ಚಾಮರಾಜಪೇಟೆ ಈದ್ಗಾ ಮೈದಾನದ ಮಾಲೀಕತ್ವ ವಿವಾದ: ಬಿಬಿಎಂಪಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ವಕ್ಫ್ ಬೋರ್ಡ್

| Updated By: ವಿವೇಕ ಬಿರಾದಾರ

Updated on: Aug 24, 2022 | 10:34 PM

ಚಾಮರಾಜಪೇಟೆ ಈದ್ಗಾ ಮೈದಾನದ ಮಾಲೀಕತ್ವ ವಿವಾದ ಸಂಬಂಧ ಬಿಬಿಎಂಪಿ ಆದೇಶ ಪ್ರಶ್ನಿಸಿ ವಕ್ಫ್ ಬೋರ್ಡ್ ಹೈಕೋರ್ಟ್ ಮೆಟ್ಟಿಲೇರಿದೆ.

ಚಾಮರಾಜಪೇಟೆ ಈದ್ಗಾ ಮೈದಾನದ ಮಾಲೀಕತ್ವ ವಿವಾದ: ಬಿಬಿಎಂಪಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ವಕ್ಫ್ ಬೋರ್ಡ್
ಚಾಮರಾಜಪೇಟೆ ಈದ್ಗಾ ಮೈದಾನ​
Follow us on

ಬೆಂಗಳೂರು: ಚಾಮರಾಜಪೇಟೆ (Chamrajpet) ಈದ್ಗಾ ಮೈದಾನದ (Idgah Maidan) ಮಾಲೀಕತ್ವ ವಿವಾದ ಸಂಬಂಧ ಬಿಬಿಎಂಪಿ (BBMP) ಆದೇಶ ಪ್ರಶ್ನಿಸಿ ವಕ್ಫ್ ಬೋರ್ಡ್ ಹೈಕೋರ್ಟ್ ಮೆಟ್ಟಿಲೇರಿದೆ. ಬಿಬಿಎಂಪಿ ಮೈದಾನದ ಮಾಲೀಕತ್ವ ಕಂದಾಯ ಇಲಾಖೆಯದ್ದು ಆಗಸ್ಟ್ 6ರಂದು ಎಂದು ಬಿಬಿಎಂಪಿ ಹೇಳಿತ್ತು. ಈ ಸಂಬಂಧ ಆದೇಶ ರದ್ದುಪಡಿಸುವಂತೆ ವಕ್ಫ್ ಬೋರ್ಡ್ ಹೈಕೋರ್ಟ್​ಗೆ ಮನವಿ ಮಾಡಿದೆ. ವಕ್ಫ್ ಬೋರ್ಡ್ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಯನ್ನು ಪ್ರತಿವಾದಿ ಮಾಡಿದೆ.

ರಾಜ್ಯ ಸರ್ಕಾರದ ಮನವಿ ಹಿನ್ನೆಲೆ ಹೈಕೋರ್ಟ್ ನಾಳೆ (ಆಗಸ್ಟ್ 25) ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಲಿದೆ.

ಘಟನೆ ಹಿನ್ನೆಲೆ

ಚಾಮರಾಜಪೇಟೆಯ ಮೈದಾನ ವಿವಾದ ಅಂತ್ಯಗೊಂಡಿದ್ದು, ಅದಿನ್ನು ರಾಜ್ಯ ಸರ್ಕಾರದ ಕಂದಾಯ ಇಲಾಖೆ ಆಸ್ತಿ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ ) ಆಗಸ್ಟ್​ 6 ರಂದು ಆದೇಶ ಹೊರಡಿಸಿತ್ತು.

75ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಜಂಟಿ ಆಯುಕ್ತ ಶ್ರೀನಿವಾಸ್​ ಅವರಿಂದ ಐತಿಹಾಸಿಕ ಆದೇಶ ಪ್ರಕಟ

ಮೈದಾನವನ್ನು ತಮ್ಮ ಹೆಸರಿಗೆ ಖಾತಾ ಇಂಡೀಕರಣಕ್ಕೆ ವಕ್ಫ್​ ಬೋರ್ಡ್​ ಬಿಬಿಎಂಪಿಗೆ ಅರ್ಜಿ ಸಲ್ಲಿಸಿತ್ತು. ವಕ್ಫ್​ ಬೋರ್ಡ್​ ಅರ್ಜಿ ವಜಾಗೊಳಿಸಿದ ಬಿಬಿಎಂಪಿ ಚಾಮರಾಜಪೇಟೆ ಮೈದಾನ ರಾಜ್ಯ ಸರ್ಕಾರದ್ದು ಎಂದು ಆದೇಶ ಹೊರಡಿಸಿದ್ದರು. ಇದರೊಂದಿಗೆ ಚಾಮರಾಜಪೇಟೆ ಜನರ 60 ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಿದಂತಾಗಿದೆ. ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶ್ರೀನಿವಾಸ್​ ಈ ಐತಿಹಾಸಿಕ ಆದೇಶ ಪ್ರಕಟಿಸಿದ್ದರು.

ಎರಡು ತಿಂಗಳ ಕಾಲಾವಕಾಶ ನೀಡಿದರೂ ದಾಖಲೆಗಳನ್ನ ಸಲ್ಲಿಸದ ವಕ್ಪ್ ಬೋರ್ಡ್ 

ವಕ್ಫ್ ಬೋರ್ಡ್ ಎನ್ನುವುದಕ್ಕೆ ದಾಖಲೆ ಕೇಳಿ ವಕ್ಪ್ ಬೋರ್ಡ್ ಗೆ ಜಂಟಿ ಆಯುಕ್ತ ಶ್ರೀನಿವಾಸ್ ನೋಟಿಸ್ ನೀಡಿದ್ದರು. ಆದರೆ ಎರಡು ತಿಂಗಳ ಕಾಲಾವಕಾಶ ನೀಡಿದರೂ ಸಹ ವಕ್ಪ್ ಬೋರ್ಡ್ ದಾಖಲೆಗಳನ್ನ ಬಿಬಿಎಂಪಿಗೆ ಸಲ್ಲಿಕೆ ಮಾಡಿಲ್ಲ. ಅದಾದ ಮೇಲೂ, ಕೆಲ ಮುಸ್ಲಿಂ ವಕೀಲರು ಕೂಡಾ 15 ದಿನ ಕಾಲಾವಕಾಶ ಪಡೆದಿದ್ದರು. ಆದರೆ ಯಾರು ಕೂಡಾ ಮೈದಾನದ ಬಗ್ಗೆ ಸೂಕ್ತ ದಾಖಲೆಗಳನ್ನ ನೀಡದ ಕಾರಣ ಕಾನೂನಾತ್ಮಕವಾಗಿ ಕ್ರಮ ತೆಗೆದುಕೊಂಡು ಬಿಬಿಎಂಪಿ ಜಂಟಿ ಆಯುಕ್ತರು ಇಂದು ಆದೇಶ ಹೊರಡಿಸಿದ್ದಾರೆ.

ಬಿಬಿಎಂಪಿ ಆದೇಶದ ವಿರುದ್ಧ ಕಾನೂನು ಹೋರಾಟ ನಡೆಸ್ತೇವೆ

ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನವನ್ನು ರಾಜ್ಯ ಸರ್ಕಾರದ ಕಂದಾಯ ಇಲಾಖೆ ಆಸ್ತಿ ಎಂದು ಬಿಬಿಎಂಪಿ ನೀಡಿರುವ ಆದೇಶದ ವಿರುದ್ಧ ಕಾನೂನು ಹೋರಾಟ ನಡೆಸ್ತೇವೆ ಎಂದು ವಕ್ಫ್‌ ಬೋರ್ಡ್‌ ಅಧ್ಯಕ್ಷ ಮೌಲಾನಾ ಶಾಫಿ ಸಅದಿ ಹೇಳಿದ್ದರು.

 

Published On - 10:29 pm, Wed, 24 August 22