ಬೆಂಗಳೂರು, ಸೆ.11: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (muda) ಅಕ್ರಮ ವಿಚಾರವಾಗಿ ಬೆಂಗಳೂರಿನಿಂದ ಮೈಸೂರಿನವರೆಗೂ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಮಾಡಿ ಯಶಸ್ವಿಯಾಗಿದೆ. ಇದರ ಬೆನ್ನಲ್ಲೇ ಬಿಜೆಪಿ ಮತ್ತೊಂದು ಪಾದಯಾತ್ರೆಗೆ ಸಜ್ಜಾಗುತ್ತಿದೆ. ಹೌದು, ಈ ಕುರಿತು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ(Chalavadi Narayanaswamy), ‘ ವಾಲ್ಮೀಕಿ ಹಗರಣದಲ್ಲೂ ಪಾದಯಾತ್ರೆ ಮಾಡುತ್ತೇವೆ ಎಂದಿದ್ದಾರೆ.
ಇಂದು(ಬುಧವಾರ) ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ನಾರಾಯಣಸ್ವಾಮಿ, ‘ಹೈಕಮಾಂಡ್ ನಮಗೆ ಸಲಹೆ ನೀಡಿದೆ. ನಾವೂ ಕೂಡ ವಾಲ್ಮೀಕಿ ಹಗರಣದ ವಿಚಾರದಲ್ಲಿ ಪಾದಯಾತ್ರೆ ಮಾಡುತ್ತೇವೆ. ವಾಲ್ಮೀಕಿ ಹಗರಣದಲ್ಲಿ ನಮ್ಮ ಎರಡನೇ ಹಂತದ ಹೋರಾಟ ಶುರುವಾಗಲಿದೆ. ಅದು ಯತ್ನಾಳ್ ಪಾದಯಾತ್ರೆ ಅಂತಲ್ಲ, ನಮ್ಮದೇ ಬಿಜೆಪಿ ಪಾದಯಾತ್ರೆ.
ಪಾದಯಾತ್ರೆ ದಿನಾಂಕ ಮತ್ತು ಸ್ವರೂಪದ ಬಗ್ಗೆ ಬಿಜೆಪಿ ನಾಯಕರೆಲ್ಲ ಕೂತು ಚರ್ಚೆ ಮಾಡುತ್ತೇವೆ. ನಮ್ಮೆಲ್ಲ ಸ್ನೇಹಿತರೂ ಕೂಡ ವಾಲ್ಮೀಕಿ ಪಾದಯಾತ್ರೆ ಬಗ್ಗೆ ಚರ್ಚೆ ಮಾಡ್ತಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ:ಬಿಜೆಪಿ ಭಿನ್ನಮತಕ್ಕೆ ದಿನಕ್ಕೊಂದು ಆಯಾಮ: ಬಳ್ಳಾರಿ ಪಾದಯಾತ್ರೆಗೆ ಶಾಸಕಾಂಗ ಪಕ್ಷದ ನಾಯಕರಿಂದಲೇ ಬೆಂಬಲ
ಮುಡಾ ಅವ್ಯವಹಾರ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ-ಜೆಡಿಎಸ್ ನಾಯಕರು ಬೆಂಗಳೂರಿನಿಂದ ಮೈಸೂರಿಗೆ ಹಮ್ಮಿಕೊಂಡಿದ್ದ ಪಾದಯಾತ್ರೆ ಆಗಸ್ಟ್ 8 ರಂದು ಫಲಪ್ರದವಾಗಿತ್ತು. ಬಳಿಕ ಮಾತನಾಡಿದ್ದ ಛಲವಾದಿ ನಾರಾಯಣಸ್ವಾಮಿ
‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಡಾ ಪ್ರಕರಣದಲ್ಲಿ ಭಂಡ ಧೈರ್ಯ ಮಾಡುತ್ತಿದ್ದು, ಇದು ಸರಿಯಲ್ಲ. ನೈತಿಕತೆಯ ಹಿನ್ನೆಲೆಯಲ್ಲಿ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದರು. ಇದೀಗ ವಾಲ್ಮೀಕಿ ಹಗರಣ ಕುರಿತು ಪಾದಯಾತ್ರೆಗೆ ಬಿಜೆಪಿ ಮುಂದಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:51 pm, Wed, 11 September 24