆಡಿಎಸ್ ನಾಯಕರು ಬೆಂಗಳೂರಿನಿಂದ ಮೈಸೂರಿಗೆ ಹಮ್ಮಿಕೊಂಡಿದ್ದ ಪಾದಯಾತ್ರೆ ಆಗಸ್ಟ್​ 8 ರಂದು ಫಲಪ್ರದವಾಗಿತ್ತು. ಬಳಿಕ ಮಾತನಾಡಿದ್ದ ಛಲವಾದಿ ನಾರಾಯಣಸ್ವಾಮಿ ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಡಾ ಪ್ರಕರಣದಲ್ಲಿ ಭಂಡ ಧೈರ್ಯ ಮಾಡುತ್ತಿದ್ದು, ಇದು ಸರಿಯಲ್ಲ. ನೈತಿಕತೆಯ ಹಿನ್ನೆಲೆಯಲ್ಲಿ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದರು. ಇದೀಗ ವಾಲ್ಮೀಕಿ  ಹಗರಣ ಕುರಿತು ಪಾದಯಾತ್ರೆಗೆ ಬಿಜೆಪಿ ಮುಂದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:51 pm, Wed, 11 September 24

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?