AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ​ಗ್ರೀನ್‌ ಸಿಗ್ನಲ್ : ಆದೇಶ ಪಾಲಿಸುವ ಬಗ್ಗೆ ಸಭೆ ನಡೆಸಲಾಗುವುದು- ಸಿಎಂ ಬೊಮ್ಮಾಯಿ

ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್ ಅನುಮತಿ ನೀಡಿದ ವಿಚಾರವಾಗಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೈಕೋರ್ಟ್‌ ಆದೇಶ ಪಾಲಿಸುವ ಬಗ್ಗೆ ಸಭೆ ನಡೆಸಲಾಗುವುದು ಎಂದು ಬೆಂಗಳೂರಿನಲ್ಲಿ ಹೇಳಿದರು.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ​ಗ್ರೀನ್‌ ಸಿಗ್ನಲ್ : ಆದೇಶ ಪಾಲಿಸುವ ಬಗ್ಗೆ ಸಭೆ ನಡೆಸಲಾಗುವುದು- ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Updated By: ವಿವೇಕ ಬಿರಾದಾರ|

Updated on:Aug 26, 2022 | 9:18 PM

Share

ಬೆಂಗಳೂರು: ಚಾಮರಾಜಪೇಟೆಯ (Chamrajpet) ಈದ್ಗಾ ಮೈದಾನದಲ್ಲಿ (Idgah Maidan) ಗಣೇಶೋತ್ಸವ ಆಚರಣೆಗೆ ಹೈಕೋರ್ಟ್ ಅನುಮತಿ ನೀಡಿದ ವಿಚಾರವಾಗಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಹೈಕೋರ್ಟ್‌ (High Court) ಆದೇಶ ಪಾಲಿಸುವ ಬಗ್ಗೆ ಸಭೆ ನಡೆಸಲಾಗುವುದು ಎಂದು ಬೆಂಗಳೂರಿನಲ್ಲಿ ಹೇಳಿದರು. ಚಾಮರಾಜಪೇಟೆಯ ಸರ್ವೆ ನಂಬರ್ 40 ರ ಬಗ್ಗೆ ಸರ್ಕಾರ ಸೂಕ್ತ ನಿರ್ಣಾಯ‌ ಮಾಡಬೇಕು. ದೇಶ ಸರ್ವ ಧರ್ಮಿರ ಇರುವ ನಾಡು, ಎಲ್ಲವೂ ವಿಶ್ಲೇಷಣೆ ಆಗಿದೆ ಎಂದರು.

ಕೋರ್ಟ್ ಆದೇಶದ ಒಂದು ಲೇಟರನ್ ಸ್ಪ್ರೀಟ್ ಎಂದು ಕರೆಯುತ್ತೇವೆ. ಸಂಪೂರ್ಣವಾಗಿ ಆದೇಶ ಪರಿಪಾಲನೆ ಹೇಗೆ ಮಾಡಬೇಕು ಎಂದು ಸಭೆ ಮಾಡುತ್ತೇವೆ. ಅಡ್ವೆಕೇಟ್ ಜನರಲ್, ಕಂದಾಯ ಸಚಿವರು, ಕುಳಿತು ಮುಂದೆ ಯಾವ ರೀತಿ‌ ಮಾಡಬೇಕು ಸಭೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಶಾಂತಿ ರೀತಿಯಲ್ಲಿ ಎಲ್ಲರ ಮನದಾಳದ ಇಚ್ಚೆಗಳನ್ನು ಈಡೇರಿಸುವ ಕೆಲಸ ಆಗಬೇಕಿದೆ. ಅದನ್ನು ನಾವು ಮಾಡುತ್ತೇವೆ. ಆದೇಶ ಸಂಪೂರ್ಣ ನೋಡಿ, ಸಭೆ ಮಾಡಿ, ಅದರ ಅನುಗುಣವಾಗಿ ತೀರ್ಮಾನ ಮಾಡುತ್ತೇವೆ. ಹುಬ್ಬಳ್ಳಿ ಈದ್ಗಾ ಮೈದಾನದ ಕುರಿತು ಮಹಾನಗರಪಾಲಿಕೆಯವರು ಸರ್ವ ಪಕ್ಷದ ಕಮಿಟಿ ಮಾಡಿದ್ದಾರೆ ಆ 29 ರಂದು ನಿರ್ಧಾರ ತಿಳಿಸುತ್ತಾರೆ ಎಂದು ಮಾಹಿತಿ ನೀಡಿದರು.

ಟೈಟಲ್ ದೃಷ್ಟಿಯಿಂದ ಆ ವಿಚಾರ ಬೇರೆ, ಈ ವಿಚಾರ ಬೇರೆ. ಇಲ್ಲಿ ಕೋರ್ಟ್ ಆಜ್ಞೆ ಇದೆ, ಅಲ್ಲಿ ಸುಪ್ರೀಂ ಕೋರ್ಟ್ ಆಜ್ಞೆ ಇದೆ. ಎಲ್ಲವೂ ಗಮನಿಸಿ ಕಾನೂನು, ಕೋರ್ಟ್ ಆದೇಶ ಪರಿಪಾಲನೆ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಕನ್ನಡ ವಿಚಾರಕ್ಕೆ ಅನೇಕ ತೀರ್ಮಾನಗಳನ್ನು ನಾವು ಮಾಡಿದ್ದೇವೆ. ಮಾತೃಭಾಷೆಯನ್ನು ಡಿಗ್ರಿಯಲ್ಲಿ‌ ಮತ್ತು ವೃತ್ತಿ ಶಿಕ್ಷಣದಲ್ಲಿ ಪ್ರಥಮವಾಗಿ ಅಳವಡಿಸಿದ್ದೇವೆ. ಕನ್ನಡದಲ್ಲಿ ಇಂಜಿಯನಿರಿಂಗ್ ಬರೆದಿದ್ದಾರೆ. ನಾಗಭರಣ ಅವರು ಭಾಷಾ ಸಮಗ್ರ ಅಭಿವೃದ್ಧಿ ಬಿಲ್‌ ಸಿದ್ಧಪಡಿಸಿದ್ದಾರೆ. ಅದನ್ನು ಮುಂದಿನ ಅಸೆಂಬ್ಲಿಯಲ್ಲಿ ಇಡುತ್ತೇನೆ. ವಿಧಾನಸಭೆಯಲ್ಲಿ ಎಷ್ಟು ಚರ್ಚೆ ಆಗುತ್ತೆ, ಬಿಡುತ್ತೆ ಅದು ಬೇರೆ ಭಾಗ. ಎಲ್ಲಾ ಸಾಹಿತ್ಯ ಆಸಕ್ತರಲ್ಲಿ ಇದು ಚರ್ಚೆ ಆಗಬೇಕು ಎಂದು ನುಡಿದರು.

ಚರ್ಚೆಗೆ ಅವಕಾಶ ಮಾಡಿಕೊಡೋಣ. ಸುಧಾರಣೆಗಳ ಬಂದರೆ ಅಳವಡಿಸಿಕೊಳ್ಳೋಣ. ನವೆಂಬರ್ 11,12,13 ರಂದು ಹಾವೇರಿಯಲ್ಲಿ ಮೂರು ದಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತದೆ ಎಂದು ತಿಳಿಸಿದ್ದಾರೆ.

Published On - 9:10 pm, Fri, 26 August 22

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​