ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಅನುಮತಿ ನೀಡುವಂತೆ ನಾಗರಿಕ ಒಕ್ಕೂಟದಿಂದ ಸರ್ಕಾರಕ್ಕೆ ಡೆಡ್​ ಲೈನ್

| Updated By: ವಿವೇಕ ಬಿರಾದಾರ

Updated on: Jan 15, 2023 | 12:23 PM

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಜನವರಿ 21ರೊಳಗೆ ಅನುಮತಿ ನೀಡುವಂತೆ ಚಾಮರಾಜಪೇಟೆ ನಾಗರಿಕ ಒಕ್ಕೂಟ ಮತ್ತು ಹಿಂದೂಪರ ಸಂಘಟನೆಗಳು ರಾಜ್ಯ ಸರ್ಕಾರಕ್ಕೆ ಡೆಡ್ ಲೈನ್ ಕೊಟ್ಟಿವೆ.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಅನುಮತಿ ನೀಡುವಂತೆ ನಾಗರಿಕ ಒಕ್ಕೂಟದಿಂದ ಸರ್ಕಾರಕ್ಕೆ ಡೆಡ್​ ಲೈನ್
ಚಾಮರಾಜಪೇಟೆ ಈದ್ಗಾ ಮೈದಾನ
Follow us on

ಚಾಮರಾಜಪೇಟೆ: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ (Idgah maidan) ಗಣರಾಜ್ಯೋತ್ಸವ (Repubicday) ಆಚರಣೆಗೆ ಜನವರಿ 21ರೊಳಗೆ ಅನುಮತಿ ನೀಡುವಂತೆ ಚಾಮರಾಜಪೇಟೆ (Chamrajpet) ನಾಗರಿಕ ಒಕ್ಕೂಟ ಮತ್ತು ಹಿಂದೂಪರ ಸಂಘಟನೆಗಳು ರಾಜ್ಯ ಸರ್ಕಾರಕ್ಕೆ ಡೆಡ್ ಲೈನ್ ಕೊಟ್ಟಿವೆ. ಇಲ್ಲವಾದರೆ ಜ.26 ರಂದು ಮೈದಾನಕ್ಕೆ ನುಗ್ಗಿ ತ್ರಿವರ್ಣ ಧ್ವಜ ಹಾರುಸೋದಾಗಿ ಎಚ್ಚರಿಕೆ ನೀಡಿವೆ. ಸುಪ್ರೀಂ ಕೋರ್ಟಿನ ನಿರ್ದೇಶನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಆಚರಣೆಗೆ ಅನುಮತಿ ಇದೆ. ಹೀಗಿದ್ದರೂ ಸರ್ಕಾರ ಮೌನವಾಗಿರೋದಕ್ಕೆ ನಾಗರಿಕ ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದೆ.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಅನುಮತಿ ನೀಡುವಂತೆ ನಾಗರಿಕ ಒಕ್ಕೂಟ ಮತ್ತು ಹಿಂದೂಪರ ಸಂಘಟನೆಗಳು ಈಗಾಗಲೇ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಅನುಮತಿ ಕೋರಿ ಪತ್ರ ಬರೆದಿವೆ. ಒಕ್ಕೂಟ ಮತ್ತು ಸಂಘಟನೆಗಳ ಮನವಿ ಮಾಡಿದ ಹಿನ್ನೆಲೆ ಜಿಲ್ಲಾಧಿಕಾರಿ ದಯಾನಂದ್ ಸರ್ಕಾರಕ್ಕೆ ಪತ್ರ ಬರೆದ್ದಾರೆ. ಆದರೆ ಸರ್ಕಾರ ಈವರೆಗೂ ಯಾವುದೇ ನಿರ್ದೇಶನ ನೀಡಿಲ್ಲ ಎಂದು ಚಾಮರಾಜಪೇಟೆ ನಾಗರಿಕ ಒಕ್ಕೂಟದ ಅಧ್ಯಕ್ಷ ರಾಮೇಗೌಡ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ